• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೋಜಶಾಲಾ ಇನ್ಮುಂದೆ ದೇವಸ್ಥಾನ: ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 15, 2026 - 4:12 pm
in Flash News, ದೇಶ
0 0
0
Untitled design 2026 05 15T161120.125

RelatedPosts

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ಜುಲೈ 15 ರಿಂದ ಆಗಸ್ಟ್ 15ರವರೆಗೆ ಕೆಂಪುಕೋಟೆ ಬಂದ್; ಪ್ರವಾಸಿಗರಿಗೆ ನೋ ಎಂಟ್ರಿ!

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ADVERTISEMENT
ADVERTISEMENT

ಭೋಪಾಲ್: ಹಲವು ದಶಕಗಳಿಂದ ವಿವಾದದ ಕೇಂದ್ರವಾಗಿದ್ದ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ಹಾಗೂ ಐತಿಹಾಸಿಕ ತೀರ್ಪು ನೀಡಿದೆ. ಇಂದೋರ್ ಪೀಠವು ಭೋಜಶಾಲಾ ಆವರಣವನ್ನು ದೇವಸ್ಥಾನ ಎಂದು ಘೋಷಿಸಿ, ಹಿಂದೂಗಳಿಗೆ ಇಲ್ಲಿ ಪೂಜೆ ಸಲ್ಲಿಸುವ ಸಂಪೂರ್ಣ ಹಕ್ಕು ಇದೆ ಎಂದು ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ. ಮೇ 12ರಂದು ವಿಚಾರಣೆ ಪೂರ್ಣಗೊಂಡ ಬಳಿಕ ಕಾಯ್ದಿರಿಸಲಾಗಿದ್ದ ತೀರ್ಪನ್ನು ಇಂದು ಪ್ರಕಟಿಸಲಾಯಿತು..

ಈ ಪ್ರಕರಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿ ಪ್ರಮುಖ ಆಧಾರವಾಗಿತ್ತು. ಸಮೀಕ್ಷೆಯಲ್ಲಿ ಪತ್ತೆಯಾದ ಸಾಕ್ಷ್ಯಾಧಾರಗಳು ಈ ಸ್ಥಳವು ಮೂಲತಃ ಹಿಂದೂ ದೇವಸ್ಥಾನವಾಗಿತ್ತು ಎಂಬುದನ್ನು ದೃಢಪಡಿಸುತ್ತವೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಹೈಕೋರ್ಟ್ ತನ್ನ ತೀರ್ಪಿನಲ್ಲಿ ಭೋಜಶಾಲಾ ಸಂಕೀರ್ಣವು ರಾಜ ಭೋಜ ನಿರ್ಮಿಸಿದ್ದ ವಾಗ್ದೇವಿ ಅಥವಾ ಸರಸ್ವತಿ ದೇವಾಲಯ ಮತ್ತು ಸಂಸ್ಕೃತ ಅಧ್ಯಯನ ಕೇಂದ್ರವಾಗಿತ್ತು ಎಂದು ಉಲ್ಲೇಖಿಸಿದೆ. ಪರಮಾರ ರಾಜವಂಶದ ಕಾಲದಲ್ಲಿ ನಿರ್ಮಾಣಗೊಂಡಿದ್ದ ಈ ಕೇಂದ್ರವು ಶಿಕ್ಷಣ ಹಾಗೂ ಧಾರ್ಮಿಕ ಚಟುವಟಿಕೆಗಳ ಪ್ರಮುಖ ತಾಣವಾಗಿತ್ತು ಎಂದು ತಿಳಿಸಿದೆ.

ಎಎಸ್‌ಐ ಸಮೀಕ್ಷೆಯಲ್ಲಿ ಪತ್ತೆಯಾದ ಸಂಸ್ಕೃತ ಮತ್ತು ಪ್ರಾಕೃತ ಭಾಷೆಯ ಶಾಸನಗಳು, ಪುರಾತನ ಕೆತ್ತನೆಗಳು ಹಾಗೂ ಬ್ರಹ್ಮ, ಗಣೇಶ ಸೇರಿದಂತೆ 94ಕ್ಕೂ ಹೆಚ್ಚು ಹಿಂದೂ ದೇವತೆಗಳ ವಿಗ್ರಹಗಳ ಅವಶೇಷಗಳು ದೇವಸ್ಥಾನದ ಅಸ್ತಿತ್ವವನ್ನು ಬಲಪಡಿಸುತ್ತವೆ ಎಂದು ನ್ಯಾಯಾಲಯ ಹೇಳಿದೆ.

ಇದಲ್ಲದೆ, ಪ್ರಸ್ತುತ ಇರುವ ಕಮಲ್ ಮೌಲಾ ಮಸೀದಿ ರಚನೆಯನ್ನು ಹಿಂದಿನ ದೇವಸ್ಥಾನದ ಸ್ತಂಭಗಳು, ಕಲ್ಲುಗಳು ಮತ್ತು ಅವಶೇಷಗಳನ್ನು ಬಳಸಿ ನಿರ್ಮಿಸಲಾಗಿದೆ ಎಂಬುದೂ ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಕಮಲ್ ಮೌಲಾ ಮಸೀದಿ ಸಮಿತಿ ಪರ ವಕೀಲರು ಎಎಸ್‌ಐ ಸಮೀಕ್ಷೆ ಏಕಪಕ್ಷೀಯವಾಗಿದೆ ಹಾಗೂ ಮುಸ್ಲಿಂ ಅರ್ಜಿದಾರರ ಹಕ್ಕುಗಳನ್ನು ಕಡೆಗಣಿಸಲಾಗಿದೆ ಎಂದು ವಾದಿಸಿದ್ದರು. ಆದರೆ ಈ ವಾದವನ್ನು ಹೈಕೋರ್ಟ್ ತಿರಸ್ಕರಿಸಿ, ವೈಜ್ಞಾನಿಕ ಸಮೀಕ್ಷೆಯು ಸಮರ್ಪಕ ರೀತಿಯಲ್ಲಿ ನಡೆದಿದ್ದು, ಅದರ ವರದಿಯಲ್ಲಿ ಸ್ಪಷ್ಟ ಸಾಕ್ಷ್ಯಗಳಿವೆ ಎಂದು ತಿಳಿಸಿದೆ.

ಧಾರ್ಮಿಕ ಸ್ಥಳಗಳ ಸಂರಕ್ಷಣೆ ಮತ್ತು ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಸಾಂವಿಧಾನಿಕ ಕರ್ತವ್ಯ ಎಂದು ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಈ ಹಿನ್ನೆಲೆ ಭೋಜಶಾಲಾ ಪ್ರದೇಶದ ಸಂರಕ್ಷಣೆ ಮತ್ತು ಭಕ್ತರ ಸುರಕ್ಷತೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.

ಭೋಜಶಾಲಾ ವಿವಾದ ಕಳೆದ ಎರಡು ದಶಕಗಳಿಂದ ಹೆಚ್ಚು ಚರ್ಚೆಗೆ ಕಾರಣವಾಗಿತ್ತು. ಕಳೆದ 21 ವರ್ಷಗಳಿಂದ ಪ್ರತಿ ಮಂಗಳವಾರ ಹಿಂದೂಗಳು ಇಲ್ಲಿ ಪೂಜೆ ಸಲ್ಲಿಸುತ್ತಿದ್ದರೆ, ಶುಕ್ರವಾರದಂದು ಮುಸ್ಲಿಮರು ನಮಾಜ್ ಆಚರಿಸುತ್ತಿದ್ದರು. ಈ ವ್ಯವಸ್ಥೆಯ ನಡುವೆಯೇ ಸ್ಥಳದ ಮೂಲ ಸ್ವರೂಪ ಕುರಿತು ವಿವಾದ ಮುಂದುವರಿದಿತ್ತು.

ಈ ಸಂಬಂಧ ‘ಹಿಂದೂ ಫ್ರಂಟ್ ಫಾರ್ ಜಸ್ಟಿಸ್’ ಸಂಘಟನೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ವೈಜ್ಞಾನಿಕ ಸಮೀಕ್ಷೆಗೆ ಮನವಿ ಮಾಡಿತ್ತು. ಅದರಂತೆ ನ್ಯಾಯಾಲಯ ಎಎಸ್‌ಐಗೆ ಸಮೀಕ್ಷೆ ನಡೆಸಲು ಆದೇಶಿಸಿತ್ತು. ಸಮೀಕ್ಷಾ ವರದಿ ಸಲ್ಲಿಕೆಯಾದ ನಂತರ ಪ್ರಕರಣದ ಅಂತಿಮ ವಿಚಾರಣೆ ನಡೆದು, ಇದೀಗ ತೀರ್ಪು ಪ್ರಕಟವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version