• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 30, 2026 - 10:23 pm
in ದೇಶ
0 0
0
ಬಲಿಷ್ಠ (19)

ಲೋಕಸಭೆಯಲ್ಲಿ ಅಂಗೀಕಾರಗೊಂಡ ಮರುದಿನವೇ ಗುರುವಾರ ರಾಜ್ಯಸಭೆಯೂ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ (ಆ್ಯಂಟಿ ಪೇಪರ್ ಲೀಕ್ ಬಿಲ್) ಅನ್ನು ವಿರೋಧ ಪಕ್ಷಗಳ ಗದ್ದಲ ನಡುವೆಯೇ ಅಂಗೀಕರಿಸಿದೆ. ಇದರೊಂದಿಗೆ ವಿಧೇಯಕವು ಸಂಸತ್ತಿನ ಎರಡೂ ಸದನಗಳ ಒಪ್ಪಿಗೆ ಪಡೆದಿದ್ದು, ಅಂತಿಮ ಅಂಕಿತಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಲಾಗುತ್ತದೆ.

ರಾಜ್ಯಸಭೆಯಲ್ಲಿ ವಿಧೇಯಕವನ್ನು ಮಂಡಿಸಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಜಿತೇಂದ್ರ ಸಿಂಗ್, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸವನ್ನು ಬಲಪಡಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು. ಈ ತಿದ್ದುಪಡಿ ಕಾಯ್ದೆಯು ದೇಶದ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಸ್ಪಷ್ಟಪಡಿಸುತ್ತದೆ ಎಂದು ಅವರು ತಿಳಿಸಿದರು.

RelatedPosts

ಮೋದಿ ಪೋಸ್ಟ್ ಬ್ಲಾಕ್ ವಿವಾದ: ಮೆಟಾಗೆ ಕೇಂದ್ರ ಸರ್ಕಾರ ಸಮನ್ಸ್

ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ

ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ

ಭೋಗಾಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಮೋದಿ ಚಾಲನೆ

ADVERTISEMENT
ADVERTISEMENT

ವಿಧೇಯಕದ ಕುರಿತು ಮಾತನಾಡಿದ ಜಿತೇಂದ್ರ ಸಿಂಗ್, “ಈ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಸುಮಾರು 10 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ಅಂಗೀಕಾರಗೊಂಡಿದೆ. ಗದ್ದಲದ ನಡುವೆಯೂ ಚರ್ಚೆ ನಡೆದಿದೆ. ಈಗ ಅದು ಹಿರಿಯರ ಹಾಗೂ ಪರಿಣಿತರ ಸದನವಾದ ರಾಜ್ಯಸಭೆಗೆ ಬಂದಿದೆ. ಇಲ್ಲಿ ಕೂಡ ಸಮಗ್ರವಾಗಿ ಚರ್ಚೆ ನಡೆಸಿ ಅಂಗೀಕರಿಸಲಾಗಿದೆ” ಎಂದು ಹೇಳಿದರು.

ದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಪದೇಪದೇ ಬೆಳಕಿಗೆ ಬರುತ್ತಿರುವುದು ಕೇಂದ್ರ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ವಿಶೇಷವಾಗಿ 2024ರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ, 2024’ ಅನ್ನು ಜಾರಿಗೆ ತಂದಿತ್ತು. ಈ ಕಾಯ್ದೆಯಡಿ ಪ್ರಶ್ನೆ ಪತ್ರಿಕೆ ಸೋರಿಕೆ, ಸಂಘಟಿತ ಪರೀಕ್ಷಾ ಅಕ್ರಮಗಳು ಹಾಗೂ ವಂಚನೆಗಳನ್ನು ಗಂಭೀರ ಅಪರಾಧಗಳೆಂದು ಘೋಷಿಸಲಾಗಿತ್ತು.

ಆದರೆ, ಕಾನೂನು ಜಾರಿಯಲ್ಲಿದ್ದರೂ 2026ರಲ್ಲಿಯೂ ನೀಟ್ ಸೇರಿದಂತೆ ಕೆಲವು ಪ್ರಮುಖ ಪರೀಕ್ಷೆಗಳಲ್ಲಿ ಅಕ್ರಮಗಳ ಆರೋಪಗಳು ಕೇಳಿಬಂದವು. ಇದರಿಂದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳ ಅಸಮಾಧಾನ ಮತ್ತಷ್ಟು ಹೆಚ್ಚಾಯಿತು. ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ವ್ಯಾಪಕ ಪ್ರತಿಭಟನೆಗಳನ್ನು ನಡೆಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿದರು.

ಸಾರ್ವಜನಿಕರ ಒತ್ತಡ ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಪರಿಗಣಿಸಿದ ಕೇಂದ್ರ ಸರ್ಕಾರ, ಈಗಿರುವ ಕಾಯ್ದೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕ, 2026’ ಅನ್ನು ಸಂಸತ್ತಿನಲ್ಲಿ ಮಂಡಿಸಿತು. ಇದೀಗ ರಾಜ್ಯಸಭೆಯಲ್ಲೂ ಅಂಗೀಕಾರಗೊಂಡಿರುವ ಈ ವಿಧೇಯಕ ರಾಷ್ಟ್ರಪತಿಯ ಅಂಕಿತ ಪಡೆದ ಬಳಿಕ ದೇಶಾದ್ಯಂತ ಜಾರಿಗೆ ಬರಲಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಯಲು ಇನ್ನಷ್ಟು ಕಠಿಣ ಕಾನೂನು ಚೌಕಟ್ಟು ರೂಪುಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (11)
    ಮೋದಿ ಪೋಸ್ಟ್ ಬ್ಲಾಕ್ ವಿವಾದ: ಮೆಟಾಗೆ ಕೇಂದ್ರ ಸರ್ಕಾರ ಸಮನ್ಸ್
    July 31, 2026 | 0
  • ಈಶ್ವರ ಖಂಡ್ರೆ (10)
    ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ
    July 31, 2026 | 0
  • ಈಶ್ವರ ಖಂಡ್ರೆ (6)
    ಭಾರತದ ಪದಕ ಬೇಟೆ ಮುಂದುವರಿಕೆ; ಡಿಸ್ಕಸ್‌ನಲ್ಲಿ ಕಂಚಿನ ಪದಕ ಗೆದ್ದ ಸೀಮಾ
    July 31, 2026 | 0
  • Untitled design (24)
    ಭೋಗಾಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಳೆ ಮೋದಿ ಚಾಲನೆ
    July 31, 2026 | 0
  • Untitled design (21)
    ರಷ್ಯಾ ಯುದ್ಧ ಸಂತ್ರಸ್ತರ ಪರ ಸುಪ್ರೀಂ ಕೋರ್ಟ್; ನೋಡಲ್ ಅಧಿಕಾರಿ ನೇಮಕಕ್ಕೆ ಆದೇಶ
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version