ಕೇರಳ: ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಯುವಕನೊಬ್ಬ ಅಕಸ್ಮಿಕವಾಗಿ ಮೃತಪಟ್ಟಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ನಡೆದಿದೆ.
ಘಟನೆ ವಿವರ:
ಪುತ್ತುಪ್ಪಲ್ಲಿ ನಿವಾಸಿ ಆದರ್ಶ್ ಅಲಿಯಾಸ್ ಉನ್ನಿ (25) ಸಾವನ್ನಪ್ಪಿದ ಯುವಕ. ತನ್ನ ಸ್ನೇಹಿತರೊಂದಿಗೆ ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಭಾನುವಾರ ಸಂಜೆ 4.30ರ ಸುಮಾರಿಗೆ ಮೀನನ್ನು ಹಿಡಿಯಲು ಪ್ರಯತ್ನಿಸುತ್ತಿದ್ದ ವೇಳೆ, ದಿಢೀರ್ ಒಂದು ಮೀನು ಬಾಯಿಗೆ ಹಾರಿ ಗಂಟಲೊಳಗೆ ಸಿಲುಕಿಕೊಂಡಿದೆ. ತಕ್ಷಣವೇ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಯುವಕನ ಜೀವ ಉಳಿಸಲು ಸಾಧ್ಯವಾಗಲಿಲ್ಲ.