• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 5:44 pm
in Flash News, ದೇಶ
0 0
0
Untitled design 2026 05 19T174350.135

ಚಂಡೀಗಢ, ಮೇ 19: ಮದುವೆಯಾಗಲು ಒಪ್ಪದ ಒಂದೇ ಒಂದು ಕಾರಣಕ್ಕೆ ಪ್ರಸಿದ್ಧ ಗಾಯಕಿಯನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪಂಜಾಬಿನ ಖ್ಯಾತ ಗಾಯಕಿ ಇಂದರ್ ಕೌರ್ (29) (ಯಶಿಂದರ್ ಕೌರ್) ಅವರ ಭೀಕರ ಹತ್ಯೆ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಆರು ದಿನಗಳ ಹಿಂದೆ ಬಂದೂಕು ತೋರಿಸಿ ಅಪಹರಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನೀಲೋ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ತಕ್ಷಣ ಅವರ ಮೃತದೇಹವನ್ನು ಹೊರತೆಗೆಯಲಾಯಿತು.

RelatedPosts

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ

ADVERTISEMENT
ADVERTISEMENT

ಪಂಜಾಬಿ ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಇಂದರ್ ಕೌರ್, ಸಾಮಾಜಿಕ ಜಾಲತಾಣಗಳಲ್ಲೂ ಸಾಕಷ್ಟು ಜನಪ್ರಿಯರಾಗಿದ್ದರು. ಇನ್‌ಸ್ಟಾಗ್ರಾಂನಲ್ಲಿ 1.24 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದ ಅವರು, ತಮ್ಮ ಹಾಡುಗಳು ಮತ್ತು ವಿಡಿಯೋಗಳ ಮೂಲಕ ಯುವಜನರಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು.

ಮೇ 13ರಂದು ರಾತ್ರಿ ಸುಮಾರು 8:30ರ ವೇಳೆಗೆ ಇಂದರ್ ಕೌರ್ ತಮ್ಮ ಕಾರಿನಲ್ಲಿ ಪಡಿತರ ಸಾಮಗ್ರಿ ತರಲು ಮಾರುಕಟ್ಟೆಗೆ ತೆರಳಿದ್ದರು. ಆದರೆ ರಾತ್ರಿ ಕಳೆದರೂ ಮನೆಗೆ ಮರಳದ ಹಿನ್ನೆಲೆ ಕುಟುಂಬದವರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದರು. ಬಳಿಕ ಪೊಲೀಸರಿಗೆ ದೂರು ನೀಡಲಾಗಿತ್ತು. ಆರು ದಿನಗಳ ಕಾಲ ಯಾವುದೇ ಸುಳಿವು ಸಿಗಲಿಲ್ಲ..

ಇದೀಗ ಮಂಗಳವಾರ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಇಂದರ್ ಕೌರ್ ಅವರ ಶವ ನೀಲೋ ಕಾಲುವೆಯಲ್ಲಿ ಪತ್ತೆಯಾಗಿದೆ. ಶವ ಪತ್ತೆಯಾಗುತ್ತಿದ್ದಂತೆ ಈ ಪ್ರಕರಣವನ್ನು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇಂದರ್ ಕುಟುಂಬಸ್ಥರು ಮೋಗಾದ ಭಾಲೂರ್ ಗ್ರಾಮದ ಸುಖ್ವಿಂದರ್ ಸಿಂಗ್ ಅಲಿಯಾಸ್ ಸುಖಾ ಎಂಬಾತನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಸುಖ್ವಿಂದರ್ ಹಲವು ದಿನಗಳಿಂದ ಇಂದರ್ ಅವರನ್ನು ಬಲವಂತವಾಗಿ ಮದುವೆಯಾಗಲು ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಆದರೆ ಇಂದರ್ ನಿರಾಕರಿಸಿದ್ದರು. ಇದೇ ಕಾರಣದಿಂದ ಆಕ್ರೋಶಗೊಂಡ ಸುಖ್ವಿಂದರ್ ಈ ಅಪಹರಣ ಮತ್ತು ಹತ್ಯೆ ಸಂಚು ರೂಪಿಸಿದ್ದಾನೆ ಎಂದು ಕುಟುಂಬ ಆರೋಪಿಸಿದೆ.

ಕುಟುಂಬದವರ ಹೇಳಿಕೆಯ ಪ್ರಕಾರ, ಸುಖ್ವಿಂದರ್ ಸಿಂಗ್ ಕೆನಡಾದಿಂದ ಪಂಜಾಬ್‌ಗೆ ಬಂದಿದ್ದ. ಮೇ 13ರಂದು ಕೆಲ ಸಹಚರರೊಂದಿಗೆ ಸೇರಿ ಇಂದರ್ ಅವರ ಕಾರನ್ನು ಅಡ್ಡಗಟ್ಟಿ, ಬಂದೂಕು ತೋರಿಸಿ ಅಪಹರಿಸಿದ್ದಾನೆ ಎನ್ನಲಾಗಿದೆ. ಬಳಿಕ ಅವರನ್ನು ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವವನ್ನು ಕಾಲುವೆಗೆ ಎಸೆದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಕೃತ್ಯ ಎಸಗಿದ ನಂತರ ಪ್ರಮುಖ ಆರೋಪಿ ಸುಖ್ವಿಂದರ್ ಮತ್ತೆ ಕೆನಡಾಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆ ಆರೋಪಿಯನ್ನು ಭಾರತಕ್ಕೆ ಕರೆತರಲು ಕಾನೂನು ಪ್ರಕ್ರಿಯೆಗಳು ಆರಂಭಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಆರೋಪಿ ಸುಖ್ವಿಂದರ್ ಸಿಂಗ್ ಹಾಗೂ ಆತನ ಸಹಚರ ಕರಮ್‌ಜಿತ್ ಸಿಂಗ್ ವಿರುದ್ಧ ಮೇ 15ರಂದು ಪ್ರಕರಣ ದಾಖಲಾಗಿತ್ತು. ಆದರೆ ಪೊಲೀಸರು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಂಡಿಲ್ಲ ಎಂಬ ಆರೋಪವನ್ನು ಇಂದರ್ ಕುಟುಂಬಸ್ಥರು ಮಾಡುತ್ತಿದ್ದಾರೆ. “ಪೊಲೀಸರು ತಕ್ಷಣ ಕ್ರಮ ತೆಗೆದುಕೊಂಡಿದ್ದರೆ ನಮ್ಮ ಮಗಳು ಇಂದು ಬದುಕಿರುತ್ತಿದ್ದರು” ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಮಾಲ್ಪುರ ಪೊಲೀಸ್ ಠಾಣಾಧಿಕಾರಿ ಬಲ್ಬೀರ್ ಸಿಂಗ್, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ಜೊತೆಗೆ ಕೆನಡಾಕ್ಕೆ ತೆರಳಿರುವ ಪ್ರಮುಖ ಆರೋಪಿಯನ್ನು ಭಾರತಕ್ಕೆ ಕರೆತರಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಾ (13)

ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್

by ಶಾಲಿನಿ ಕೆ. ಡಿ
July 11, 2026 - 11:37 pm
0

ಟಾ (11)

‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ

by ಶಾಲಿನಿ ಕೆ. ಡಿ
July 11, 2026 - 10:53 pm
0

ಟಾ (10)

ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ

by ಶಾಲಿನಿ ಕೆ. ಡಿ
July 11, 2026 - 10:35 pm
0

ಟಾ (9)

ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!

by ಶಾಲಿನಿ ಕೆ. ಡಿ
July 11, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಾ (13)
    ಮಾಸ್ಕ್ ಧರಿಸಿ BMTC ಬಸ್‌ಗಳಲ್ಲಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಆರು ಜನ‌ ಅಧಿಕಾರಿಗಳು ಸಸ್ಪೆಂಡ್
    July 11, 2026 | 0
  • ಟಾ (10)
    ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ
    July 11, 2026 | 0
  • ಟಾ (9)
    ಕನ್ನಡದಲ್ಲೇ 10 ಸಾವಿರ ಗೀತೆ ಹಾಡಿದ್ದ ಗಾನಕೋಗಿಲೆ ಎಸ್. ಜಾನಕಿ ಧ್ವನಿ ಇನ್ನು ನೆನಪು ಮಾತ್ರ.!
    July 11, 2026 | 0
  • ಟಾ (8)
    ಜಾನಕಮ್ಮನ ಅಪ್ರತಿಮ ಕಂಠಸಿರಿ ಎಂದೆಂದಿಗೂ ಅಮರ: ಸಿಎಂ, ಹೆಚ್‌ಡಿಕೆ ಸೇರಿ ಗಣ್ಯರ ಸಂತಾಪ
    July 11, 2026 | 0
  • ಟಾ (7)
    ಎಸ್. ಜಾನಕಿ ಇನ್ನಿಲ್ಲ: 20 ಭಾಷೆಗಳು, 48 ಸಾವಿರ ಹಾಡುಗಳು..ಮುಗಿದ ಅಪೂರ್ವ ಗಾಯನ ಪಯಣ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version