• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಜಿತ್ ಪವಾರ್ ಸಾ*ವಿಗೆ ಕಾರಣವಾದ ವಿಮಾನ: 2023 ರಲ್ಲೂ ಅಪಘಾತಕ್ಕೀಡಾಗಿದ್ದ ಲಿಯರ್‌ಜೆಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 11:18 am
in Flash News, ದೇಶ
0 0
0
Untitled design 2026 01 28T111715.697

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಚ್ಚರಿಯ ಸಂಗತಿ ಏನೆಂದರೆ, ಈ ಅಪಘಾತಕ್ಕೀಡಾದ ಲಿಯರ್‌ಜೆಟ್ 45 ಖಾಸಗಿ ವಿಮಾನವು ಈಗಾಗಲೇ 2023ರ ಸೆಪ್ಟೆಂಬರ್ ತಿಂಗಳಲ್ಲಿ ಭೀಕರ ಅಪಘಾತಕ್ಕೀಡಾಗಿತ್ತು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.

ಬುಧವಾರ ಬೆಳಿಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ವಿಮಾನ ನಿಯಂತ್ರಣ ತಪ್ಪಿ ರನ್‌ವೇಯಿಂದ ಜಾರಿ ಪತನಗೊಂಡಿದೆ. ಅಪಘಾತದ ತಕ್ಷಣವೇ ವಿಮಾನಕ್ಕೆ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ವಿಮಾನ ಸಂಪೂರ್ಣವಾಗಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಭೀಕರ ದುರಂತದಲ್ಲಿ ಅಜಿತ್ ಪವಾರ್ ಸೇರಿದಂತೆ ಪೈಲಟ್ ಹಾಗೂ ಇನ್ನಿಬ್ಬರು ಸಿಬ್ಬಂದಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

RelatedPosts

ಬೀದರ್-ಯಶವಂತಪುರ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

ಲಂಚ ಪಡೆಯುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿಗಳು

ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್..ಬೆಳಗಾವಿಯಲ್ಲಿ ಮೂರು ಕಡೆ ದಾಳಿ

ವೆಬ್‌ಸಿರೀಸ್‌ ನೋಡಿ ಪತ್ನಿ ಹ*ತ್ಯೆ: 12.75 ಲಕ್ಷ ರೂ. ಹಣದೊಂದಿಗೆ ಪರಾರಿಯಾದ ಟೆಕ್ಕಿ ಅರೆಸ್ಟ್‌

ADVERTISEMENT
ADVERTISEMENT

ಅಪಘಾತಕ್ಕೀಡಾದ ಈ ಲಿಯರ್‌ಜೆಟ್ 45 ವಿಮಾನವನ್ನು ವಿಎಸ್ಆರ್ ವೆಂಚರ್ಸ್ ಸಂಸ್ಥೆ ನಿರ್ವಹಿಸುತ್ತಿತ್ತು. ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಹವಾಮಾನ ವೈಪರೀತ್ಯ ಹಾಗೂ ತಾಂತ್ರಿಕ ದೋಷಗಳು ಈ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕ ವರದಿಗಳು ಸೂಚಿಸುತ್ತಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ತಾಂತ್ರಿಕ ತಜ್ಞರು ಧಾವಿಸಿದ್ದು, ಶೋಧ ಮತ್ತು ತನಿಖಾ ಕಾರ್ಯಾಚರಣೆ ಮುಂದುವರಿದಿದೆ.

2023ರ ಸೆಪ್ಟೆಂಬರ್‌ನಲ್ಲಿ ನಡೆದಿತ್ತು ಭೀಕರ ಅಪಘಾತ

ಇದೇ ವಿಮಾನವು 2023ರ ಸೆಪ್ಟೆಂಬರ್ 14ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿತ್ತು. ವಿಶಾಖಪಟ್ಟಣಂನಿಂದ ಮುಂಬೈಗೆ ತೆರಳುತ್ತಿದ್ದ ಈ ಖಾಸಗಿ ವಿಮಾನವು ಭಾರೀ ಮಳೆಯ ನಡುವೆಯೇ ಲ್ಯಾಂಡ್ ಆಗಲು ಪ್ರಯತ್ನಿಸಿದ ವೇಳೆ ರನ್‌ವೇಯಿಂದ ಜಾರಿ ಅಪಘಾತಕ್ಕೀಡಾಗಿತ್ತು. ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

ನಾಗರಿಕ ವಿಮಾನಯಾನ ಸಚಿವಾಲಯದ ವರದಿ ಪ್ರಕಾರ, ವಿಮಾನವು ವಿಶಾಖಪಟ್ಟಣಂನಿಂದ ಯಾವುದೇ ತೊಂದರೆ ಇಲ್ಲದೆ ಹೊರಟಿತ್ತು. ಆದರೆ ಮುಂಬೈಗೆ ತಲುಪುವ ವೇಳೆಗೆ ಭಾರೀ ಮಳೆ ಹಾಗೂ ಕಡಿಮೆ ಗೋಚರತೆ ಸಮಸ್ಯೆ ಎದುರಾದ ಕಾರಣ ಲ್ಯಾಂಡಿಂಗ್ ವೇಳೆ ಅಪಘಾತ ಸಂಭವಿಸಿತ್ತು. ರನ್‌ವೇ 27ರಲ್ಲಿ ಇಳಿಯಲು ಅನುಮತಿ ನೀಡಲಾಗಿದ್ದು, ಗಾಳಿಯ ವೇಗ ಮತ್ತು ದಿಕ್ಕು ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಕಠಿಣಗೊಳಿಸಿತ್ತು ಎಂದು ವರದಿ ತಿಳಿಸಿದೆ.

ಆ ವೇಳೆ ವಿಮಾನದಲ್ಲಿ ಆರು ಪ್ರಯಾಣಿಕರು ಹಾಗೂ ಇಬ್ಬರು ಪೈಲಟ್‌ಗಳು ಇದ್ದರು. ಭಾರೀ ಅಪಾಯದಿಂದ ಪಾರಾದರೂ, ವಿಮಾನಕ್ಕೆ ದೊಡ್ಡ ಪ್ರಮಾಣದ ಹಾನಿ ಉಂಟಾಗಿತ್ತು. ಈ ಘಟನೆಯ ನಂತರ ವಿಮಾನದ ತಾಂತ್ರಿಕ ತಪಾಸಣೆ ನಡೆಸಲಾಗಿದರೂ, ಇದೀಗ ಮತ್ತೆ ಅದೇ ವಿಮಾನವು ಭೀಕರ ದುರಂತಕ್ಕೆ ಕಾರಣವಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿಸಿದೆ.

ಒಂದೇ ವಿಮಾನವು ಎರಡು ಬಾರಿ ಅಪಘಾತಕ್ಕೀಡಾಗಿರುವುದು ನಾಗರಿಕ ವಿಮಾನಯಾನ ಸುರಕ್ಷತಾ ಮಾನದಂಡಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎದ್ದಿದೆ. ವಿಮಾನದ ನಿರ್ವಹಣೆ, ತಾಂತ್ರಿಕ ತಪಾಸಣೆ ಮತ್ತು ಹಾರಾಟಕ್ಕೆ ನೀಡಲಾಗುವ ಅನುಮತಿಗಳ ಕುರಿತು ಸಮಗ್ರ ತನಿಖೆ ಅಗತ್ಯವಿದೆ ಎಂದು ವಿಮಾನಯಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ, ರಾಷ್ಟ್ರಪತಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಸಾವಿರಾರು ಬೆಂಬಲಿಗರು ಬಾರಾಮತಿಯಲ್ಲಿ ಜಮಾಯಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (38)

ಬೀದರ್-ಯಶವಂತಪುರ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

by ಶಾಲಿನಿ ಕೆ. ಡಿ
August 7, 2026 - 9:22 pm
0

Your paragraph text (36)

ಲಂಚ ಪಡೆಯುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿಗಳು

by ಶಾಲಿನಿ ಕೆ. ಡಿ
August 7, 2026 - 9:00 pm
0

Your paragraph text (33)

ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್..ಬೆಳಗಾವಿಯಲ್ಲಿ ಮೂರು ಕಡೆ ದಾಳಿ

by ಶಾಲಿನಿ ಕೆ. ಡಿ
August 7, 2026 - 8:40 pm
0

Your paragraph text (32)

ಬೆಂಗಳೂರಿನಲ್ಲಿ ಬೃಹತ್ ‘ಜಿಸಿಸಿ’ ಸ್ಥಾಪನೆ ಘೋಷಿಸಿದ ಮೆಡ್‌ಟೆಕ್‌ ದೈತ್ಯ ‘ಡಿಪ್ಯೂ ಸಿಂಥೆಸ್’

by ಶಾಲಿನಿ ಕೆ. ಡಿ
August 7, 2026 - 8:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (38)
    ಬೀದರ್-ಯಶವಂತಪುರ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ
    August 7, 2026 | 0
  • Your paragraph text (36)
    ಲಂಚ ಪಡೆಯುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿಗಳು
    August 7, 2026 | 0
  • Your paragraph text (33)
    ವಂಚನೆ ಪ್ರಕರಣ: ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್..ಬೆಳಗಾವಿಯಲ್ಲಿ ಮೂರು ಕಡೆ ದಾಳಿ
    August 7, 2026 | 0
  • Your paragraph text (29)
    ವೆಬ್‌ಸಿರೀಸ್‌ ನೋಡಿ ಪತ್ನಿ ಹ*ತ್ಯೆ: 12.75 ಲಕ್ಷ ರೂ. ಹಣದೊಂದಿಗೆ ಪರಾರಿಯಾದ ಟೆಕ್ಕಿ ಅರೆಸ್ಟ್‌
    August 7, 2026 | 0
  • Your paragraph text (28)
    ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version