ಉತ್ತರ ಪ್ರದೇಶ: ಫತೇಪುರದಲ್ಲಿ ಪಟಾಕಿ ಮಾರುಕಟ್ಟೆಯಲ್ಲಿ ಭಾರಿ ಬೆಂಕಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 65 ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಂದಾಜು 3 ಕೋಟಿ ರೂಪಾಯಿ ಮೌಲ್ಯದ ಪಟಾಕಿಗಳು ಈ ಬೆಂಕಿಯಲ್ಲಿ ನಾಶವಾಗಿವೆ.
ಬೆಂಕಿ ಹೊತ್ತಿಕೊಂಡು ಪಟಾಕಿಗಳು ಸಿಡಿಯಲು ಆರಂಭಿಸಿದಾಗ ಉಂಟಾದ ಭೀಕರ ಸ್ಫೋಟಗಳ ಶಬ್ದ ಸುಮಾರು 2 ಕಿಲೋಮೀಟರ್ ದೂರದ ವರೆಗೆ ಕೇಳಿಸಿತ್ತು. ಈ ಘಟನೆಯಲ್ಲಿ 50 ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿದೆಯಾದರೂ, ಅದೃಷ್ಟವಶಾತ್ ಸ್ಥಳದಲ್ಲಿದ್ದ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ.
ಪ್ರಾಥಮಿಕ ತನಿಖೆಯಲ್ಲಿ ಈ ಬೆಂಕಿ, ಶಾರ್ಟ್ ಸರ್ಕ್ಯೂಟ್ ಕಾರಣದಿಂದಲೇ ಉಂಟಾಗಿದೆ ಎಂದು ತಿಳಿದುಬಂದಿದೆ. ಬೆಂಕಿ ನಿಯಂತ್ರಣಕ್ಕೆ ಅಗ್ನಿಶಾಮಕ ದಳದ ಹಲವಾರು ವಾಹನಗಳನ್ನು ನಿಯೋಜಿಸಲಾಗಿದೆ.ಘಟನಾ ಸ್ಥಳಕ್ಕೆ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದಾರೆ.
