ರಾಂಚಿ: ಜಾರ್ಖಂಡ್‌ನ ಬೊಕಾರೊದಲ್ಲಿ ಕೇಂದ್ರ ಪಡೆಗಳು ನಕ್ಸಲರ ವಿರುದ್ಧ ನಡೆಸಿದ ದಾಳಿಯಲ್ಲಿ ಭಾರೀ ಯಶಸ್ಸು ಸಾಧಿಸಿದ್ದು, 1 ಕೋಟಿ ರೂ. ಬಹುಮಾನ ಘೋಷಿತವಾಗಿದ್ದ ನಕ್ಸಲ್ ನಾಯಕ ಸೇರಿ 8 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ ಕೇಂದ್ರ ಮೀಸಲು ಪೊಲೀಸ್ ಪಡೆ (CRPF), ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (CoBRA) ಕಮಾಂಡೋಗಳ ಅರಣ್ಯ ಯುದ್ಧ ಘಟಕ, ಮತ್ತು ಜಾರ್ಖಂಡ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು.
ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಲಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನನ್ನು ಕೇಂದ್ರ ಮೀಸಲು ಪೊಲೀಸ್ ಪಡೆ ಯಶಸ್ವಿಯಾಗಿ ಹತ್ಯೆ ಮಾಡಿದೆ. ಕಾರ್ಯಾಚರಣೆ ವೇಳೆ 2 ಐಎನ್‌ಎಸ್‌ಎಎಸ್ ರೈಫಲ್‌ಗಳು, 1 ಸೆಲ್ಫ್ ಲೋಡಿಂಗ್ ರೈಫಲ್, ಮತ್ತು 1 ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.
ಏಪ್ರಿಲ್ ಆರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಿಂಸೆಯಿಂದ ಬದಲಾವಣೆ ಸಾಧ್ಯವಿಲ್ಲ ಎಂದು ಹೇಳಿ, ನಕ್ಸಲರಿಗೆ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಕರೆ ನೀಡಿದ್ದರು. ಛತ್ತೀಸ್‌ಗಢದಲ್ಲಿ ನಕ್ಸಲ್ ಮುಕ್ತ ಗ್ರಾಮಗಳಿಗೆ 1 ಕೋಟಿ ರೂ. ಅಭಿವೃದ್ಧಿ ನಿಧಿಯನ್ನು ಘೋಷಿಸಿದ ಅವರು, ಶರಣಾದ ನಕ್ಸಲರು ಸರ್ಕಾರದ ಸಹಾಯದಿಂದ ಸುರಕ್ಷಿತ ಮತ್ತು ಗೌರವಾನ್ವಿತ ಜೀವನ ನಡೆಸಬಹುದು ಎಂದು ಭರವಸೆ ನೀಡಿದ್ದರು.





