• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೀಪೋತ್ಸವಕ್ಕೆ ಅಯೋಧ್ಯೆ ಸಜ್ಜು: 30 ಲಕ್ಷ ದೀಪಗಳಿಂದ ಕಂಗೊಳಿಸಲಿದೆ ರಾಮನಗರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2026 - 5:39 pm
in ದೇಶ
0 0
0
Your paragraph text 2026 11 07T173547.389

ಅಯೋಧ್ಯೆ: ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ದೀಪಾವಳಿ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ದೀಪೋತ್ಸವ-2026ರ ಅದ್ಧೂರಿ ಆಚರಣೆಗೆ ಇಡೀ ರಾಮನಗರಿ ಸಜ್ಜಾಗಿದ್ದು, ಈ ಬಾರಿ ಬರೋಬ್ಬರಿ 30 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಿಸುವ ಮೂಲಕ ಮತ್ತೊಂದು ವಿಶ್ವದಾಖಲೆ ನಿರ್ಮಿಸುವ ಗುರಿ ಹೊಂದಲಾಗಿದೆ. ನಗರದ ಪ್ರಮುಖ ಘಾಟ್‌ಗಳು, ದೇವಾಲಯಗಳು, ರಸ್ತೆಗಳು ಸೇರಿದಂತೆ ಎಲ್ಲೆಡೆ ದೀಪಾಲಂಕಾರ ಕಂಗೊಳಿಸುತ್ತಿದೆ.

ದೀಪೋತ್ಸವ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವ ಹಿನ್ನೆಲೆ ಉತ್ತರ ಪ್ರದೇಶ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸುವಲ್ಲಿ ನಿರತವಾಗಿವೆ. ನಗರದಾದ್ಯಂತ ವಿದ್ಯುತ್ ದೀಪಾಲಂಕಾರ, ಅಲಂಕಾರಿಕ ವ್ಯವಸ್ಥೆಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಪ್ರದರ್ಶನಗಳಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿಯ ದೀಪೋತ್ಸವ ದೇಶದ ಗಮನ ಸೆಳೆಯುವುದರ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವಿಶೇಷ ಆಕರ್ಷಣೆಯಾಗುವ ನಿರೀಕ್ಷೆಯಿದೆ.

RelatedPosts

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ

ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ

ಅಯೋಧ್ಯೆಯಲ್ಲಿ ದೀಪೋತ್ಸವ: 36 ಲಕ್ಷ ದೀಪ ಬೆಳಗಿಸಿ ಹೊಸ ಗಿನ್ನಿಸ್ ದಾಖಲೆ

ADVERTISEMENT
ADVERTISEMENT
ಯೋಗಿ ನೇತೃತ್ವದಲ್ಲಿ ವಿಶ್ವಮಟ್ಟಕ್ಕೆ ದೀಪೋತ್ಸವದ ಕೀರ್ತಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಅಯೋಧ್ಯೆಯ ದೀಪೋತ್ಸವ ವರ್ಷದಿಂದ ವರ್ಷಕ್ಕೆ ಮತ್ತಷ್ಟು ಅದ್ಧೂರಿಯಾಗಿ ನಡೆಯುತ್ತಿದೆ. ಈ ಸಂಭ್ರಮಕ್ಕೆ ಜಾಗತಿಕ ಮನ್ನಣೆ ದೊರೆತಿದ್ದು, ಉತ್ತರ ಪ್ರದೇಶದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ವಿಶ್ವದಾದ್ಯಂತ ಪರಿಚಯಿಸುವ ವೇದಿಕೆಯಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಹಿನ್ನೆಲೆ ದೀಪೋತ್ಸವ-2026 ಅನ್ನು ಅತ್ಯಂತ ವೈಭವದಿಂದ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ ವಿದೇಶಗಳಿಂದಲೂ ಪ್ರವಾಸಿಗರು ಹಾಗೂ ಗಣ್ಯರು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆಯಿದೆ.

56 ಘಾಟ್‌ಗಳಲ್ಲಿ 30 ಲಕ್ಷಕ್ಕೂ ಅಧಿಕ ದೀಪಗಳ ಬೆಳಕು

ಈ ಬಾರಿಯ ದೀಪೋತ್ಸವದ ಪ್ರಮುಖ ಆಕರ್ಷಣೆಯೇ 30 ಲಕ್ಷಕ್ಕೂ ಅಧಿಕ ಮಣ್ಣಿನ ದೀಪಗಳು. ಸರಯೂ ನದಿಯ ಪ್ರಸಿದ್ಧ ರಾಮ್ ಕಿ ಪೈಡಿ ಸೇರಿದಂತೆ ಅಯೋಧ್ಯೆಯ ಒಟ್ಟು 56 ಘಾಟ್‌ಗಳಲ್ಲಿ ಲಕ್ಷಾಂತರ ದೀಪಗಳನ್ನು ಸಾಲಾಗಿ ಜೋಡಿಸಲಾಗಿದೆ. ಒಂದೇ ಸಮಯದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ದೀಪಗಳು ಬೆಳಗಿದಾಗ ಇಡೀ ಅಯೋಧ್ಯೆ ಬೆಳಕಿನ ಸಾಗರದಂತೆ ಕಂಗೊಳಿಸಲಿದೆ.

ಈ ಬೃಹತ್ ಕಾರ್ಯದಲ್ಲಿ ಡಾ. ರಾಮ್ ಮನೋಹರ್ ಲೋಹಿಯಾ ಅವಧ್ ವಿಶ್ವವಿದ್ಯಾಲಯದ 35 ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು ಭಾಗಿಯಾಗಿದ್ದಾರೆ. ಘಾಟ್‌ಗಳಲ್ಲಿ ದೀಪಗಳನ್ನು ಕ್ರಮಬದ್ಧವಾಗಿ ಜೋಡಿಸುವುದು, ಅವುಗಳಿಗೆ ಎಣ್ಣೆ ತುಂಬುವುದು ಹಾಗೂ ಬತ್ತಿಗಳನ್ನು ಸಿದ್ಧಪಡಿಸುವ ಕಾರ್ಯವನ್ನು ಸ್ವಯಂಸೇವಕರು ಕೈಗೊಂಡಿದ್ದಾರೆ.

ಪ್ರತಿಯೊಂದು ದೀಪವೂ ನಿಗದಿತ ಸ್ಥಳದಲ್ಲಿ ಬೆಳಗುವಂತೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ದೀಪೋತ್ಸವದ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.

ರಾಮಮಂದಿರದಲ್ಲಿ ಒಂದು ಲಕ್ಷಕ್ಕೂ ಅಧಿಕ ದೀಪಗಳ ಬೆಳಕು

ಅಯೋಧ್ಯೆಯ ದೀಪೋತ್ಸವದಲ್ಲಿ ಶ್ರೀರಾಮ ಜನ್ಮಭೂಮಿ ಮಂದಿರ ವಿಶೇಷ ಆಕರ್ಷಣೆಯಾಗಲಿದೆ. ರಾಮಮಂದಿರದ ಆವರಣವೊಂದರಲ್ಲೇ ಒಂದು ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿಶೇಷ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಭವ್ಯವಾದ ಧಾರ್ಮಿಕ ಅನುಭವ ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಶ್ರೀರಾಮನ ದರ್ಶನದ ಜೊತೆಗೆ ದೀಪೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆಯಿದೆ.

ಉಪರಾಷ್ಟ್ರಪತಿ ಸೇರಿದಂತೆ ಗಣ್ಯರ ದಂಡು ಭಾಗಿ

ಈ ಬಾರಿಯ ದೀಪೋತ್ಸವದಲ್ಲಿ ದೇಶದ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ದೇಶ-ವಿದೇಶಗಳ ಅತಿಥಿಗಳೂ ಈ ಅದ್ಧೂರಿ ಆಚರಣೆಗೆ ಸಾಕ್ಷಿಯಾಗಲಿದ್ದಾರೆ.

ಇದೇ ಸಂದರ್ಭದಲ್ಲಿ ಸಂಸದೀಯ ಮತ್ತು ಧಾರ್ಮಿಕ ಮುಖಂಡರಾದ ಜಗದ್ಗುರು ಸ್ವಾಮಿ ಸತೀಶಾಚಾರ್ಯ ಜಿ ಮಹಾರಾಜ್ ಅವರು ಅಯೋಧ್ಯೆಗೆ ಭೇಟಿ ನೀಡಿ ದೀಪೋತ್ಸವದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಶ್ರೀರಾಮನ ಆದರ್ಶ ಸಾರುವ ಬೆಳಕಿನ ಹಬ್ಬ

ದೀಪೋತ್ಸವದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕುರಿತು ಮಾತನಾಡಿದ ಸ್ವಾಮಿ ಸತೀಶಾಚಾರ್ಯ ಜಿ ಮಹಾರಾಜ್, ತ್ರೇತಾಯುಗದಲ್ಲಿ ಪ್ರಭು ಶ್ರೀರಾಮ ಅಯೋಧ್ಯೆಗೆ ಮರಳಿದ ಸಂದರ್ಭದಲ್ಲಿ ಇಡೀ ನಗರಿಯನ್ನು ದೀಪಗಳಿಂದ ಬೆಳಗಿಸಲಾಗಿತ್ತು. ಅದೇ ಸಂಪ್ರದಾಯವನ್ನು ಇಂದು ಯೋಗಿ ಆದಿತ್ಯನಾಥ್ ಅವರ ಪ್ರಯತ್ನದಿಂದ ಜಗತ್ತಿನಾದ್ಯಂತ ಪರಿಚಯಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಯೋಧ್ಯೆಯಲ್ಲಿ ದೀಪಾವಳಿಯ ಆಚರಣೆ ಕೇವಲ ದೀಪಗಳನ್ನು ಬೆಳಗಿಸುವ ಸಂಪ್ರದಾಯವಲ್ಲ. ಇದು ಭಾರತೀಯ ಸಂಸ್ಕೃತಿ, ಭಕ್ತಿ ಮತ್ತು ಸನಾತನ ಪರಂಪರೆಯ ಪ್ರತೀಕವಾಗಿದೆ. ದೇವತೆಗಳ ಹೆಸರು ಹಾಗೂ ಸಂಖ್ಯೆಗೆ ಅನುಗುಣವಾಗಿ ದೀಪಗಳನ್ನು ಬೆಳಗಿಸುವ ಪದ್ಧತಿಯು ಆಧ್ಯಾತ್ಮಿಕ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರತಿಯೊಬ್ಬ ಭಾರತೀಯನೂ ಶ್ರೀರಾಮನ ಆದರ್ಶ, ಧರ್ಮನಿಷ್ಠೆ, ಸತ್ಯ ಮತ್ತು ಕರ್ತವ್ಯಪ್ರಜ್ಞೆಯನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ದೀಪೋತ್ಸವದ ನಿಜವಾದ ಉದ್ದೇಶ ಸಾರ್ಥಕವಾಗುತ್ತದೆ ಎಂದಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 08T185054.202

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

by ಶಾಲಿನಿ ಕೆ. ಡಿ
November 8, 2026 - 6:51 pm
0

Your paragraph text 2026 11 08T182911.698

ದೀಪಾವಳಿ ಸಂಭ್ರಮದಲ್ಲಿ ನಟಿ ಕತ್ರಿನಾ-ವಿಕ್ಕಿ: ಮಗನ ಮುಖ ರಿವೀಲ್ ಮಾಡಿದ ಬಾಲಿವುಡ್ ಜೋಡಿ

by ಶಾಲಿನಿ ಕೆ. ಡಿ
November 8, 2026 - 6:30 pm
0

Your paragraph text 2026 11 08T180924.902

ನಮ್ಮನ್ನ ಟಾರ್ಗೆಟ್‌ ಮಾಡುತ್ತಿದ್ದಾರೆ, ಎಲ್ಲದಕ್ಕೂ ರೆಡಿ ಇದ್ದೇವೆ’: ಹೆಚ್‌ಡಿಕೆ ಆರೋಪಕ್ಕೆ ಹಾಸನ ಡಿಸಿ ತಿರುಗೇಟು

by ಶಾಲಿನಿ ಕೆ. ಡಿ
November 8, 2026 - 6:12 pm
0

Untitled design 2026 11 08T171941.903

ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ

by ಶಾಲಿನಿ ಕೆ. ಡಿ
November 8, 2026 - 5:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 11 08T185054.202
    ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ
    November 8, 2026 | 0
  • Untitled design 2026 11 08T171941.903
    ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ
    November 8, 2026 | 0
  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Untitled Design 2026 11 08T120607.623
    ಅಯೋಧ್ಯೆಯಲ್ಲಿ ದೀಪೋತ್ಸವ: 36 ಲಕ್ಷ ದೀಪ ಬೆಳಗಿಸಿ ಹೊಸ ಗಿನ್ನಿಸ್ ದಾಖಲೆ
    November 8, 2026 | 0
  • Your paragraph text 2026 11 07T221029.207
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಕೇಸ್‌: ಸಾ*ವಿನ ಸಂಖ್ಯೆ 6ಕ್ಕೆ ಏರಿಕೆ
    November 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version