ಭಾರತದ ತಲಾ ಆದಾಯದಲ್ಲಿ ಕರ್ನಾಟಕವೇ ನಂ.1: ರಣದೀಪ್ ಸಿಂಗ್ ಸುರ್ಜೇವಾಲ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳೇ ಕಾರಣ: ಸುರ್ಜೇವಾಲ

111 (15)

ಬೆಂಗಳೂರು: ಕೇಂದ್ರ ಹಣಕಾಸು ಸಚಿವಾಲಯವು ಲೋಕಸಭೆಯಲ್ಲಿ ಮಂಡಿಸಿದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ದೇಶದ ಎಲ್ಲ ರಾಜ್ಯಗಳ ಪೈಕಿ ಕರ್ನಾಟಕವು ತಲಾ ಆದಾಯದಲ್ಲಿ (Per Capita Income) ಮೊದಲ ಸ್ಥಾನವನ್ನು ಪಡೆದಿದೆ. 2024-25ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ ತಲಾ ಆದಾಯವು 2,04,605 ರೂಪಾಯಿಗೆ ತಲುಪಿದ್ದು, ಇದು ದೇಶದಲ್ಲೇ ಅತಿ ಹೆಚ್ಚು. ಈ ಸಾಧನೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿಯ ಆರ್ಥಿಕ ನೀತಿಗಳು ಮತ್ತು ಗ್ಯಾರಂಟಿ ಯೋಜನೆಗಳು ಮುಖ್ಯ ಕಾರಣ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ Xನಲ್ಲಿ ಪತ್ರಿಕಾ ವರದಿಯನ್ನು ಉಲ್ಲೇಖಿಸಿ ಸಂದೇಶವೊಂದನ್ನು ಪ್ರಕಟಿಸಿರುವ ಸುರ್ಜೇವಾಲ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾನ್ಯ ನಾಗರಿಕರ ಸಬಲೀಕರಣಕ್ಕೆ ದಾರಿಮಾಡಿಕೊಟ್ಟಿವೆ ಎಂದಿದ್ದಾರೆ. ಈ ಯೋಜನೆಗಳ ಮೂಲಕ ವಾರ್ಷಿಕವಾಗಿ 53,000 ಕೋಟಿ ರೂಪಾಯಿಗಳ ಸೌಲಭ್ಯವನ್ನು ರಾಜ್ಯದ ಕೋಟ್ಯಂತರ ಜನರಿಗೆ ಒದಗಿಸಲಾಗುತ್ತಿದ್ದು, ಇದು ರಾಷ್ಟ್ರೀಯ ಮಾನದಂಡವಾಗಿ ಹೊರಹೊಮ್ಮಿದೆ.

ADVERTISEMENT
ADVERTISEMENT

ಗ್ಯಾರಂಟಿ ಯೋಜನೆಗಳು ರಾಜ್ಯವನ್ನು ದಿವಾಳಿಯಾಗಿಸುತ್ತವೆ ಎಂಬ ಬಿಜೆಪಿಯ ಆರೋಪವನ್ನು ಖಂಡಿಸಿರುವ ಸುರ್ಜೇವಾಲ, ಕೇಂದ್ರ ಹಣಕಾಸು ಸಚಿವಾಲಯದ ದತ್ತಾಂಶವೇ ಈ ಆರೋಪದ ಪೊಳ್ಳುತನವನ್ನು ಬಯಲಿಗೆಳೆದಿದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕತ್ವದಲ್ಲಿ ಕರ್ನಾಟಕವು ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಪ್ರಗತಿಯನ್ನು ಸಮತೋಲನದಿಂದ ಕೊಂಡೊಯ್ಯುತ್ತಿದೆ. ಕಲ್ಯಾಣ ಕಾರ್ಯಕ್ರಮಗಳಿಂದ ಬೆಳವಣಿಗೆಯವರೆಗೆ, ರಾಜ್ಯವು ಹೊಸ ಎತ್ತರವನ್ನು ಏರುತ್ತಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯಾಂಶಗಳು:
Exit mobile version