ಆಂಧ್ರಪ್ರದೇಶದ ಕಾಶಿಬುಗ್ಗದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಘಟನೆ ಸಂಭವಿಸಿದೆ. ಈ ದುರಂತದಲ್ಲಿ 9 ಭಕ್ತರು ಪ್ರಾಣಬಿಟ್ಟಿದ್ದು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ದೇವಾಲಯದಲ್ಲಿ ನಡೆಯುತ್ತಿದ್ದ ವಿಶೇಷ ಪೂಜೆಯ ಸಮಯದಲ್ಲಿ ಅತಿಯಾದ ಭಕ್ತರ ಗುಂಪಿನ ಒತ್ತಡದಿಂದಾಗಿ ಈ ಕಾಲ್ತುಳಿತ ಸಂಭವಿಸಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ವೈದ್ಯರು ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೆಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೇವಾಲಯ ನಿರ್ವಹಣೆಯಲ್ಲಿ ಭದ್ರತಾ ವ್ಯವಸ್ಥೆಯ ಕೊರತೆ ಇದ್ದಿದ್ದು ಕಂಡುಬಂದಿದೆ.
శ్రీకాకుళం జిల్లాలోని కాశీబుగ్గ వెంకటేశ్వర ఆలయంలో తొక్కిసలాట ఘటన కలచివేసింది. ఈ దురదృష్టకర ఘటనలో భక్తులు మరణించడం అత్యంత విషాదకరం. మృతుల కుటుంబాలకు ప్రగాఢ సానుభూతిని తెలియజేస్తున్నాను. గాయాల పాలైన వారికి మేలైన సత్వర చికిత్స అందించాలని అధికారులను ఆదేశించాను. ఘటనా స్థలానికి వెళ్లి…
— N Chandrababu Naidu (@ncbn) November 1, 2025
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ನಷ್ಟಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದೆ. ಗಾಯಗೊಂಡವರ ಚಿಕಿತ್ಸೆಯ ಎಲ್ಲಾ ವೆಚ್ಚಗಳನ್ನು ಸರ್ಕಾರ ವಹಿಸುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಭದ್ರತಾ ವ್ಯವಸ್ಥೆಯ ಪುನರ್ಪರಿಶೀಲನೆ ನಡೆಸಲು ನಿರ್ಧರಿಸಿದೆ. ಭವಿಷ್ಯದಲ್ಲಿ ಇಂತಹ ದುರಂತಗಳು ನಡೆಯದಂತೆ ತಡೆಯಲು ಹೊಸ ಮಾರ್ಗಸೂಚಿಗಳನ್ನು ತಯಾರಿಸಲಾಗುವುದು





