ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರವಾಸದ ಅಂತಿಮ ಹಂತದಲ್ಲಿ ರೋಮ್ ತಲುಪಿದ ಕೂಡಲೇ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿ ಮಾಡಿದ್ದಾರೆ. ಇಬ್ಬರು ನಾಯಕರು ಡಿನರ್‌ನಲ್ಲಿ ಭಾಗವಹಿಸಿ, ನಂತರ ಪ್ರಸಿದ್ಧ ಕೊಲೊಸಿಯಮ್ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದಾರೆ.
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ತೆಗೆದ ಸೆಲ್ಫಿ ಫೋಟೋವನ್ನು ಹಂಚಿಕೊಂಡು, “Welcome to Rome, my friend!” ಎಂದು ಬರೆದಿದ್ದಾರೆ. ಈ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗುತ್ತಿದೆ.











