ಕಳೆದ ವಾರ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನೂ ಏರಿಸಿದೆ. ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಅನಿಲ ಕಂಪನಿಗಳು ಸಿಲಿಂಡರ್ ಬೆಲೆ ಹೆಚ್ಚಿಸುವುದಾಗಿ ತಿಳಿಸಿವೆ, ಹೀಗಾಗಿ ಪ್ರತಿ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಲಿದೆ.
ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗಲಿದೆ. ಆದ್ದರಿಂದ ಇನ್ಮುಂದೆ ಉಜ್ವಲ ಯೋಜನೆಯ 503 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 553 ರೂ. ಹಾಗೂ ಇತರೇ ಗ್ರಾಹಕರು 803 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 853 ರೂ. ಪಾವತಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಸಚಿವ ಹರ್ದೀಪ್ ಸಿಂಗ್ ಪುರಿ ವಿವರಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸಲ್ ಮೇಲೆ ಕೇಂದ್ರ ಅಬಕಾರಿ ಸುಂಕದಲ್ಲಿ ಎರಡು ರೂ ಏರಿಕೆ ಮಾಡಲಾಗಿರುವ ಸುದ್ದಿ ಬಂದ ಬೆನ್ನಲ್ಲೇ ಜನಸಾಮಾನ್ಯರಿಗೆ ಎಲ್‌ಪಿಜಿ ಶಾಕ್ ಬಂದಿದೆ.