• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಮ ಮಂದಿರಕ್ಕೆ ಬರುವ ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2026 - 8:15 pm
in Flash News, ದೇಶ
0 0
0
ಹೆಂಡ್ತಿಯರ (9)

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ನೂಡಲ್ಸ್ ಸೇವಿಸಿದ ಒಂದೇ ಕುಟುಂಬದ ಐವರು ನಿಗೂಢ ಸಾವು

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಅಯೋಧ್ಯೆ: ರಾಮ ಮಂದಿರ ದೇಣಿಗೆ ವಿವಾದದ ಹಿನ್ನೆಲೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ಸಲ್ಲಿಸಿದ್ದ ರಾಜೀನಾಮೆಯನ್ನು ಟ್ರಸ್ಟ್ ಅಧಿಕೃತವಾಗಿ ಅಂಗೀಕರಿಸಿದ್ದು, ಶೀಘ್ರದಲ್ಲೇ ಹೊಸ ಪ್ರಧಾನ ಕಾರ್ಯದರ್ಶಿಯನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಭೆಯ ಬಳಿಕ ತಿಳಿಸಲಾಗಿದೆ. 

ಇತ್ತೀಚೆಗೆ ರಾಮ ಮಂದಿರಕ್ಕೆ ಬಂದ ದೇಣಿಗೆಗಳ ನಿರ್ವಹಣೆ ಹಾಗೂ ಹಣಕಾಸು ಪಾರದರ್ಶಕತೆಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳು ಉದ್ಭವಿಸಿದ್ದವು. ಈ ಬೆಳವಣಿಗೆಗಳ ನಡುವೆಯೇ ಚಂಪತ್ ರಾಯ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದು, ಟ್ರಸ್ಟ್ ಸಭೆಯಲ್ಲಿ ಅದನ್ನು ಅಂಗೀಕರಿಸಲಾಯಿತು. ಆದರೆ, ಅವರು ಟ್ರಸ್ಟ್‌ನ ಸದಸ್ಯರಾಗಿ ಮುಂದುವರಿಯಲಿದ್ದು, ದೇವಾಲಯದ ಅಭಿವೃದ್ಧಿ ಕಾರ್ಯಗಳಲ್ಲಿ ತಮ್ಮ ಅನುಭವವನ್ನು ಮುಂದುವರಿಸಲಿದ್ದಾರೆ ಎಂದು ಟ್ರಸ್ಟ್ ಸ್ಪಷ್ಟಪಡಿಸಿದೆ.

ಚಂಪತ್ ರಾಯ್ ಅವರ ಸ್ಥಾನಕ್ಕೆ ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ಬಜರಂಗ್ ಬಾಗ್ರಾ ಅವರನ್ನು ನೇಮಕ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ನಲ್ಕೊ ಸಂಸ್ಥೆಯ ಮಾಜಿ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿರುವ ಬಜರಂಗ್ ಬಾಗ್ರಾ ಅವರಿಗೆ ಆಡಳಿತ ಮತ್ತು ಹಣಕಾಸು ಕ್ಷೇತ್ರದಲ್ಲಿ ಉತ್ತಮ ಅನುಭವವಿದೆ.

ಚಿನ್ನ & ಬೆಳ್ಳಿಯ ದೇಣಿಗೆ ಲೆಕ್ಕ ಇಡೋದಕ್ಕೂ ಹೊಸ ವ್ಯವಸ್ಥೆ..?

ಈ ಸಭೆಯಲ್ಲಿ ಕೇವಲ ಪ್ರಧಾನ ಕಾರ್ಯದರ್ಶಿ ಬದಲಾವಣೆಯಷ್ಟೇ ಅಲ್ಲದೆ, ಟ್ರಸ್ಟ್‌ನ ಆಡಳಿತ ವ್ಯವಸ್ಥೆಯಲ್ಲಿಯೂ ಹಲವು ಸುಧಾರಣೆಗಳನ್ನು ತರಲು ಚರ್ಚೆ ನಡೆದಿದೆ. ಹುಂಡಿಗೆ ಬರುವ ನಗದು ದೇಣಿಗೆಯ ಎಣಿಕೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಹೊಸ ವ್ಯವಸ್ಥೆ ಜಾರಿಗೆ ತರಲು ಚಿಂತನೆ ನಡೆದಿದೆ. ಇದೇ ವೇಳೆ ದೇವಾಲಯಕ್ಕೆ ಭಕ್ತರು ನೀಡುವ ಚಿನ್ನ, ಬೆಳ್ಳಿ ಹಾಗೂ ಇತರ ಅಮೂಲ್ಯ ದೇಣಿಗೆಗಳ ದಾಖಲೆ ಮತ್ತು ಲೆಕ್ಕಪತ್ರ ನಿರ್ವಹಣೆಗೆ ತಂತ್ರಜ್ಞಾನ ಆಧಾರಿತ ವ್ಯವಸ್ಥೆ ರೂಪಿಸುವ ಕುರಿತು ಸಹ ಚರ್ಚಿಸಲಾಗಿದೆ.

ಇದರ ಜೊತೆಗೆ ಟ್ರಸ್ಟ್‌ನ ಆಡಳಿತಾತ್ಮಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಭವಿಷ್ಯದಲ್ಲಿ ಟ್ರಸ್ಟಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ರೂಪಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಟ್ರಸ್ಟ್‌ನ ಹಣಕಾಸು ಮತ್ತು ಆಡಳಿತದ ಮೇಲೆ ಬಲವಾದ ಹಿಡಿತ ಹೊಂದಿರುವ ಅನುಭವಿ ವ್ಯಕ್ತಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಉದ್ದೇಶವಿದೆ ಎಂದು ಮೂಲಗಳು ತಿಳಿಸಿವೆ.

ಹೊಸ ಪ್ರಧಾನ ಕಾರ್ಯದರ್ಶಿಯ ಹೆಸರನ್ನು ತಕ್ಷಣವೇ ಘೋಷಿಸುವ ಸಾಧ್ಯತೆ ಕಡಿಮೆ ಇದೆ. ವಿಶ್ವ ಹಿಂದೂ ಪರಿಷತ್‌ನ ದ್ವೈವಾರ್ಷಿಕ ರಾಷ್ಟ್ರೀಯ ಕಾರ್ಯಕಾರಿ ಸಭೆ ಜುಲೈ 19 ಮತ್ತು 20ರಂದು ನವದೆಹಲಿಯಲ್ಲಿ ನಡೆಯಲಿದ್ದು, ಆ ಸಭೆಯ ಬಳಿಕ ಜವಾಬ್ದಾರಿ ಹಸ್ತಾಂತರ ಸೇರಿದಂತೆ ಪ್ರಮುಖ ಸಾಂಸ್ಥಿಕ ನಿರ್ಧಾರಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.

ಇನ್ನೊಂದೆಡೆ, ರಾಮ ಮಂದಿರ ದೇಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕೂಡ ತನ್ನ ಪ್ರತಿಕ್ರಿಯೆ ನೀಡಿದೆ. ಈ ಪ್ರಕರಣವನ್ನು “ದುರದೃಷ್ಟಕರ ಬೆಳವಣಿಗೆ” ಎಂದು ಬಣ್ಣಿಸಿರುವ ಸಂಘ, ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾದವರ ವಿರುದ್ಧ ಯಾವುದೇ ರಾಜಿ ಇಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಪಾರದರ್ಶಕ ತನಿಖೆ ಮತ್ತು ಹೊಣೆಗಾರಿಕೆ ಅಗತ್ಯ ಎಂಬ ಸಂದೇಶವನ್ನು ಸಂಘ ನೀಡಿದೆ.

ಈ ವಿಚಾರದಲ್ಲಿ ಬಿಜೆಪಿ ಕೂಡ ಪ್ರತಿಕ್ರಿಯೆ ನೀಡಿದ್ದು, ಪ್ರಕರಣವನ್ನು ನೆಪ ಮಾಡಿಕೊಂಡು ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ನಡೆಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಖಚಿತವಾಗಲಿದೆ ಎಂದು ಹೇಳಿರುವ ಬಿಜೆಪಿ, ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮುನ್ನ ಯಾವುದೇ ತೀರ್ಮಾನಕ್ಕೆ ಬರಬಾರದು ಎಂದು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version