• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ಕವಿತಾ by ಕವಿತಾ
August 31, 2026 - 3:48 pm
in ದೇಶ, ವಿದೇಶ
0 0
0
Untitled design (13)

ಬಿಷ್ಕೆಕ್, ಆಗಸ್ಟ್ 31: ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಅವರನ್ನು ಭೇಟಿ ಮಾಡಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧ ಆರಂಭವಾದ ಬಳಿಕ ಉಭಯ ನಾಯಕರ ನಡುವಿನ ಮೊದಲ ಮುಖಾಮುಖಿ ಸಭೆ ಇದಾಗಿದೆ.

ಸಭೆಯಲ್ಲಿ ಭಾರತ ಮತ್ತು ಇರಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳ ಪ್ರಸ್ತುತ ಸ್ಥಿತಿ, ಪರಸ್ಪರ ಆಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ ಎಂದು ವರದಿಗಳು ತಿಳಿಸಿದೆ. ಆದರೆ ಸಭೆಯ ಚರ್ಚೆಯ ಸಂಪೂರ್ಣ ವಿವರಗಳ ಕುರಿತು ಎರಡೂ ದೇಶಗಳ ಕಡೆಯಿಂದ ಅಧಿಕೃತ ಹೇಳಿಕೆ ಇನ್ನೂ ಹೊರಬಿದ್ದಿಲ್ಲ.

RelatedPosts

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ADVERTISEMENT
ADVERTISEMENT

ಆದಾಗ್ಯೂ, ಸಭೆಯಲ್ಲಿ ಹಾರ್ಮುಜ್ ಜಲಸಂಧಿಯಲ್ಲಿನ ಪರಿಸ್ಥಿತಿ, ಭಾರತೀಯ ಹಡಗುಗಳ ಸುರಕ್ಷಿತ ಸಂಚಾರ ಹಾಗೂ ನಾವಿಕರ ಭದ್ರತೆ ಕುರಿತು ಚರ್ಚೆ ನಡೆದಿರುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ. ವಿಶ್ವದ ಕಚ್ಚಾ ತೈಲ ಸಾಗಣೆಯ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿನ ಉದ್ವಿಗ್ನತೆ ಭಾರತ ಸೇರಿದಂತೆ ಹಲವು ದೇಶಗಳ ಆರ್ಥಿಕ ಮತ್ತು ಇಂಧನ ಭದ್ರತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಇರಾನ್-ಅಮೆರಿಕ ಸಂಘರ್ಷ ಆರಂಭವಾದ ಬಳಿಕ ಪ್ರಧಾನಿ ಮೋದಿ ಅವರು ಇರಾನ್ ನಾಯಕತ್ವದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಿಕೊಳ್ಳಬೇಕು ಹಾಗೂ ಯಾವುದೇ ಸಂಘರ್ಷವನ್ನು ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗದ ಮೂಲಕ ಪರಿಹರಿಸಬೇಕು ಎಂಬ ನಿಲುವನ್ನು ಭಾರತ ನಿರಂತರವಾಗಿ ಪ್ರತಿಪಾದಿಸುತ್ತಿದೆ.

ಜೂನ್ 30ರಂದು ಪೆಜೆಶ್ಕಿಯನ್ ಅವರೊಂದಿಗೆ ನಡೆದ ದೂರವಾಣಿ ಸಂಭಾಷಣೆಯಲ್ಲಿಯೂ ಪ್ರಧಾನಿ ಮೋದಿ ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಇರಾನ್‌ನಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಿದ್ದಕ್ಕಾಗಿ ಇರಾನ್ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದ್ದರು.

ಇದೇ ವೇಳೆ, ಭಾರತ ಮತ್ತು ಇರಾನ್ ನಡುವಿನ ವ್ಯಾಪಾರ ಹಾಗೂ ಸಂಪರ್ಕವನ್ನು ಹೆಚ್ಚಿಸುವ ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (INSTC) ಯೋಜನೆಗೆ ಮತ್ತಷ್ಟು ವೇಗ ನೀಡುವ ಬಗ್ಗೆಯೂ ಚರ್ಚೆ ನಡೆದಿರುವ ಸಾಧ್ಯತೆ ಇದೆ. ಮಧ್ಯ ಏಷ್ಯಾ ಹಾಗೂ ಯುರೋಪ್‌ನೊಂದಿಗೆ ಭಾರತದ ಸಂಪರ್ಕವನ್ನು ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ್ದಾಗಿದೆ.

ಸಭೆಯಲ್ಲಿ ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಗ್ಚಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇರಾನ್ ಅಧ್ಯಕ್ಷ ಪೆಜೆಶ್ಕಿಯನ್ ಅವರು ತಮ್ಮ ದೇಶ ಯುದ್ಧ ಬಯಸುವುದಿಲ್ಲ, ಆದರೆ ಯಾವುದೇ ಆಕ್ರಮಣಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲಿದೆ ಎಂದು ಹೇಳಿದ್ದಾರೆ.

ಮೋದಿ-ಪುಟಿನ್ ಭೇಟಿ ನಿರೀಕ್ಷೆ

SCO ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಅರ್ಮೇನಿಯಾ ಪ್ರಧಾನಿ ನಿಕೋಲ್ ಪಶಿನ್ಯಾನ್ ಅವರನ್ನೂ ಭೇಟಿ ಮಾಡಿದ್ದಾರೆ. ರಕ್ಷಣಾ, ಆರ್ಥಿಕತೆ, ಔಷಧ, ವಿಜ್ಞಾನ ಮತ್ತು ತಂತ್ರಜ್ಞಾನ, ಶಿಕ್ಷಣ ಹಾಗೂ ಸಂಸ್ಕೃತಿ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಿಸುವ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ.

ಇದರ ನಡುವೆ ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ. ಅಲ್ಲದೆ, ಕಿರ್ಗಿಸ್ತಾನ್ ಅಧ್ಯಕ್ಷ ಸದಿರ್ ಜಪರೋವ್ ಅವರ ಆಹ್ವಾನದ ಮೇರೆಗೆ 6ನೇ ವಿಶ್ವ ಅಲೆಮಾರಿ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲೂ ಪ್ರಧಾನಿ ಮೋದಿ ಭಾಗವಹಿಸುವ ನಿರೀಕ್ಷೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (3)

ಬಿಗ್ ಬಾಸ್: ನಾಲ್ವರು ಸೂಪರ್‌ಸ್ಟಾರ್‌ಗಳನ್ನು ಒಂದೇ ಪರದೆಯಲ್ಲಿ ಕರೆತಂದ JioStar

by ಕವಿತಾ
August 31, 2026 - 4:53 pm
0

ಪಶ್ಚಾತ್ತಾಪ (1)

‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!

by ಕವಿತಾ
August 31, 2026 - 4:41 pm
0

ಪಶ್ಚಾತ್ತಾಪ

‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್

by ಕವಿತಾ
August 31, 2026 - 4:31 pm
0

Untitled design (14)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಕವಿತಾ
August 31, 2026 - 4:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (16)
    ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
    August 31, 2026 | 0
  • ಸಾವು (15)
    ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!
    August 31, 2026 | 0
  • ಸಾವು (13)
    ನೇಪಾಳದಲ್ಲಿ ಭಾರೀ ಮಳೆ: ಉತ್ತರ ಪ್ರದೇಶದ ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!
    August 30, 2026 | 0
  • ಸಾವು (10)
    ನೇಪಾಳ ಪ್ರವಾಹದ ಭೀಕರ ಪರಿಣಾಮ: ಗಂಡಕ್ ನದಿಯಲ್ಲಿ 7 ಅಪರಿಚಿತ ಶವಗಳು ಪತ್ತೆ
    August 30, 2026 | 0
  • ಸಾವು (7)
    ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version