ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಕಾಮುಕನಿಂದ ಅತ್ಯಾ*ಚಾರ

Untitled design 2026 01 21T130434.464

ಮುಂಬೈ: ಕೇವಲ ಎರಡೂವರೆ ತಿಂಗಳ ನಾಯಿ ಮರಿಯ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಧ್ಯ ಈ ಅಮಾನವೀಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಡೆದದ್ದೇನು ?

ಮುಂಬೈನ ಮಲಾಡ್ ಪ್ರದೇಶದ ಸಾರ್ವಜನಿಕ ಶೌಚಾಲಯವೊಂದರಲ್ಲಿ ಈ ಘಟನೆ ನಡೆದಿದೆ. ಆರೋಪಿ ನಾಯಿ ಮರಿಯನ್ನು ಬಲವಂತವಾಗಿ ಶೌಚಾಲಯದೊಳಗೆ ಕರೆದೊಯ್ದು ಅದರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೆ, ಆ ಪುಟ್ಟ ಪ್ರಾಣಿಯನ್ನು ಕ್ರೂರವಾಗಿ ಥಲಿಸಿ ಹಿಂಸಿಸಿದ್ದಾನೆ. ಈ ಬಗ್ಗೆ ಪ್ರಾಣಿ ಕಲ್ಯಾಣ ಸಂಸ್ಥೆಯಾದ ಪಿಎಎಲ್ (ಪ್ಯೂರ್ ಅನಿಮಲ್ ಲವರ್ಸ್) ಫೌಂಡೇಶನ್‌ನ ಕಾರ್ಯಕರ್ತರಿಗೆ ಮಾಹಿತಿ ತಿಳಿದ ತಕ್ಷಣ ಅವರು ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸ್ಥಳದಲ್ಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ವೈರಲ್ ಆಗಿರುವ ವಿಡಿಯೋದಲ್ಲಿ, ಮುಂಬೈ ಪೊಲೀಸರು ಮತ್ತು ಪ್ರಾಣಿ ದಯಾ ಸಂಘದ ಕಾರ್ಯಕರ್ತರು ಶೌಚಾಲಯದ ಬಾಗಿಲು ಬಡಿಯುತ್ತಿರುವುದು ಕಂಡುಬಂದಿದೆ. ಆರೋಪಿ ಮೊದಲು ಬಾಗಿಲು ತೆರೆಯಲು ನಿರಾಕರಿಸಿದ್ದಾನೆ. ಆದರೆ ಪೊಲೀಸರು ಬಲವಂತವಾಗಿ ಒಳಪ್ರವೇಶಿಸಿದಾಗ ಆತನ ವಿಕೃತಿ ಬಯಲಾಗಿದೆ. ಅರೆಬೆತ್ತಲೆ ಸ್ಥಿತಿಯಲ್ಲಿದ್ದ ಆರೋಪಿಯನ್ನು ಪೊಲೀಸರು ತಕ್ಷಣವೇ ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯ ದೃಶ್ಯಗಳು ಈಗ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಮತ್ತು ದೈಹಿಕ ಹಲ್ಲೆಯಿಂದಾಗಿ ಎರಡೂವರೆ ತಿಂಗಳ ನಾಯಿ ಮರಿ ಗಂಭೀರವಾಗಿ ಗಾಯಗೊಂಡಿದೆ. ಪಿಎಎಲ್ ಫೌಂಡೇಶನ್‌ನ ಸದಸ್ಯರು ಅದನ್ನು ತಕ್ಷಣವೇ ಪಶು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಧ್ಯ ನಾಯಿ ಮರಿ ವೈದ್ಯಕೀಯ ನಿಗಾದಲ್ಲಿದ್ದು, ಅದರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಘಟನೆಯ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಮತ್ತು ಆರೋಪಿಗೆ ಸೂಕ್ತ ಶಿಕ್ಷೆ ಕೊಡಿಸಲು ಬದ್ಧರಾಗಿದ್ದೇವೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Exit mobile version