ನಾಳೆ 17ನೇ ರೋಜ್‌ಗಾರ್‌ ಮೇಳ: 51 ಸಾವಿರ ಯುವಕರಿಗೆ ಉದ್ಯೋಗಾವಕಾಶ

Untitled design 2025 10 23t213459.255

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನಡೆಯಲಿರುವ 17ನೇ ರೋಜ್‌ಗಾರ್‌ ಮೇಳದಲ್ಲಿ ದೇಶದ 40 ವಿವಿಧ ಸ್ಥಳಗಳಲ್ಲಿ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮದ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮತ್ತು ಯುವಜನ ಉದ್ಯೋಗಾವಕಾಶಗಳ ಹಮನ ಕೊಡುತ್ತಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ಚೆನ್ನೈನಲ್ಲಿ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಆಯುಷ್ ಮತ್ತು ಆರೋಗ್ಯ ಖಾತೆ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್ ಅವರು ಮಧುರೈನಲ್ಲಿ ಕಾರ್ಯಕ್ರಮ ನಡೆಸಲಿದ್ದರೆ, ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ತಿರುಚಿರಾಪಳ್ಳಿಯಲ್ಲಿ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಪಾಲುದಾರ ರಾಜ್ಯ ಸರ್ಕಾರಗಳು ಲಕ್ಷಾಂತರ ಉದ್ಯೋಗಾವಕಾಶಗಳ ಸೃಷ್ಟಿ ಮಾಡುವು, ಮಹಿಳೆಯರು, ದಿವ್ಯಾಂಗರು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳ ಅಭ್ಯರ್ಥಿಗಳಿಗೆ ವಿಶೇಷ ಸವಲತ್ತುಗಳು ನೀಡುವುದು, ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು,13 ಪ್ರಾದೇಶಿಕ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ನಡೆಸುವುದು ಮತ್ತು ಯುಪಿಎಸ್ಸಿಯ ‘ಪ್ರತಿಭಾ ಸೇತು’ ಮೂಲಕ ಪ್ರತಿಭಾನ್ವಿತ ಯುವಕರಿಗೆ ಉದ್ಯೋಗಾವಕಾಶಗಳನ್ನ ನೀಡುವುದು ರೋಜ್‌ಗಾರ್‌ ಮೇಳದ ವಿಶೇಷತೆ ಆಗಿದೆ.


ರೋಜ್‌ಗಾರ್‌ ಮೇಳದ ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಕಾಲಮಿತಿಯಲ್ಲಿ ನಡೆಸಲಾಗುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ವಿರುದ್ಧ ಕಠಿಣ ಕಾನೂನುಗಳನ್ನು ಜಾರಿಗೆ ತರಲಾಗಿದೆ. UPSC, SSC, RRB ಮತ್ತು IBPS ನಂತಹ ಪ್ರತಿಷ್ಠಿತ ಏಜೆನ್ಸಿಗಳ ಮೂಲಕ ನೇಮಕಾತಿಗಳನ್ನು ನಡೆಸಲಾಗುತ್ತಿದೆ.

IGOT-ಕರಮಯೋಗಿ ಪೋರ್ಟಲ್ ಮೂಲಕ 3,600 ಕ್ಕೂ ಹೆಚ್ಚು ಉತ್ತಮ ಗುಣಮಟ್ಟದ ಇ-ಲರ್ನಿಂಗ್ ಕೋರ್ಸ್‌ಗಳನ್ನು ಒದಗಿಸಲಾಗುತ್ತಿದೆ. ಈಗಾಗಲೇ 1.39 ಕೋಟಿಗೂ ಹೆಚ್ಚು ಸರ್ಕಾರಿ ನೌಕರರು ಈ ತರಬೇತಿ ಕಾರ್ಯಕ್ರಮಗಳಿಂದ ಲಾಭ ಪಡೆದಿದ್ದಾರೆ.

ರೋಜ್‌ಗಾರ್‌ ಮೇಳ ಯೋಜನೆಯು ಯುವಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಒಂದು ಹೆಜ್ಜೆಯಾಗಿದೆ. ಈ ಕಾರ್ಯಕ್ರಮದ ಮೂಲಕ ಯುವಕರಿಗೆ ನೇರ ಉದ್ಯೋಗಾವಕಾಶಗಳನ್ನು ಒದಗಿಸುವುದರ ಜೊತೆಗೆ, ಅವರ ಸಾಮರ್ಥ್ಯವನ್ನು ಹೆಚ್ಚಿಸಲು ತರಬೇತಿ ನೀಡಲಾಗುತ್ತಿದೆ.

Exit mobile version