ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ (NCP) ನಾಯಕ ಅಜಿತ್ ಪವಾರ್ (Ajit Pawar) ಅವರು ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನರಾಗಿದ್ದಾರೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ (Emergency Landing) ಮಾಡಲು ಪ್ರಯತ್ನಿಸುತ್ತಿದ್ದಾಗ ವಿಮಾನವು ನಿಯಂತ್ರಣ ತಪ್ಪಿ ಸ್ಫೋಟಗೊಂಡಿದೆ. ಈ ದಾರುಣ ಘಟನೆಗೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ದೇಶದ ಪ್ರಮುಖ ನಾಯಕರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ರನ್‌ವೇನಲ್ಲಿ ಇಳಿಯುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ವಿಮಾನವು ವೇಗವಾಗಿ ಬಂದು ನೆಲಕ್ಕೆ ಅಪ್ಪಳಿಸಿದ ಪರಿಣಾಮ ಇಂಧನ ಟ್ಯಾಂಕ್ ಸೀಳಿ ಬೆಂಕಿ ಹತ್ತಿಕೊಂಡಿದೆ. ಅಪಘಾತದ ತೀವ್ರತೆಗೆ ವಿಮಾನದಲ್ಲಿದ್ದ ಅಜಿತ್ ಪವಾರ್ ಮತ್ತು ಅವರ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ರಕ್ಷಣಾ ಪಡೆಗಳು ಬೆಂಕಿ ನಂದಿಸಿ ಮೃತದೇಹಗಳನ್ನು ಹೊರತೆಗೆಯುವಷ್ಟರಲ್ಲಿ ವಿಮಾನವು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು ಎಂದು ತಿಳಿದುಬಂದಿದೆ.
Shocked and deeply saddened by the untimely passing of Maharashtra Deputy CM Shri Ajit Pawar in a tragic plane crash. His sudden demise is a great loss to public life and to Maharashtra politics, where he served with experience and resolve.
My heartfelt condolences to his family… pic.twitter.com/tOb4fH4hla
— DK Shivakumar (@DKShivakumar) January 28, 2026
ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ:
ಅಜಿತ್ ಪವಾರ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಕ್ಸ್ (ಟ್ವಿಟರ್) ಮೂಲಕ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಅವರ ದೃಢ ಸಂಕಲ್ಪ ಮತ್ತು ಸುದೀರ್ಘ ರಾಜಕೀಯ ಅನುಭವ ಮಹಾರಾಷ್ಟ್ರಕ್ಕೆ ದೊಡ್ಡ ಶಕ್ತಿಯಾಗಿತ್ತು. ಅವರ ಸಾವು ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟ. ಈ ಕಠಿಣ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಯ ನಂತರ ಮುಂಬೈಗೆ ರವಾನಿಸಬಹುದಾಗಿದೆ. ಸಾರ್ವಜನಿಕರ ದರ್ಶನಕ್ಕಾಗಿ ಮುಂಬೈನ ಎನ್‌ಸಿಪಿ ಕಚೇರಿ ಅಥವಾ ಅವರ ಅಧಿಕೃತ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಇರಿಸಲು ಮಹಾರಾಷ್ಟ್ರ ಸರ್ಕಾರ ವ್ಯವಸ್ಥೆ ಮಾಡುತ್ತಿದೆ.
ಈ ಕರಾಳ ಘಟನೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಅಂತಿಮ ದರ್ಶನ ಪಡೆಯಲು ಮುಂಬೈಗೆ ಆಗಮಿಸುವ ನಿರೀಕ್ಷೆಯಿದೆ. ಮಹಾರಾಷ್ಟ್ರ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈ ಮತ್ತು ಬಾರಾಮತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
