ನೀಟ್ ಪ್ರಶ್ನೆ ಪತ್ರಿಕೆ ಅಕ್ರಮ: ಮೂವರು ನೀಟ್ ಆಕಾಂಕ್ಷಿಗಳು ಆತ್ಮಹ*ತ್ಯೆ

Untitled design 2026 05 16T113759.140

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಕ್ಕೆ ಸಾಲು ಸಾಲು ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಉತ್ತರ ಪ್ರದೇಶ, ದೆಹಲಿ ಮತ್ತು ರಾಜಸ್ಥಾನಗಳಲ್ಲಿ ಮೂವರು ನೀಟ್ ಮಹತ್ವಾಕಾಂಕ್ಷಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ನಡೆದಿವೆ. ಪರೀಕ್ಷೆ ರದ್ದಾದ ಬೆನ್ನಲ್ಲೇ ಮಾನಸಿಕ ಆತಂಕಕ್ಕೊಳಗಾದ ಈ ವಿದ್ಯಾರ್ಥಿಗಳು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರವು ಮುಂದಿನ ಜೂನ್ 21ರಂದು ಮರು ಪರೀಕ್ಷೆ ನಡೆಸುವುದಾಗಿ ಘೋಷಿಸಿರುವುದರಿಂದ ಲಕ್ಷಾಂತರ ಅಭ್ಯರ್ಥಿಗಳು ಮತ್ತೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಈಗಾಗಲೇ ಹಲವು ಬಾರಿ ಪರೀಕ್ಷೆ ಬರೆದು ಉತ್ತಮ ಅಂಕಗಳ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಒತ್ತಡವನ್ನು ಉಂಟುಮಾಡಿದೆ.

ಉತ್ತರ ಪ್ರದೇಶದ ಲಖೀಂಪುರದಲ್ಲಿ 21 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಅವರು ಈ ವರ್ಷ ಮೂರನೇ ಬಾರಿಗೆ ನೀಟ್ ಪರೀಕ್ಷೆ ಬರೆದಿದ್ದರು ಮತ್ತು ಈ ಬಾರಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದರು ಎಂದು ಹೇಳಲಾಗಿದೆ.

ಇನ್ನೊಂದು ಘಟನೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೀಟ್ ವಿದ್ಯಾರ್ಥಿನಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಅವರು ಕಳೆದ ಕೆಲವು ವರ್ಷಗಳಿಂದ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅವರ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ. ನೀಟ್ ಆಕಾಂಕ್ಷಿಯೊಬ್ಬರು ಸಾವನ್ನಪ್ಪಿದ್ದು, ಅವರು ಈ ಬಾರಿ ಉತ್ತಮ ಅಂಕಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

Exit mobile version