ಮಹಾರಾಷ್ಟ್ರದ ಅಂಕೋಲಾದಲ್ಲಿ ಸಂಭಾಜಿ ಬ್ರಿಗೇಡ್‌ನ ಮಾಜಿ ನಾಯಕನೊಬ್ಬನ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಘಟನೆ ಬುಧವಾರ ಮುರ್ತಿಜಾಪುರ ತಾಲೂಕಿನಲ್ಲಿ ನಡೆದಿದ್ದು, ಡಾ. ಗಜಾನನ ಪಾರ್ಧಿ ಎಂಬ ಈ ಮಾಜಿ ನಾಯಕ, ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ.
ವಿಡಿಯೋದಲ್ಲಿ, ಕಾರಿನ ಬಾಗಿಲು ತೆರೆದಿರುವ ಸ್ಥಿತಿಯಲ್ಲಿ ಕುಳಿತಿರುವ ಗಜಾನನ ಪಾರ್ಧಿಯವರ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆಯುತ್ತಿರುವ ದೃಶ್ಯ ಕಾಣಿಸಿಕೊಂಡಿದೆ. ಈ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಪಾರ್ಧಿಯವರು ಖಾಸಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಬಳಸಿಕೊಂಡು ಮಹಿಳೆಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಫೋಟೋಗಳನ್ನು ಬಹಿರಂಗಪಡಿಸುವ ಬೆದರಿಕೆಯ ಮೂಲಕ ಆಕೆಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದರು ಎಂಬುದು ಮಹಿಳೆಯ ಆರೋಪವಾಗಿದೆ.
In Maharashtra, former state president of Sambhaji Brigade Party, Dr. Gajanan Pardhi was beaten with slippers by a woman.
According to the information, the woman accused him of blackmailing, demanding money, threatening to make photos and videos viral as well as molesting him. pic.twitter.com/CiPI8n59sh
— 𝗜𝗻𝗱𝗶𝗮 𝗢𝗯𝘀𝗲𝗿𝘃𝗲𝗿 (@IndiaObserverX) July 24, 2025
ಈ ಘಟನೆಯ ಬಗ್ಗೆ ಇದುವರೆಗೆ ಯಾವುದೇ ಔಪಚಾರಿಕ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ ಎನ್ನಲಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.
ಸಂಭಾಜಿ ಬ್ರಿಗೇಡ್ ಈ ಘಟನೆಗೆ ಪ್ರತಿಕ್ರಿಯೆಯಾಗಿ ತಕ್ಷಣ ಕ್ರಮ ಕೈಗೊಂಡಿದ್ದು, ಗಜಾನನ ಪಾರ್ಧಿಯವರನ್ನು ಪಕ್ಷದಿಂದ ಶಾಶ್ವತವಾಗಿ ಉಚ್ಛಾಟಿಸಿದೆ. ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬ್ರಿಗೇಡ್, ಅಶಿಸ್ತು, ದುರ್ನಡತೆ ಮತ್ತು ಸಂಸ್ಥೆಯ ಪ್ರತಿಷ್ಠೆಗೆ ಕಳಂಕ ತಂದ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಈಗಾಗಲೇ ಪಾರ್ಧಿಯವರನ್ನು ಅವರ ಹುದ್ದೆಯಿಂದ ತೆಗೆದುಹಾಕಲಾಗಿತ್ತು..