ಮನಾಲಿ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಭೀಕರ ಭೂಕುಸಿತದಿಂದಾಗಿ ರಸ್ತೆಗಳಿಗೆ ತೀವ್ರ ಹಾನಿಯಾಗಿದ್ದು, ಮನಾಲಿಯಲ್ಲಿ ಪಿಕಪ್ ವಾಹನವೊಂದು ಕೊಚ್ಚಿಹೋಗಿರುವ ಘಟನೆ ನಡೆದಿದೆ.
ಈ ದೃಶ್ಯವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರೀ ಮಳೆಯಿಂದಾಗಿ ಗುಡ್ಡಗಾಡುಗಳು ಕುಸಿಯುತ್ತಿದ್ದು, ಹಲವೆಡೆ ರಸ್ತೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಮಂಡಿ ಜಿಲ್ಲೆಯಲ್ಲಿ ಬಿಯಾಸ್ ನದಿಯು ಉಕ್ಕಿ ಹರಿಯುತ್ತಿದ್ದು, ಇದರಿಂದಾಗಿ ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿವೆ.
VIDEO | Manali, Himachal Pradesh: A pick-up van was swept away as raging river triggered a landslide damaging the road.
(Full video available on PTI Videos – https://t.co/n147TvrpG7) pic.twitter.com/ia93w7Jquh
— Press Trust of India (@PTI_News) August 26, 2025
ಭಾರತೀಯ ಹವಾಮಾನ ಇಲಾಖೆ (IMD) ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ, ಭಾರೀ ಮಳೆ, ಭೂಕುಸಿತ ಮತ್ತು ಆಕಸ್ಮಿಕ ಪ್ರವಾಹದ ಎಚ್ಚರಿಕೆ ನೀಡಿದೆ.
ಈ ಘಟನೆಯಿಂದ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲವಾದರೂ, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳು, ವಿದ್ಯುತ್ ಸರಬರಾಜು ಮತ್ತು ಜಲ ಸರಬರಾಜು ವ್ಯವಸ್ಥೆಗಳಿಗೆ ತೊಂದರೆಯಾಗಿದೆ.