• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಣಿಪುರದ ಮುಖ್ಯಮಂತ್ರಿಯಾಗಿ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 4, 2026 - 8:26 pm
in Flash News, ದೇಶ
0 0
0
Untitled design 2026 02 04T202027.254

RelatedPosts

ಪತಿ-ಪತ್ನಿ ಆತ್ಮಹತ್ಯೆಗೆ ಶರಣು: ಪೊಲೀಸರ ಕಿರುಕುಳ ಶಂಕೆ

CEC ಜ್ಞಾನೇಶ್ ಕುಮಾರ್‌ಗೆ ರಾಜೀನಾಮೆ ಕೊಡದಿದ್ರೆ ಹೋರಾಟ: CJP ಆಗ್ರಹ

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ADVERTISEMENT
ADVERTISEMENT

ಇಂಫಾಲ, ಫೆ. 4: ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಅವರು ಬುಧವಾರ ಮಣಿಪುರದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ರಾಜಭವನದಲ್ಲಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಕಳೆದ ವರ್ಷ ಫೆಬ್ರವರಿಯಿಂದ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದ್ದು, ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಹಾಗೂ ಆಡಳಿತಾತ್ಮಕ ಸವಾಲುಗಳು ಎದುರಾಗಿದ್ದವು. ಇದೀಗ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯೊಂದಿಗೆ ಮಣಿಪುರದಲ್ಲಿ ಹೊಸ ರಾಜಕೀಯ ಅಧ್ಯಾಯ ಆರಂಭವಾಗಿದೆ.

ಮಂಗಳವಾರ ರಾಜ್ಯ ಬಿಜೆಪಿ ಅಧ್ಯಕ್ಷೆ ಎ. ಶಾರದಾ ದೇವಿ ಅವರ ನೇತೃತ್ವದಲ್ಲಿ ಎನ್‌ಡಿಎ ಶಾಸಕಾಂಗ ಪಕ್ಷದ ಪ್ರತಿನಿಧಿ ತಂಡವು ಲೋಕಭವನದಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿತು. ಈ ಸಂದರ್ಭದಲ್ಲಿ ಬಿಜೆಪಿ ಕೇಂದ್ರ ವೀಕ್ಷಕ ತರುಣ್ ಚುಗ್ ಹಾಗೂ ಈಶಾನ್ಯ ಸಂಯೋಜಕ ಸಂಬಿತ್ ಪಾತ್ರ ಉಪಸ್ಥಿತರಿದ್ದರು. ಪ್ರತಿನಿಧಿಗಳ ಮನವಿಯನ್ನು ಪರಿಗಣಿಸಿದ ರಾಜ್ಯಪಾಲರು, ಸರ್ಕಾರ ರಚಿಸಲು ಯುನ್ಮಮ್‌ ಖೇಮ್‌ಚಂದ್ ಸಿಂಗ್ ಅವರಿಗೆ ಆಹ್ವಾನ ನೀಡಿದರು.

ಚುರಾಚಂದಪುರ ಹಾಗೂ ಫೆರ್ಝಾವಲ್ ಸೇರಿದಂತೆ ಕುಕಿ–ಜೋ ಸಮುದಾಯ ಬಹುಸಂಖ್ಯಾತ ಜಿಲ್ಲೆಗಳ ಇಬ್ಬರು ಶಾಸಕರು ಕೂಡ ರಾಜ್ಯಪಾಲರನ್ನು ಭೇಟಿಯಾದ ಎನ್‌ಡಿಎ ಪ್ರತಿನಿಧಿಗಳಲ್ಲಿ ಸೇರಿದ್ದರು. “ಹೊಸದಾಗಿ ಆಯ್ಕೆಯಾದ ಶಾಸಕಾಂಗ ಪಕ್ಷದ ನಾಯಕ ಖೇಮ್‌ಚಂದ್ ಸಿಂಗ್ ಅವರ ನೇತೃತ್ವದಲ್ಲಿ ಮಣಿಪುರದಲ್ಲಿ ಜನಪ್ರಿಯ ಸರ್ಕಾರ ರಚಿಸಲು ಎನ್‌ಡಿಎ ಸಿದ್ಧವಾಗಿದೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷೆ ಎ. ಶಾರದಾ ದೇವಿ ತಿಳಿಸಿದರು.

ನವದೆಹಲಿಯಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ 62 ವರ್ಷದ ಯುನ್ಮಮ್‌ ಖೇಮ್‌ಚಂದ್ ಸಿಂಗ್ ಅವರನ್ನು ಮಣಿಪುರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಒಟ್ಟು 37 ಬಿಜೆಪಿ ಶಾಸಕರ ಪೈಕಿ 35 ಮಂದಿ ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಬಿಜೆಪಿ ಕೇಂದ್ರ ವೀಕ್ಷಕ ತರುಣ್ ಚುಗ್, ಈಶಾನ್ಯ ಉಸ್ತುವಾರಿ ಸಂಬಿತ್ ಪಾತ್ರ ಮತ್ತು ರಾಜ್ಯದ ಹಿರಿಯ ನಾಯಕರು ಉಪಸ್ಥಿತರಿದ್ದರು.

ಇದೇ ವೇಳೆ ದೆಹಲಿಯ ಮಣಿಪುರ ಭವನದಲ್ಲಿ ನಡೆದ ಮತ್ತೊಂದು ಮಹತ್ವದ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಎಲ್ಲಾ ಘಟಕಗಳ ಶಾಸಕರು ಭಾಗವಹಿಸಿದ್ದರು. ರಾಷ್ಟ್ರೀಯ ಪೀಪಲ್ಸ್ ಪಾರ್ಟಿ (ಎನ್‌ಪಿಪಿ)ಯ ಆರು ಶಾಸಕರು, ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್)ನ ಐದು ಶಾಸಕರು, ಮೂವರು ಸ್ವತಂತ್ರ ಶಾಸಕರು ಹಾಗೂ ಬಿಜೆಪಿ ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದು, ಖೇಮ್‌ಚಂದ್ ಸಿಂಗ್ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಅಧಿಕೃತವಾಗಿ ಅನುಮೋದಿಸಿದರು. ಜೊತೆಗೆ ಕುಕಿ ಸಮುದಾಯಕ್ಕೆ ಸೇರಿದ ನೆಮ್ಚಾ ಕಿಪ್ಗೆನ್ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ಉಪ ನಾಯಕಿಯಾಗಿ ಆಯ್ಕೆ ಮಾಡಲಾಯಿತು.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಖೇಮ್‌ಚಂದ್ ಸಿಂಗ್, “ವಿಕಸಿತ ಮಣಿಪುರದ ದೃಷ್ಟಿಕೋನದತ್ತ ಸಾಗುವ ರಾಜಕೀಯ ಪಯಣವು ಸವಾಲುಗಳಿಂದ ಕೂಡಿದೆ. ಆದರೆ, ಶಾಂತಿ, ಸ್ಥಿರತೆ ಮತ್ತು ಅಭಿವೃದ್ಧಿಯೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಗಳು. ನನ್ನ ಮೇಲೆ ಇಡಲಾದ ನಂಬಿಕೆ ಮತ್ತು ಜವಾಬ್ದಾರಿಗೆ ನಾನು ಹೃತ್ಪೂರ್ವಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹೇಳಿದರು.

ಸೋಶಿಯಲ್ ಮೀಡಿಯಾದಲ್ಲೂ ಪ್ರತಿಕ್ರಿಯೆ ನೀಡಿದ ಅವರು, “ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮತ್ತು ಈಶಾನ್ಯ ಸಂಯೋಜಕ ಸಂಬಿತ್ ಪಾತ್ರ ಅವರ ಸಮ್ಮುಖದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವುದು ಸಂತಸದ ಕ್ಷಣ” ಎಂದು ಬರೆದುಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಜ್ಞಾನೇಶ್ (5)

ವಿಷ್ಣು ಅಮೃತ ಮಹೋತ್ಸವ.. ಯಾರೆಲ್ಲಾ ಬರ್ತಿದ್ದಾರೆ ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 25, 2026 - 4:09 pm
0

ಜ್ಞಾನೇಶ್ (4)

ಇಂದು ರಾಜ್ಯಾದ್ಯಂತ ತೆರೆ ಕಂಡ ಸ್ಪಾರ್ಕ್ ಸಿನಿಮಾ

by ಕವಿತಾ
September 25, 2026 - 4:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version