• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಯ್ಯಪ್ಪ ದೇಗುಲದ ಚಿನ್ನ ಕಳ್ಳತನ ಕೇಸ್‌‌: ಬಳ್ಳಾರಿಯ ಆಭರಣ ವ್ಯಾಪಾರಿ ಸೇರಿ ಇಬ್ಬರ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 19, 2025 - 8:55 pm
in ದೇಶ
0 0
0
Untitled design 2025 12 19T204624.666

ತಿರುವನಂತಪುರ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ನಡೆದ ಚಿನ್ನದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಮಾರ್ಟ್ ಕ್ರಿಯೇಷನ್ಸ್ ಸಂಸ್ಥೆಯ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯಲ್ಲಿ ನೆಲೆಸಿರುವ ಆಭರಣ ವ್ಯಾಪಾರಿ ಗೋವರ್ಧನ್ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿಗಳನ್ನು ಕೆಲಸದ ನೆಪದಲ್ಲಿ ತೆಗೆದುಕೊಂಡು ಹೋಗಿದ್ದ ಪಂಕಜ್ ಭಂಡಾರಿ, ಅವುಗಳಲ್ಲಿ ಅಳವಡಿಸಲಾಗಿದ್ದ ಚಿನ್ನದ ಭಾಗವನ್ನು ತೆಗೆದು ದುರುಪಯೋಗ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ಮೂರ್ತಿಗಳ ಮೂಲ ತೂಕಕ್ಕಿಂತ ಕಡಿಮೆ ತೂಕ ಕಂಡುಬಂದಿರುವುದು ಈ ಕಳ್ಳತನದ ಶಂಕೆ ವ್ಯಕ್ತವಾಗಿತ್ತು. ಮೂರ್ತಿಗಳಿಂದ ತೆಗೆದ ಚಿನ್ನವನ್ನು ಬಳ್ಳಾರಿಯ ಆಭರಣ ವ್ಯಾಪಾರಿ ಗೋವರ್ಧನ್ ಅವರಿಗೆ ಮಾರಾಟ ಮಾಡಲಾಗಿದೆ ಎಂದು ಎಸ್‌ಐಟಿ ಆರೋಪಿಸಿದೆ.

RelatedPosts

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಂಟು ಹೊಂದಿದ್ದ 5 ಸರ್ಕಾರಿ ನೌಕರರು ವಜಾ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶ

ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ

ಕನ್ನಡಿಗರ ವಾಹನ ತಡೆದ ಕೇರಳ ಪೊಲೀಸರು: ಎರುಮಲೈನಲ್ಲಿ ಪ್ರತಿಭಟಿಸಿದ ಮಾಲಾಧಾರಿಗಳು

ADVERTISEMENT
ADVERTISEMENT

ಈ ಪ್ರಕರಣದ ಆರಂಭಿಕ ತನಿಖೆಯಲ್ಲಿ ಅಕ್ಟೋಬರ್ 28 ರಂದು ಎಸ್‌ಐಟಿ ತಂಡವು ಗೋವರ್ಧನ್ ಅವರ ಬಳ್ಳಾರಿಯ ಚಿನ್ನದ ಅಂಗಡಿಗೆ ದಾಳಿ ನಡೆಸಿತ್ತು. ದಾಳಿ ವೇಳೆ ಗೋವರ್ಧನ್, ಈ ಹಗರಣದಲ್ಲಿ ತನ್ನ ಪಾತ್ರವಿಲ್ಲ ಎಂದು ಹೇಳಿಕೊಂಡಿದ್ದರು. ಚಿನ್ನದ ಹೊದಿಕೆಯ ಬಾಗಿಲಿಗೆ ಸಂಬಂಧಿಸಿದಂತೆ ತಾನು ದೇಣಿಗೆಯಾಗಿ ಹಣ ನೀಡಿದ್ದೇನೆ ಹೊರತು, ಕಳ್ಳತನಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದರು.

ಆದರೆ ಈ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ನೀಡಿದ ಹೇಳಿಕೆಗಳು ಮಹತ್ವ ಪಡೆದುಕೊಂಡಿವೆ. 2019ರಲ್ಲಿ ಶಬರಿಮಲೆ ದೇವಸ್ಥಾನಕ್ಕೆ ಚಿನ್ನದ ಲೇಪಿತ ಬಾಗಿಲನ್ನು ಸಮರ್ಪಿಸುವ ಉದ್ದೇಶದಿಂದ ಗೋವರ್ಧನ್ ಅವರನ್ನು ಸಂಪರ್ಕಿಸಿದ್ದೆ ಎಂದು ಉನ್ನಿಕೃಷ್ಣನ್ ಪೊಟ್ಟಿ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ತಯಾರಿಸಲಾದ ಹೊಸ ಬಾಗಿಲನ್ನು ಶಬರಿಮಲೆ ದೇವಸ್ಥಾನಕ್ಕೆ ಸಾಗಿಸುವ ಮೊದಲು ಗೋವರ್ಧನ್ ಅವರ ಆಭರಣ ಅಂಗಡಿಯಲ್ಲಿ ಸಾರ್ವಜನಿಕ ಪ್ರದರ್ಶನಕ್ಕೆ ಇಡಲಾಗಿತ್ತು ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಇಬ್ಬರ ಬಂಧನದೊಂದಿಗೆ ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಡಿಸೆಂಬರ್ 17ರಂದು ಶಬರಿಮಲೆಯ ಮಾಜಿ ಆಡಳಿತಾಧಿಕಾರಿ ಶ್ರೀಕುಮಾರ್ ಅವರನ್ನು ಎಸ್‌ಐಟಿ ಬಂಧಿಸಿತ್ತು. 2019ರಲ್ಲಿ ದ್ವಾರಪಾಲಕ ವಿಗ್ರಹಗಳ ಚಿನ್ನದ ಫಲಕಗಳನ್ನು ತೆಗೆದು ಚೆನ್ನೈಗೆ ಸಾಗಿಸಿದ ಸಮಯದಲ್ಲಿ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ.

ಇದಕ್ಕೂ ಮೊದಲು, ನವೆಂಬರ್ ತಿಂಗಳಲ್ಲಿ ಎಸ್‌ಐಟಿ ಮಾಜಿ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಅಧ್ಯಕ್ಷ ಹಾಗೂ ಸಿಪಿಎಂ ನಾಯಕ ಎ. ಪದ್ಮಕುಮಾರ್ ಅವರನ್ನು ಬಂಧಿಸಿತ್ತು. ಈ ಪ್ರಕರಣದಲ್ಲಿ ಅವರನ್ನು ಎಂಟನೇ ಆರೋಪಿ ಎಂದು ಹೆಸರಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಸೇರಿದಂತೆ, ಮಾಜಿ ಟಿಡಿಬಿ ಅಧ್ಯಕ್ಷ ಎನ್. ವಾಸು, ಮಾಜಿ ಆಡಳಿತಾಧಿಕಾರಿ ಮುರಾರಿ ಬಾಬು, ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಡಿ. ಸುಧೀಶ್ ಕುಮಾರ್ ಹಾಗೂ ತಿರುವಾಭರಣಂನ ಮಾಜಿ ಆಯುಕ್ತ ಕೆ.ಎಸ್. ಬೈಜು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Rashi bavishya

ದಿನ ಭವಿಷ್ಯ ಜನವರಿ 14, 2026: ಈ ರಾಶಿಯವರಿಗೆ ಭಾವನಾತ್ಮಕ ತೊಂದರೆಯ ದಿನ!

by ಶ್ರೀದೇವಿ ಬಿ. ವೈ
January 14, 2026 - 7:14 am
0

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T225407.674
    ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ
    January 13, 2026 | 0
  • Untitled design 2026 01 13T174323.970
    ಜಮ್ಮು ಕಾಶ್ಮೀರದಲ್ಲಿ ಉಗ್ರರೊಂದಿಗೆ ನಂಟು ಹೊಂದಿದ್ದ 5 ಸರ್ಕಾರಿ ನೌಕರರು ವಜಾ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶ
    January 13, 2026 | 0
  • Untitled design 2026 01 13T164449.935
    ಪೋಷಕರನ್ನು ನಿರ್ಲಕ್ಷಿಸಿದರೆ ಸರ್ಕಾರಿ ನೌಕರರ ಸಂಬಳಕ್ಕೇ ಕತ್ತರಿ: ವೇತನದಲ್ಲಿ ಶೇ.10% ಕಡಿತಕ್ಕೆ ನಿರ್ಧಾರ
    January 13, 2026 | 0
  • Untitled design 2026 01 13T162346.486
    ಕನ್ನಡಿಗರ ವಾಹನ ತಡೆದ ಕೇರಳ ಪೊಲೀಸರು: ಎರುಮಲೈನಲ್ಲಿ ಪ್ರತಿಭಟಿಸಿದ ಮಾಲಾಧಾರಿಗಳು
    January 13, 2026 | 0
  • Untitled design 2026 01 13T154511.852
    ಓದಿನಲ್ಲಿ ಮುಂದಿದ್ದನೆಂದು ಸಹಪಾಠಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿಗಳು
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version