ದೆಹಲಿಯ ವಿಮಾನ ನಿಲ್ದಾಣದಲ್ಲಿ ವಿಮಾನಕ್ಕೆ ಬೆಂಕಿ: 6 ಪ್ರಯಾಣಿಕರಿಗೆ ಗಾಯ

Untitled design 2026 04 26T115648.255

ನವದೆಹಲಿ: ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI Airport) ಶನಿವಾರ ಮಧ್ಯಾಹ್ನದ ವೇಳೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್ ನಗರಕ್ಕೆ ಹೊರಡಲು ಸಿದ್ಧವಾಗುತ್ತಿದ್ದಸ್ವಿಸ್ ಏರ್ಲೈನ್ಸ್‌ನ ವಿಮಾನ (ಸಂಭಾವ್ಯ ಸಂಖ್ಯೆ LX-147)ರನ್ವೇ ಮೇಲೆ ಟೇಕ್ ಆಫ್ ಆಗುವಾಗ ಅದರ ಎಂಜಿನ್‌ನಲಲ್ಇ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆಯಲ್ಲಿ6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಕೂಡಲೇ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಹೇಗೆ ನಡೆಯಿತು?

ಸ್ವಿಸ್ ಏರ್ಲೈನ್ಸ್ ವಿಮಾನವು ಟೇಕ್ ಆಫ್ ಆಗಲು ರನ್ವೇ ಕಡೆಗೆ ಚಲಿಸುತ್ತಿತ್ತು. ಇದ್ದಕ್ಕಿದ್ದಂತೆ ವಿಮಾನದ ಎಂಜಿನ್ ನಂಬರ್ 2 ರಲ್ಲಿ ತಾಂತ್ರಿಕ ದೋಷ ಉಂಟಾಗಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡವು. ಕ್ಷಣಾರ್ಧದಲ್ಲಿ ಸಂಪೂರ್ಣ ಎಂಜಿನ್ ಬೆಂಕಿಗೆ ಸಿಲುಕಿತು. ವಿಮಾನ ನಿಲ್ದಾಣದ ನಿಯಂತ್ರಣ ಕೊಠಡಿ ಮತ್ತು ಪೈಲಟ್ ತಕ್ಷಣ, ವಿಮಾನವನ್ನು ನಿಲ್ಲಿಸುವ ಸೂಚನೆ ನೀಡಿದರು. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಭೀತಿ ಆವರಿಸಿತು.

ಪ್ರಾಣಾಪಾಯ ತಪ್ಪಿದ್ದು ಹೇಗೆ?

ವಿಮಾನ ನಿಲ್ದಾಣದ ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ಸಿಬ್ಬಂದಿ ಕ್ಷಣಾರ್ಧದಲ್ಲಿ ಘಟನಾ ಸ್ಥಳಕ್ಕೆ ಧಾವಿಸಿ ಬಂದರು. ಒಂದು ನಿಮಿಷದೊಳಗೆ ಎಂಜಿನ್‌ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲಾಯಿತು. ವಿಮಾನದಲ್ಲಿದ್ದ ಸುಮಾರು 80 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಗಾಯಾಳುಗಳ ವಿವರ:

ಬೆಂಕಿಯ ನಡುವೆ ವಿಮಾನದಿಂದ ಕೆಳಗಿಳಿಯುವ ಸಂದರ್ಭದಲ್ಲಿ ಆತಂಕದಿಂದ ಓಡಾಡಿದ 6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಕೂಡಲೇ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಿಲ್ದಾಣದ ವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಅವರಲ್ಲಿ ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ಸಂಸ್ಥೆ ಪ್ರತಿಕ್ರಿಯೆ:

ಸ್ವಿಸ್ ಏರ್ಲೈನ್ಸ್ ತನ್ನ ಹೇಳಿಕೆಯಲ್ಲಿ, “ದಿಲ್ಲಿಯಿಂದ ಜ್ಯೂರಿಚ್ಗೆ ತೆರಳುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷದಿಂದಾಗಿ ಎಂಜಿನ್ ಬೆಂಕಿ ಹೊತ್ತಿಕೊಂಡಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಸಣ್ಣ ಗಾಯಗಳಾದ 6 ಪ್ರಯಾಣಿಕರ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು” ಎಂದು ತಿಳಿಸಿದೆ.

Exit mobile version