ಮಹಾರಾಷ್ಟ್ರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ: 15 ಮಂದಿ ಸಾವು, 18 ಜನರಿಗೆ ಗಂಭೀರ ಗಾಯ!

BeFunky collage 2026 03 01T123459.904

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಸ್ಫೋಟಕಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 15 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮಹಿಳೆಯರೂ ಸೇರಿದ್ದು, 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಸ್ಫೋಟವು ಕಟೋಲ್ ತಹಸಿಲ್‌ನ ರೌಲ್ಗಾಂವ್‌ನಲ್ಲಿರುವ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್ ಕಾರ್ಖಾನೆಯ ಡಿಟೋನೇಟರ್ ಪ್ಯಾಕಿಂಗ್ ಘಟಕದಲ್ಲಿ ಬೆಳಗ್ಗೆ 7 ರಿಂದ 7:15 ರ ನಡುವೆ ನಡೆದಿದೆ. ಬೆಳಗ್ಗೆ 6 ಗಂಟೆ ಪಾಳಿಗೆ ಕೆಲಸಕ್ಕೆ ಬಂದಿದ್ದ 35 ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ :

ಸ್ಫೋಟದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಡಿಟೋನೇಟರ್ ಪ್ಯಾಕಿಂಗ್ ವಿಭಾಗದಲ್ಲಿ ಸಂಭವಿಸಿದ್ದರಿಂದ ತಾಂತ್ರಿಕ ದೋಷ ಅಥವಾ ನಿರ್ಲಕ್ಷ್ಯದ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ತನಿಖೆಯನ್ನು ಆರಂಭಿಸಲಾಗಿದ್ದು, ಕಾರ್ಖಾನೆಯ ಸುರಕ್ಷತಾ ಮಾನದಂಡಗಳ ಬಗ್ಗೆ ವಿಚಾರಣೆ ನಡೆಯಲಿದೆ.

ಈ ಘಟನೆಯಿಂದ ಮಹಾರಾಷ್ಟ್ರದ ಕೈಗಾರಿಕಾ ಸುರಕ್ಷತೆಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸರ್ಕಾರ ಮತ್ತು ಕಂಪನಿಯಿಂದ ಪೂರ್ಣ ಪರಿಹಾರದ ಭರವಸೆ ನೀಡಲಾಗಿದೆ.

Exit mobile version