ಬರ್ತ್‌ಡೇ ಪಾರ್ಟಿಗೆಂದು ಕರೆದೊಯ್ದು ಪರಿಚಯಸ್ಥರಿಂದಲೇ ಮಹಿಳೆ ಮೇಲೆ ಸಾಮೂಹಿಕ ಅ*ತ್ಯಾಚಾರ

ಇಬ್ಬರು ಆರೋಪಿಗಳ ವಿರುದ್ಧ ಎಫ್‌ಐಆರ್!

111 (44)

ಕೋಲ್ಕತ್ತಾ: ಮಹಿಳೆಯೊಬ್ಬಳ ಹುಟ್ಟುಹಬ್ಬದ ದಿನವೇ ಆಕೆಯ ಮೇಲೆ ಇಬ್ಬರು ಪರಿಚಯಸ್ಥರು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಕೋಲ್ಕತ್ತಾದ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ನಡೆದಿದೆ.

ಶುಕ್ರವಾರ ದಕ್ಷಿಣ ಕೋಲ್ಕತ್ತಾದ ಹೊರವಲಯದಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಗಳಾದ ಚಂದನ್ ಮಲಿಕ್ ಮತ್ತು ದೀಪ್ ಎಂಬುವವರನ್ನು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿಯಾಗಿದ್ದಾನೆ ಎಂದು ವರದಿಯಾಗಿದೆ.

ಹರಿದೇವ್‌ಪುರದ ಮಹಿಳೆಯನ್ನು ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಚಂದನ್ ಮತ್ತು ದೀಪ್ ತಮ್ಮ ಮನೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಶನಿವಾರ ಬೆಳಗ್ಗೆ ಮಹಿಳೆ ತಪ್ಪಿಸಿಕೊಂಡು ಬಂದು ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾಳೆ. ಕುಟುಂಬಸ್ಥರು ತಕ್ಷಣವೇ ರೀಜೆಂಟ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ.

ಚಂದನ್ ಮಲಿಕ್ ಮಹಿಳೆಗೆ ಹಲವು ದಿನಗಳಿಂದ ಪರಿಚಯವಾಗಿದ್ದ. ಆತ ದಕ್ಷಿಣ ಕೋಲ್ಕತ್ತಾದ ದುರ್ಗಾ ಪೂಜಾ ಸಮಿತಿಯ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ. ಚಂದನ್ ದೀಪ್‌ನನ್ನು ಮಹಿಳೆಗೆ ಪರಿಚಯಿಸಿದ್ದ. ಇಬ್ಬರೂ ಮಹಿಳೆಯನ್ನು ತಮ್ಮ ಸಮಿತಿಯಲ್ಲಿ ಸೇರಿಸಿಕೊಳ್ಳುವ ಭರವಸೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕೋಲ್ಕತ್ತಾದಲ್ಲಿ ಅತ್ಯಾಚಾರ ಪ್ರಕರಣಗಳ ಏರಿಕೆ

ಕೋಲ್ಕತ್ತಾದಲ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಮತ್ತು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಜೂನ್ 25 ರಂದು ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನ ಆವರಣದಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣದಲ್ಲಿ ಕಾಲೇಜಿನ ಹಳೆಯ ವಿದ್ಯಾರ್ಥಿ ಮೋನೋಜಿತ್ ಮಿಶ್ರಾನನ್ನು ಬಂಧಿಸಲಾಗಿತ್ತು. ಕಳೆದ ವರ್ಷ ಆರ್‌ಜಿಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ಇಂತಹ ಅಪರಾಧಗಳ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version