ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2026: ಅಂಚೆ ಮತಗಳ ಎಣಿಕೆ ಆರಂಭ

BeFunky collage (57)

ದೇಶಾದ್ಯಂತ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆಯಿಂದ ಆರಂಭವಾಗಿದೆ. ಆರಂಭಿಕ ಹಂತದಲ್ಲಿ ಅಂಚೆ ಮತಗಳ (Postal Ballots) ಎಣಿಕೆ ನಡೆಯುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಪ್ರಮುಖ ಪಕ್ಷಗಳು ಮುನ್ನಡೆಯತ್ತ ಹೆಜ್ಜೆ ಹಾಕಿವೆ.

ಪಶ್ಚಿಮ ಬಂಗಾಳದಲ್ಲಿ ‘ದೀದಿ’ ಅಬ್ಬರ :

ಪಶ್ಚಿಮ ಬಂಗಾಳದ ಆರಂಭಿಕ ಟ್ರೆಂಡ್‌ನಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಭರ್ಜರಿ ಮುನ್ನಡೆ ಸಾಧಿಸಿದೆ. ಅಂಚೆ ಮತಗಳ ಎಣಿಕೆಯಲ್ಲಿ ಸುಮಾರು 5 ಕ್ಷೇತ್ರಗಳಲ್ಲಿ ದೀದಿ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ತೀವ್ರ ಪೈಪೋಟಿ ನೀಡುತ್ತಿದೆ.

ದಕ್ಷಿಣದ ರಾಜ್ಯಗಳಲ್ಲಿ ಯಾರ ಹವಾ?

ತಮಿಳುನಾಡು: ಇಲ್ಲಿ ಸ್ಟಾಲಿನ್ ನೇತೃತ್ವದ ಡಿಎಂಕೆ (DMK) ಅಂಚೆ ಮತಗಳ ಎಣಿಕೆಯಲ್ಲಿ ಸ್ಪಷ್ಟ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದತ್ತ ಮುಖ ಮಾಡಿದೆ.

ಕೇರಳ: ಎಡರಂಗದ ಭದ್ರಕೋಟೆಯಾಗಿರುವ ಕೇರಳದಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಸದ್ಯಕ್ಕೆ ಮುನ್ನಡೆ ಸಾಧಿಸಿ ಅಚ್ಚರಿ ಮೂಡಿಸಿದೆ.

ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟ ಆರಂಭಿಕ ಮುನ್ನಡೆ ದಾಖಲಿಸಿದೆ.

ಅಸ್ಸಾಂನಲ್ಲಿ ಕಮಲದ ಹವಾ:

ಈಶಾನ್ಯ ರಾಜ್ಯವಾದ ಅಸ್ಸಾಂನಲ್ಲಿ ಆಡಳಿತಾರೂಢ ಬಿಜೆಪಿ ಅಂಚೆ ಮತಗಳ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮತ್ತೆ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದೆ.

ಸದ್ಯ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಇದು ಮುಗಿದ ತಕ್ಷಣ ಇವಿಎಂ (EVM) ಮತಗಳ ಎಣಿಕೆ ಆರಂಭವಾಗಲಿದೆ. ಇವಿಎಂ ಎಣಿಕೆ ಆರಂಭವಾದ ಬಳಿಕವೇ ಫಲಿತಾಂಶದ ನೈಜ ಚಿತ್ರಣ ಲಭ್ಯವಾಗಲಿದ್ದು, ಮಧ್ಯಾಹ್ನದ ವೇಳೆಗೆ ಯಾವ ರಾಜ್ಯದಲ್ಲಿ ಯಾರು ಸತ್ತಾ ಹಿಡಿಯಲಿದ್ದಾರೆ ಎಂಬುದು ಸ್ಪಷ್ಟವಾಗಲಿದೆ.

Exit mobile version