• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ, ಭಯೋತ್ಪಾದಕರು ಮುಸ್ಲಿಮರಲ್ಲ: ಜಮೀರ್ ಅಹ್ಮದ್ ಖಾನ್

ಯಶಸ್ವಿನಿ ಎಂ by ಯಶಸ್ವಿನಿ ಎಂ
November 12, 2025 - 6:03 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (42)

RelatedPosts

ಬೆಂಗಳೂರಿನಲ್ಲಿ ಹೆಂಡತಿಯ ಶೀಲದ ಮೇಲೆ ಅನುಮಾನಗೊಂಡು ಮಚ್ಚಿನಿಂದ ಕೊಚ್ಚಿ ಕೊಂದ ಪತಿ

ಟ್ರಿಪ್‌ಗೆ ಕಾರ್ ಬುಕ್ ಮಾಡೋ ಮುನ್ನ ಎಚ್ಚರ: ಫೇಕ್ ವೆಬ್‌ಸೈಟ್‌‌ನಲ್ಲಿ ಸ್ಕ್ರೀನ್ ಶೇರ್ ಮಾಡಿ OTP ಕೊಟ್ಟ್ರೆ 1.03 ಲಕ್ಷ ಹಣ ವಂಚನೆ

ಚಿಕನ್ ತಿನ್ನೋರೇ ಈ ಸುದ್ದಿ ನೋಡಿ: ಸ್ಟಾರ್ ಅಂಬೂರ್ ಹೋಟೆಲ್‌ನಲ್ಲಿ ಕೊಳೆತ ಮಾಂಸದಿಂದ ಬಿರಿಯಾನಿ ತಯಾರಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್

ADVERTISEMENT
ADVERTISEMENT

ಬೆಂಗಳೂರು, ನವೆಂಬರ್ 12, 2025: ಕರ್ನಾಟಕ ಸರ್ಕಾರದ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದ್ದಾರೆ. ಭಯೋತ್ಪಾದಕರಿಗೆ ಜಾತಿಯೇ ಇಲ್ಲ. ಇಸ್ಲಾಂ ಧರ್ಮದ ಪ್ರಕಾರ ಭಯೋತ್ಪಾದನೆ ಮಾಡುವವನು ಮುಸ್ಲಿಂ ಅಲ್ಲ. ಹಾಗೇನಾದ್ರೂ ಮಾಡಿದ್ರೆ ಅವನು ಹುಳ ಬಿದ್ದು ಸಾಯ್ತಾನೆ” ಎಂದು ತೀವ್ರ ಶಬ್ದಗಳಲ್ಲಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ಲಾಂ ಶಾಂತಿ ಮತ್ತು ಸಹೋದ್ಯೋಗದ ಧರ್ಮವಾಗಿದ್ದು, ಅದರಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದು ದೃಢವಾಗಿ ಹೇಳಿದ್ದಾರೆ.

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಭೀಕರ ಸ್ಪೋಟದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅವರು ಈ ಹೇಳಿಕೆ ನೀಡಿದ್ದಾರೆ. ನವೆಂಬರ್ 10ರಂದು ಕೆಂಪು ಕೋಟೆಯ ಬಳಿ ಸಂಭವಿಸಿದ ಸ್ಪೋಟದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಇದು ದೇಶದ ಭದ್ರತಾ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ಘಟನೆಯನ್ನು ಉಲ್ಲೇಖಿಸಿ ಸಚಿವರು, ಭಯೋತ್ಪಾದನೆ ಯಾವುದೇ ಧರ್ಮಕ್ಕೆ ಸೇರಿದ್ದಲ್ಲ. ಇದು ಮಾನವತೆಯ ವಿರುದ್ಧದ ಅಪರಾಧ. ಇಸ್ಲಾಂ ಧರ್ಮದಲ್ಲಿ ಇಂತಹ ಕೃತ್ಯಗಳಿಗೆ ಸ್ಥಾನವಿಲ್ಲ. ಭಯೋತ್ಪಾದಕರು ಮುಸ್ಲಿಮರಾಗಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕುರಾನ್‌ನಲ್ಲಿ ಯಾರಾದರೂ ಒಬ್ಬ ನಿರಪರಾಧಿಯನ್ನು ಕೊಂದರೆ, ಅದು ಇಡೀ ಮಾನವಜಾತಿಯನ್ನು ಕೊಂದಂತೆ ಎಂದು ಹೇಳಲಾಗಿದೆ. ಇಸ್ಲಾಂ ಶಾಂತಿ, ಕರುಣೆ ಮತ್ತು ನ್ಯಾಯದ ಧರ್ಮವಾಗಿದ್ದು, ಹಿಂಸೆಯನ್ನು ಖಂಡಿಸುತ್ತದೆ. ಆದರೆ ಕೆಲವು ಉಗ್ರಗಾಮಿ ಸಂಘಟನೆಗಳು ಧರ್ಮದ ಹೆಸರಿನಲ್ಲಿ ಹಿಂಸಾಚಾರ ನಡೆಸುತ್ತಿರುವುದು ದುರದೃಷ್ಟಕರ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಇಂತಹವರು ಧರ್ಮದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ. ನಿಜವಾದ ಮುಸ್ಲಿಮರು ಶಾಂತಿಯನ್ನು ಪ್ರೀತಿಸುತ್ತಾರೆ ಎಂದು ತಿಳಿಸಿದ್ದಾರೆ.

ಇದಲ್ಲದೆ, ಬಿಹಾರ ಚುನಾವಣೆಯ ಸಂದರ್ಭದಲ್ಲಿ ನಡೆದ ಸ್ಫೋಟದ ಬಗ್ಗೆಯೂ ಸಂಶಯ ವ್ಯಕ್ತಪಡಿಸಿದ ಸಚಿವ, ನವೆಂಬರ್ 11ಕ್ಕೆ ಬಿಹಾರದಲ್ಲಿ ಚುನಾವಣೆ ನಡೆಯಿತು. ಆದರೆ ಒಂದು ದಿನ ಮುಂಚೆಯೇ ಸ್ಫೋಟ ಸಂಭವಿಸಿತು. ಇದೆಲ್ಲಾ ಹೇಗೆ ? ಯಾರೂ ಒಳ್ಳೆಯದಾಗಲ್ಲ ಎಂದು ಪ್ರಶ್ನಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಇಂತಹ ಘಟನೆಗಳು ರಾಜಕೀಯ ಲಾಭಕ್ಕಾಗಿ ನಡೆಯುತ್ತವೆಯೇ ಎಂಬ ಸಂಶಯವನ್ನು ಮೂಡಿಸಿದ್ದಾರೆ. ಭಯೋತ್ಪಾದನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು. ಇದು ದೇಶದ ಏಕತೆಗೆ ಧಕ್ಕೆ ತರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವರ ಹೇಳಿಕೆಯು ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮುಸ್ಲಿಂ ಸಮುದಾಯದ ನಾಯಕರು ಸಚಿವರ ಹೇಳಿಕೆಯನ್ನು ಸ್ವಾಗತಿಸಿದ್ದು, ಭಯೋತ್ಪಾದನೆಯನ್ನು ಯಾವುದೇ ಧರ್ಮದೊಂದಿಗೆ ಸಂಯೋಜಿಸಬಾರದು ಎಂದು ಒತ್ತಾಯಿಸಿದ್ದಾರೆ. ಇತ್ತೀಚಿಗೆ ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳು ಎಲ್ಲಾ ಸಮುದಾಯಗಳಿಗೂ ಆತಂಕ ಮೂಡಿಸಿವೆ. ದೆಹಲಿ ಸ್ಫೋಟದ ನಂತರ ಕೇಂದ್ರ ಸರ್ಕಾರ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆ ನಡೆಸುತ್ತಿದೆ.

ಜಮೀರ್ ಅಹ್ಮದ್ ಖಾನ್ ಅವರು ಕರ್ನಾಟಕದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿದ್ದು, ಸಮುದಾಯದ ಸಮಸ್ಯೆಗಳ ಬಗ್ಗೆ ಸದಾ ಧ್ವನಿ ಎತ್ತುತ್ತಾರೆ. ಆದರೆ ಭಯೋತ್ಪಾದನೆಯಂತಹ ರಾಷ್ಟ್ರೀಯ ಸಮಸ್ಯೆಗಳಲ್ಲೂ ಅವರ ಸ್ಪಷ್ಟ ನಿಲುವು ಗಮನ ಸೆಳೆಯುತ್ತದೆ. ಎಲ್ಲಾ ಧರ್ಮಗಳು ಶಾಂತಿಯನ್ನು ಕಲಿಸುತ್ತವೆ. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುತ್ತಾರೆ. ಇದನ್ನು ಎಲ್ಲಾ ಸಮುದಾಯಗಳು ಒಗ್ಗೂಡಿ ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 18T125643.108

ರಸ್ತೆ ಬದಿಯಲ್ಲಿ ಚಪ್ಪರಿಸಿ ಪಾನಿಪುರಿ ತಿನ್ನೋರೇ ಎಚ್ಚರಿಕೆ: ಪಾನಿಯಲ್ಲಿ ಈಜಾಡಿದ ಇಲಿ ದರ್ಶನ!

by ಶ್ರೀದೇವಿ ಬಿ. ವೈ
February 18, 2026 - 1:04 pm
0

Untitled design 2026 02 18T125456.065

ಕಂಕಣ ಸೂರ್ಯಗ್ರಹಣದ ಅದ್ಭುತ: ಹಗಲಿನಲ್ಲೇ ಆವರಿಸಿದ ಕತ್ತಲ ದೃಶ್ಯ ಸೆರೆಹಿಡಿದ ಸ್ಯಾಟಲೈಟ್

by ಯಶಸ್ವಿನಿ ಎಂ
February 18, 2026 - 12:59 pm
0

BeFunky collage 2026 02 18T123922.127

ಬೆಂಗಳೂರಿನಲ್ಲಿ ಹೆಂಡತಿಯ ಶೀಲದ ಮೇಲೆ ಅನುಮಾನಗೊಂಡು ಮಚ್ಚಿನಿಂದ ಕೊಚ್ಚಿ ಕೊಂದ ಪತಿ

by ಶ್ರೀದೇವಿ ಬಿ. ವೈ
February 18, 2026 - 12:46 pm
0

Untitled design 2026 02 18T124045.477

10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

by ಯಶಸ್ವಿನಿ ಎಂ
February 18, 2026 - 12:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T120948.813
    ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್
    February 18, 2026 | 0
  • Untitled design 2026 02 18T111201.339
    ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು..! ಹಲ್ಲಿನ ಚಿಕಿತ್ಸೆಗೆ ಹೋದ ಮಹಿಳೆ ಕೋಮಾಗೆ ಶಿಫ್ಟ್‌
    February 18, 2026 | 0
  • Untitled design 2026 02 18T103943.041
    ಬೆಂಗಳೂರು ಚಲೋಗೆ ಬ್ರೇಕ್: ಕೆಲಸಕ್ಕೆ ಗೈರಾದರೆ ಸಂಬಳ ಕಟ್‌-ಎಂಡಿ ಅಕ್ರಂ ಪಾಷಾ ಎಚ್ಚರಿಕೆ
    February 18, 2026 | 0
  • Untitled design 2026 02 18T084229.075
    ಮೊಬೈಲ್ ಬಿಡಿ-ಪುಸ್ತಕ ಹಿಡಿ: ಮಕ್ಕಳ ಮೊಬೈಲ್ ಚಟಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್
    February 18, 2026 | 0
  • Untitled design 2026 02 18T080945.199
    ಲೈಂಗಿಕ ದೌರ್ಜನ್ಯ ಸಂತ್ರಸ್ತರ ಗುರುತು ಬಹಿರಂಗಪಡಿಸಿದರೆ ಶಿಸ್ತು ಕ್ರಮ: ಡಿಜಿಪಿ ಎಂ.ಎ ಸಲೀಂ ಆದೇಶ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version