ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

Untitled design 2026 01 16T214225.731

ಮುಂಬೈ: ಮುಂಬೈನ ಬಿಎಂಸಿಯಲ್ಲಿ (BMC) ಸುಮಾರು ಮೂರು ದಶಕಗಳ ಕಾಲ ನಡೆದಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಅಧಿಪತ್ಯ ಅಂತ್ಯವಾಗಿದೆ. ಇಂದು (ಜನವರಿ 16) ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಮೈತ್ರಿಕೂಟವು ಐತಿಹಾಸಿಕ ಜಯ ಸಾಧಿಸಿದೆ. ಈ ಅಭೂತಪೂರ್ವ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ ವ್ಯಕ್ತಪಡಿಸಿ ಶುಭಕೋರಿದ್ದಾರೆ.

ಫಲಿತಾಂಶದ ನಂತರ ತಮ್ಮ ‘ಎಕ್ಸ್’ (X) ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಜನರು ಎನ್‌ಡಿಎಯ ಜನಪರ ಮತ್ತು ಉತ್ತಮ ಆಡಳಿತದ ಕಾರ್ಯಸೂಚಿಯನ್ನು ಆಶೀರ್ವದಿಸಿದ್ದಾರೆ. ಈ ಫಲಿತಾಂಶವು ಎನ್‌ಡಿಎ ಮತ್ತು ಮಹಾರಾಷ್ಟ್ರದ ಜನರ ನಡುವಿನ ಬಾಂಧವ್ಯವು ಇನ್ನಷ್ಟು ಗಟ್ಟಿಯಾಗಿರುವುದನ್ನು ತೋರಿಸುತ್ತದೆ. ನಮ್ಮ ಅಭಿವೃದ್ಧಿಯ ದೃಷ್ಟಿಕೋನವು ಜನರ ಹೃದಯ ಮುಟ್ಟಿದೆ ಎಂದು ಹೇಳಿದ್ದಾರೆ. ಅಲ್ಲದೆ, ವಿರೋಧ ಪಕ್ಷಗಳ ಸುಳ್ಳುಗಳನ್ನು ಎದುರಿಸಿ ದಣಿವರಿಯಿಲ್ಲದೆ ಕೆಲಸ ಮಾಡಿದ ಕಾರ್ಯಕರ್ತರನ್ನು ಮೋದಿ ಅಭಿನಂದಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸಮರ್ಥ ನೇತೃತ್ವದಲ್ಲಿ ಈ ಚುನಾವಣೆ ಎದುರಿಸಲಾಗಿತ್ತು. ಭಾವನಾತ್ಮಕ ರಾಜಕಾರಣಕ್ಕಿಂತ ಅಭಿವೃದ್ಧಿಯ ರಾಜಕಾರಣಕ್ಕೆ ಬೆಲೆ ಸಿಕ್ಕಿದೆ ಎಂದು ಶಿಂಧೆ ತಿಳಿಸಿದ್ದಾರೆ. ಇನ್ನು ಮುಂದೆ ಬಿಎಂಸಿಯಲ್ಲಿ ಬಿಜೆಪಿಯ ಮೇಯರ್ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದ್ದು, ಮುಂಬೈ ನಗರದ ಅಭಿವೃದ್ಧಿಗೆ ಹೊಸ ವೇಗ ಸಿಗುವ ನಿರೀಕ್ಷೆಯಿದೆ.

ಚುನಾವಣಾ ಫಲಿತಾಂಶದ ಅಂಕಿ-ಅಂಶಗಳು

ಒಟ್ಟು 227 ಸದಸ್ಯ ಬಲದ ಬಿಎಂಸಿಯಲ್ಲಿ ಅಧಿಕಾರ ಹಿಡಿಯಲು ಬೇಕಿದ್ದ ಮ್ಯಾಜಿಕ್ ನಂಬರ್ ಅನ್ನು ಬಿಜೆಪಿ-ಶಿವಸೇನೆ (ಶಿಂಧೆ) ಮೈತ್ರಿಕೂಟ ಸುಲಭವಾಗಿ ತಲುಪಿದೆ.

Exit mobile version