• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ-ರಾಹುಲ್‌ ಗಾಂಧಿಗೆ ಹೈಕೋರ್ಟ್ ನೋಟಿಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 22, 2025 - 4:22 pm
in ದೇಶ
0 0
0
Untitled design 2025 12 22T161504.780

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಮತ್ತೊಂದು ಮಹತ್ವದ ಹಂತಕ್ಕೆ ತಲುಪಿದೆ.. ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು 2026ರ ಮಾರ್ಚ್ 12ರಂದು ನಿಗದಿ ಮಾಡಲಾಗಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮೂಲ ಕಂಪನಿಯಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಸಂಬಂಧಿಸಿದ ಆಸ್ತಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆಂಬ ಆರೋಪದಡಿ ಈ ಪ್ರಕರಣ ಆರಂಭವಾಯಿತು. ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ಸಲ್ಲಿಸಿದ ಖಾಸಗಿ ದೂರಿನ ಆಧಾರದಲ್ಲಿ ಆರಂಭವಾದ ಈ ಕೇಸ್‌ನಲ್ಲಿ ಇಡಿ ಅಕ್ರಮ ಹಣ ವರ್ಗಾವಣೆ (ಪಿಎಂಎಲ್‌ಎ) ಕಾಯ್ದೆಯಡಿ ತನಿಖೆ ನಡೆಸಿತ್ತು. ಇಡಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್ ಪಿಟ್ರೋಡಾ ಸೇರಿದಂತೆ ಇತರರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.

RelatedPosts

2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ

ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ; ಉಸಿರುಗಟ್ಟಿ ಇಬ್ಬರು ಸಾ*ವು

ಜುಲೈ 23ಕ್ಕೆ ದಳಪತಿ ವಿಜಯ್ ‘ಜನ ನಾಯಗನ್’ ಗ್ರ್ಯಾಂಡ್ ಎಂಟ್ರಿ!

ADVERTISEMENT
ADVERTISEMENT

ಆದರೆ, ದೆಹಲಿಯ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಇಡಿ ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿತ್ತು. ಆದೇಶದಲ್ಲಿ ನ್ಯಾಯಾಲಯವು, ಈ ಪ್ರಕರಣ ಎಫ್‌ಐಆರ್ ಆಧಾರಿತವಲ್ಲದೆ ಖಾಸಗಿ ದೂರಿನ ಮೇಲೆ ಆರಂಭವಾಗಿದ್ದರಿಂದ ಪಿಎಂಎಲ್‌ಎ ಕಾಯ್ದೆಯಡಿ ಆರೋಪಪಟ್ಟಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇದರಿಂದ ಗಾಂಧಿ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಸಿಕ್ಕಿತ್ತು.

ಈ ಆದೇಶವನ್ನು ಪ್ರಶ್ನಿಸಿ ಇಡಿ ತಕ್ಷಣವೇ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆಯಲ್ಲಿ ಇಡಿ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಅವರು, ಇಡಿ ತನಿಖೆಯನ್ನು ಪೂರ್ಣಗೊಳಿಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿ ಹಲವು ಶೋಧ ಕಾರ್ಯಾಚರಣೆಗಳನ್ನು ನಡೆಸಿದೆ ಎಂದು ವಾದಿಸಿದರು. ಕೆಳ ನ್ಯಾಯಾಲಯದ ಆದೇಶ ತಪ್ಪು ಎಂದು ಹೇಳಿದರು.

ವಾದ ಆಲಿಸಿದ ನ್ಯಾಯಮೂರ್ತಿ ರವೀಂದ್ರ ದುದೇಜಾ ಅವರಿದ್ದ ಏಕಸದಸ್ಯ ಪೀಠವು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಯಂಗ್ ಇಂಡಿಯನ್ ಕಂಪನಿ ಮತ್ತು ಇತರ ಪ್ರತಿವಾದಿಗಳಿಂದ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿತ್ತು. ಇಡಿ ಸಲ್ಲಿಸಿದ ಸ್ಟೇ ಅರ್ಜಿಯ ಮೇಲೂ ನೋಟಿಸ್ ನೀಡಲಾಗಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್ ರಿಲೀಫ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಪರಿಗಣಿಸಲು ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.

ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಇಡಿ ಸಲ್ಲಿಸಿದ್ದ ದೂರನ್ನು ವಿಚಾರಣೆಗೆ ತೆಗೆದುಕೊಳ್ಳುವ ಪ್ರಶ್ನೆಯನ್ನು ನ್ಯಾಯಾಲಯ ನಿರಾಕರಿಸಿದ್ದು, ಇದರಿಂದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ತಾತ್ಕಾಲಿಕ ನೆಮ್ಮದಿ ದೊರೆತಂತಾಗಿದೆ.

ಕೋರ್ಟ್ ಹೇಳಿದ್ದೇನು?

ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗೋ ಅವರು, ಈ ಪ್ರಕರಣದ  ಬಗ್ಗೆ ಮಹತ್ವದ ಅಂಶಗಳನ್ನು ಉಲ್ಲೇಖಿಸಿದರು. ಇಡಿ ಸಲ್ಲಿಸಿರುವ ದೂರು ಖಾಸಗಿ ದೂರಿನ ಆಧಾರದಲ್ಲಿದೆ, ಇದು ಪ್ರಥಮ ಮಾಹಿತಿ ವರದಿ (FIR) ಆಧಾರಿತವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

PMLA ಕಾಯ್ದೆಯ ಅಡಿಯಲ್ಲಿ ಪ್ರಕರಣವನ್ನು ಮುಂದುವರಿಸಲು, ಮೂಲ ಅಪರಾಧಕ್ಕೆ ಸಂಬಂಧಿಸಿದಂತೆ ಮಾನ್ಯ ಎಫ್‌ಐಆರ್ ಅಥವಾ ಸರಿಯಾದ ಕಾನೂನು ಪ್ರಕ್ರಿಯೆ ಇರಬೇಕು. ಆದರೆ, ಈ ಪ್ರಕರಣದಲ್ಲಿ ಆ ಮಾನದಂಡಗಳು ಪೂರೈಸಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಇಡಿ ಚಾರ್ಜ್‌ಶೀಟ್‌ಗೆ ಹಿನ್ನಡೆ

ಇಡಿ ತನ್ನ ಚಾರ್ಜ್‌ಶೀಟ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಯಂಗ್ ಇಂಡಿಯನ್ ಕಂಪನಿಯ ಮೂಲಕ ಅಕ್ರಮವಾಗಿ ಆಸ್ತಿಗಳನ್ನು ವರ್ಗಾಯಿಸಿದ್ದಾರೆ ಎಂಬ ಆರೋಪ ಮಾಡಿತ್ತು. ಇಡಿ ಸಲ್ಲಿಸಿದ ದಾಖಲೆಗಳು ಹಾಗೂ ದೂರಿನ ಸ್ವರೂಪವನ್ನು ಪರಿಶೀಲಿಸಿದ ನ್ಯಾಯಾಲಯ, ಈ ಹಂತದಲ್ಲಿ ವಿಚಾರಣೆ ನಡೆಸಲು ಕಾನೂನು ಆಧಾರವಿಲ್ಲ ಎಂದು ತೀರ್ಮಾನಿಸಿದೆ.

ಕಾಂಗ್ರೆಸ್ ಪ್ರತಿಕ್ರಿಯೆ

ನ್ಯಾಯಾಲಯದ ಆದೇಶದ ಬಳಿಕ ಕಾಂಗ್ರೆಸ್ ವಲಯದಲ್ಲಿ ಸಂತಸ ವ್ಯಕ್ತವಾಗಿದೆ. ಪಕ್ಷದ ನಾಯಕರು, “ಇದು ರಾಜಕೀಯ ದ್ವೇಷದ ಫಲವಾಗಿ ದಾಖಲಿಸಿದ ಪ್ರಕರಣ. ಸತ್ಯ ಮತ್ತು ಸಂವಿಧಾನ ಗೆದ್ದಿದೆ” ಎಂದು ಪ್ರತಿಕ್ರಿಯಿಸಿದ್ದಾರೆ. ಈ ಆದೇಶವು ಇಡಿಗೆ ತಾತ್ಕಾಲಿಕ ಹಿನ್ನಡೆಯಾದರೂ, ಕಾನೂನು ಹೋರಾಟ ಇಲ್ಲಿ ಅಂತ್ಯವಾಗಿಲ್ಲ. ಇಡಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (1)

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

by ಶಾಲಿನಿ ಕೆ. ಡಿ
July 16, 2026 - 7:39 am
0

ಅಪಾಯ

ಹೃದಯಾಘಾತ ಅಪಾಯ ಹೆಚ್ಚಿಸಲು ಮದ್ಯ ಸೇವನೆ ಕಾರಣ? ಅಧ್ಯಯನದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ರಿವೀಲ್.!

by ಶಾಲಿನಿ ಕೆ. ಡಿ
July 16, 2026 - 7:22 am
0

Untitled design 2026 07 16T064652.627

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

by ಶಾಲಿನಿ ಕೆ. ಡಿ
July 16, 2026 - 6:47 am
0

Untitled design 2026 07 15T231036.499

ಅಮೆರಿಕದ ಮಾಲ್‌ನಲ್ಲಿ ಧರ್ಮ ಕೇಳಿ ಭಾರತೀಯ ಮೂಲದ ವ್ಯಕ್ತಿಗೆ ಚಾಕು ಇರಿತ

by ಕವಿತಾ
July 15, 2026 - 11:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಂಗ್ಚುಕ್ (15)
    2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ
    July 15, 2026 | 0
  • ವಾಂಗ್ಚುಕ್ (8)
    ಕಾರ್ಗಿಲ್ ವೀರರಿಗೆ ಸೆಲ್ಯೂಟ್: ದಿಲ್ಲಿ-ಲಡಾಖ್ ‘ಶೌರ್ಯ ವಿಜಯ್ ಯಾತ್ರೆ’ ಬೈಕ್ Rallyಗೆ ರಾಜನಾಥ್ ಸಿಂಗ್ ಚಾಲನೆ
    July 15, 2026 | 0
  • ವಾಂಗ್ಚುಕ್ (4)
    ನೋಯ್ಡಾದಲ್ಲಿ ಭೀಕರ ಅಗ್ನಿ ಅವಘಡ; ಉಸಿರುಗಟ್ಟಿ ಇಬ್ಬರು ಸಾ*ವು
    July 15, 2026 | 0
  • ಎಂಟ್ರಿ
    ಜುಲೈ 23ಕ್ಕೆ ದಳಪತಿ ವಿಜಯ್ ‘ಜನ ನಾಯಗನ್’ ಗ್ರ್ಯಾಂಡ್ ಎಂಟ್ರಿ!
    July 15, 2026 | 0
  • ವಾಂಗ್ಚುಕ್
    ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version