ಡ್ರಗ್ಸ್ ಜೊತೆ ಸಿಕ್ಕ ಮಹಿಳಾ ಪೊಲೀಸ್: 2 ಕೋಟಿ ಹೆರಾಯಿನ್ ಪತ್ತೆ!

Film 2025 04 04t224512.220

ಪಂಜಾಬ್‌ನಲ್ಲಿ ಆ್ಯಂಟಿ ನಾಕ್ರೋಟಿಕ್ಸ್ ಟಾಸ್ಕ್ ಫೋರ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಅಮನ್‌ದೀಪ್ ಕೌರ್ ಬಳಿ ಸುಮಾರು 17.71 ಗ್ರಾಂ ಹೆರಾಯಿನ್ ಡ್ರಗ್ಸ್ ಪತ್ತೆಯಾಗಿದೆ. ಈ ಘಟನೆಯು ಪೊಲೀಸ್ ಇಲಾಖೆಯಲ್ಲಿ ಆಘಾತ ಮೂಡಿಸಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ಆರಂಭಿಸಲಾಗಿದೆ.

ಬಾದಲ್ ಫ್ಲೈ ಓವರ್ ಬಳಿ ಮಹಿಳಾ ಅಧಿಕಾರಿಯ ಮಹೀಂದ್ರಾ ಥಾರ್ ಎಸ್‌ಯುವಿಯಲ್ಲಿ 17.7 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಡಿಎಸ್‌ಪಿ ಹರ್ಬನ್ ಸಿಂಗ್ ತಿಳಿಸಿದ್ದಾರೆ. ಆರೋಪಿ ಅಮನ್‌ದೀಪ್ ಕೌರ್ ಪಂಜಾಬ್ ಪೊಲೀಸ್ ಇಲಾಖೆಯ ಆ್ಯಂಟಿ ನಾಕ್ರೋಟಿಕ್ಸ್ ಟಾಸ್ಕ್ ಫೋರ್ಸ್‌ನ ಸಿಬ್ಬಂದಿಯಾಗಿದ್ದರು. ಘಟನೆ ಬೆಳಕಿಗೆ ಬಂದ ಕೂಡಲೇ ಆಕೆಯನ್ನು ಅಮಾನತುಗೊಳಿಸಲಾಗಿದೆ.

ಐಜಿಪಿ ಸುಖಚೈನ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿ, “ಮಹಿಳಾ ಅಧಿಕಾರಿಯನ್ನು ಆಕೆಯ ಸ್ಥಾನದಿಂದ ವಜಾಗೊಳಿಸಲಾಗಿದೆ. ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. “ಅಕ್ರಮ ವ್ಯವಹಾರದಲ್ಲಿ ತೊಡಗಿರುವ ಯಾವುದೇ ಅಧಿಕಾರಿಯನ್ನು ಬಿಡುವುದಿಲ್ಲ. ಕೂಡಲೇ ಕಠಿಣ ಕ್ರಮ ಕೈಗೊಳ್ಳಿ” ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version