ಯತ್ನಾಳ್ ಉಚ್ಚಾಟನೆಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮೇ 11ರಂದು ಬೃಹತ್ ಹೋರಾಟಕ್ಕೆ ಕರೆ!

Film 2025 04 04t220359.543

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವುದನ್ನು ಖಂಡಿಸಿ, ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ವಿಜಯಪುರದಲ್ಲಿ ಮೇ 11, 2025ರಂದು ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ. ಪಂಚಮಸಾಲಿ ಸಮುದಾಯ ಸೇರಿದಂತೆ ಎಲ್ಲರಿಗೂ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಸ್ವಾಮೀಜಿ ಕರೆ ನೀಡಿದ್ದಾರೆ.

ಇಂದು ವಿಜಯಪುರದ ಚೆನ್ನಮ್ಮ ಸಭಾಭವನದ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಶಾಸಕ ಯತ್ನಾಳ್ ಅವರ ಪರವಾಗಿ ಧ್ವನಿ ಎತ್ತುವ ನಿರ್ಧಾರ ಕೈಗೊಳ್ಳಲಾಯಿತು. “ಯತ್ನಾಳ್ ಅವರ ಉಚ್ಚಾಟನೆ ಒಪ್ಪಲು ಸಾಧ್ಯವಿಲ್ಲ. ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ” ಎಂದು ಸ್ವಾಮೀಜಿ ಹೇಳಿದರು. ಈ ಸಮಾವೇಶವನ್ನು ‘ವಿರಾಟ್ ರಾಷ್ಟ್ರೀಯ  ‘ ಎಂಬ ಹೆಸರಿನಲ್ಲಿ ವಿಜಯಪುರ ನಗರದಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ 5 ಲಕ್ಷದಿಂದ 10 ಲಕ್ಷ ಜನರು ಭಾಗವಹಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಸಮಾವೇಶಕ್ಕೆ ಮುನ್ನ ವಿಜಯಪುರ ಜಿಲ್ಲೆಯ ಗ್ರಾಮಗಳಲ್ಲಿ ಶಾಸಕ ಯತ್ನಾಳ್ ಪರವಾಗಿ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ಪ್ರವಾಸ ಕೈಗೊಳ್ಳುವ ಯೋಜನೆ ರೂಪಿಸಲಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version