• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 7, 2026 - 1:52 pm
in Flash News, ದೇಶ
0 0
0
Your paragraph text (12)

ಚಂಡೀಗಢ: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಾರ್ಟಿ (AAP) ನಾಯಕರೊಬ್ಬರ ಮದುವೆ ಇದೀಗ ವಂಚನೆ ಆರೋಪದಿಂದ ಸುದ್ದಿಯಾಗಿದೆ. ತಾನು ಸರ್ಕಾರಿ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡ ಮಹಿಳೆಯೊಬ್ಬರು AAP ನಾಯಕನನ್ನು ಮದುವೆಯಾಗಿ, ಕೆಲವೇ ತಿಂಗಳ ಬಳಿಕ ಚಿನ್ನ-ಬೆಳ್ಳಿ ಆಭರಣಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಸೇರಿದಂತೆ ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಪಂಜಾಬ್‌ನ AAP ಜಂಟಿ ಕಾರ್ಯದರ್ಶಿ ಅಮರಿಂದರ್ ಸಿಂಗ್ ಮಂಡೋಫಾಲ್ ವಂಚನೆಗೊಳಗಾಗಿರುವುದಾಗಿ ದೂರು ನೀಡಿದ್ದಾರೆ. ಅವರ ದೂರಿನ ಪ್ರಕಾರ, 2026ರ ಫೆಬ್ರವರಿಯಲ್ಲಿ ಅವರು ಮನ್ವಿಂದರ್ ಕೌರ್ ಎಂಬ ಮಹಿಳೆಯನ್ನು ವಿವಾಹವಾಗಿದ್ದರು. ಮದುವೆಗೂ ಮುನ್ನ ಮಹಿಳೆಯ ಕುಟುಂಬದವರು ಆಕೆಯನ್ನು ಪಿಸಿಎಸ್ ಅಧಿಕಾರಿಯಾಗಿ ಪರಿಚಯಿಸಿದ್ದರು. ಅಲ್ಲದೆ, ಆಕೆ ಅವಿವಾಹಿತೆ ಎಂದು ಅಮರಿಂದರ್ ಅವರಿಗೆ ತಿಳಿಸಲಾಗಿತ್ತು ಎನ್ನಲಾಗಿದೆ.

RelatedPosts

ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!

ಗೃಹ ಸಾಲ, ವಾಹನ ಸಾಲ, ಪರ್ಸನಲ್ ಲೋನ್ ಪಡೆದವರಿಗೆ ಶಾಕ್: ರೆಪೋ ದರ ಏರಿಕೆ

ಸಾವಿನ ಶಿಕ್ಷೆಯನ್ನೇ ಗೆದ್ದ ಮಹಿಳೆ..2 ಬಾರಿ ವಿಷದ ಇಂಜೆಕ್ಷನ್‌ ನೀಡಿದರೂ ಬದುಕುಳಿದ ಪೈಕ್!

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

ADVERTISEMENT
ADVERTISEMENT

ಮದುವೆಯಾದ ನಂತರ ಕೆಲವು ವಿಚಾರಗಳು ಅನುಮಾನಕ್ಕೆ ಕಾರಣವಾಗಿದ್ದವು ಎಂದು ಅಮರಿಂದರ್ ಆರೋಪಿಸಿದ್ದಾರೆ. ಮಹಿಳೆ ತನ್ನ ವೈವಾಹಿಕ ಸ್ಥಿತಿ ಹಾಗೂ ವಯಸ್ಸಿನ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾಳೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ಆಕೆಯ ಹಿನ್ನೆಲೆಯ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ, ಈ ಹಿಂದೆ ಆಕೆಗೆ ಮದುವೆಯಾಗಿದ್ದು, ವಿಚ್ಛೇದನವೂ ಆಗಿದೆ ಎಂಬುದು ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಆಕೆಗೆ 18 ವರ್ಷದ ಮಗನಿದ್ದಾನೆ ಎಂಬ ವಿಚಾರವೂ ನಂತರ ಗೊತ್ತಾಗಿದೆ ಎಂದು ಅಮರಿಂದರ್ ಆರೋಪಿಸಿದ್ದಾರೆ. ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಮಹಿಳೆ ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾಳೆ ಎಂಬುದು ಅವರ ಪ್ರಮುಖ ಆರೋಪವಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರಿಂದರ್ ಸಿಂಗ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನ್ವಿಂದರ್ ಕೌರ್ ಸೇರಿದಂತೆ ಒಟ್ಟು ಆರು ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ವಂಚನೆ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಮನ್ವಿಂದರ್ ಕೌರ್ ಅವರ ಸಹೋದರ ತಾರ್ಲೋಚನ್ ಸಿಂಗ್, ತಾಯಿ ವರಿಂದರ್‌ಜಿತ್ ಕೌರ್, ಸೋದರಸಂಬಂಧಿ ನರಿಂದರ್ ಸಿಂಗ್ ಗೋಲ್ಡಿ, ನಾದಿನಿ ರುಪಿಂದರ್ ಕೌರ್ ಮತ್ತು ಮಾಜಿ ಗ್ರಾಮ ಸರಪಂಚ್ ಸುರಿಂದರ್ ಸಿಂಗ್ ರಾಣಾ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ. ಆರೋಪಿಗಳೆಲ್ಲರೂ ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಭಿಖಿವಿಂದ್ ಪೊಲೀಸ್ ಠಾಣೆ ವ್ಯಾಪ್ತಿಯ ಸುರ್ ಸಿಂಗ್ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮದುವೆ ಸಾಮಾನ್ಯವಾಗಿ ನಡೆದದ್ದಲ್ಲ ಎಂಬುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳೂ ಸಾಕ್ಷಿ. ಅಮರಿಂದರ್ ಸಿಂಗ್ ಮತ್ತು ಮನ್ವಿಂದರ್ ಕೌರ್ ಅವರ ವಿವಾಹ ಸಮಾರಂಭಕ್ಕೆ ಪಂಜಾಬ್ ವಿಧಾನಸಭೆ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ ಸೇರಿದಂತೆ AAPನ ಹಲವು ಪ್ರಮುಖ ನಾಯಕರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು ಎನ್ನಲಾಗಿದೆ. ಸಚಿವ ತರುಣ್‌ಪ್ರೀತ್ ಸಿಂಗ್ ಸೌಂಡ್ ಸೇರಿದಂತೆ ಪಕ್ಷದ ಮುಖಂಡರು ಮದುವೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮಹಿಳೆ ತನ್ನ ಹಿನ್ನೆಲೆ, ಉದ್ಯೋಗ, ವೈವಾಹಿಕ ಸ್ಥಿತಿ ಹಾಗೂ ವಯಸ್ಸಿನ ಕುರಿತು ತಪ್ಪು ಮಾಹಿತಿ ನೀಡಿದ್ದಾಳೆ ಎಂಬ ಆರೋಪಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ ದಾಖಲಾಗಿರುವ ಹಿನ್ನೆಲೆ ಆರೋಪಿಗಳ ಹೇಳಿಕೆಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ನಕಲಿ ದಾಖಲೆಗಳನ್ನು ಬಳಸಲಾಗಿದೆಯೇ, ಮಹಿಳೆ ನಿಜವಾಗಿಯೂ ಸರ್ಕಾರಿ ಅಧಿಕಾರಿಯೇ ಎಂಬುದೂ ಸೇರಿದಂತೆ ಹಲವು ಅಂಶಗಳ ಬಗ್ಗೆ ತನಿಖೆ ನಡೆಯುವ ಸಾಧ್ಯತೆಯಿದೆ. ಸದ್ಯ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತನಿಖೆಯಿಂದಲೇ ಹೊರಬರಬೇಕಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (55)

ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!

by Hemanth Kumar S
October 7, 2026 - 2:13 pm
0

Your paragraph text (12)

AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!

by ಶಾಲಿನಿ ಕೆ. ಡಿ
October 7, 2026 - 1:52 pm
0

Your paragraph text (11)

ಇಂದು ಬಂಗಾರದ ಬೆಲೆಯಲ್ಲಿ ಕೊಂಚ ಏರಿಕೆ: ಬೆಳ್ಳಿ ಬೆಲೆ ಯಥಾಸ್ಥಿತಿ, ದರ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
October 7, 2026 - 1:17 pm
0

Your paragraph text (9)

ಗೃಹ ಸಾಲ, ವಾಹನ ಸಾಲ, ಪರ್ಸನಲ್ ಲೋನ್ ಪಡೆದವರಿಗೆ ಶಾಕ್: ರೆಪೋ ದರ ಏರಿಕೆ

by ಶಾಲಿನಿ ಕೆ. ಡಿ
October 7, 2026 - 12:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (55)
    ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!
    October 7, 2026 | 0
  • Your paragraph text (9)
    ಗೃಹ ಸಾಲ, ವಾಹನ ಸಾಲ, ಪರ್ಸನಲ್ ಲೋನ್ ಪಡೆದವರಿಗೆ ಶಾಕ್: ರೆಪೋ ದರ ಏರಿಕೆ
    October 7, 2026 | 0
  • Your paragraph text (7)
    ಸಾವಿನ ಶಿಕ್ಷೆಯನ್ನೇ ಗೆದ್ದ ಮಹಿಳೆ..2 ಬಾರಿ ವಿಷದ ಇಂಜೆಕ್ಷನ್‌ ನೀಡಿದರೂ ಬದುಕುಳಿದ ಪೈಕ್!
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
  • Untitled design (96)
    25 ವರ್ಷ ಜನಸೇವಾ ಪಯಣ: ಮೋದಿ ಐತಿಹಾಸಿಕ ಸಾಧನೆ, ದೇಶಾದ್ಯಂತ ‘ಸೇವಾ ಸಂಕಲ್ಪ’ ಅಭಿಯಾನ
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version