ಪುಣೆಯ ಸ್ವರ್ಗೇಟ್ ಬಸ್ ಸ್ಟಾಂಡ್ ಬಳಿ ನಡೆದ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶ ಹಾಗೂ ಆಘಾತವನ್ನು ಉಂಟುಮಾಡಿದೆ. ಮಂಗಳವಾರ ಬೆಳಗ್ಗೆ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕಾಮುಕನೊಬ್ಬ “ಅಕ್ಕಾ” ಎಂದು ಕರೆದು ಅತ್ಯಾಚಾರ ಎಸಗಿದ್ದಾನೆ.
ದತ್ತಾತ್ರೇಯ ರಾಮ್‌ದಾಸ್ ಎಂಬ ವ್ಯಕ್ತಿ ಅತ್ಯಾಚಾರ ಮಾಡಿ ವೇಷ ಬದಲಾಯಿಸಿಕೊಂಡು ಎಸ್ಕೇಪ್ ಆಗಿದ್ದಾನೆ. ಆರೋಪಿಯನ್ನು ಹುಡುಕಲು ಪೊಲೀಸರು 13 ತಂಡಗಳನ್ನು ರಚಿಸಿದ್ದಾರೆ. ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಡೆದ ಈ ಘಟನೆ ನಡೆದಿದೆ.
ಆರೋಪಿ ದತ್ತಾತ್ರೇಯ ರಾಮ್‌ದಾಸ್ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದು, ಹಿಂದಿನ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು. ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಗೆ ಇಲ್ಲಿ ಬಸ್ ಬರುವುದಿಲ್ಲ ಬೇರೆ ಕಡೆ ನಿಲ್ಲಿಸಲಾಗಿದೆ ಎಂದು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಬಂಧಿಸಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಅವನ ಬಗ್ಗೆ ಸುಳಿವು ನೀಡುವವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಸಂತ್ರಸ್ತೆ ಮಹಿಳೆಯ ಆರೋಗ್ಯವನ್ನು ಸ್ಥಿರವೆಂದು ಪೊಲೀಸರು ದೃಢಪಡಿಸಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದೆ.