• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಅಯ್ಯಪ್ಪ ಭಕ್ತರೇ ಎಚ್ಚರ! ಶಬರಿಮಲೆ ದೇವಾಲಯದಲ್ಲಿ ರಹಸ್ಯವಾಗಿ ವಿಡಿಯೋ ಮಾಡಿದರೆ ಕಠಿಣ ಕ್ರಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 26, 2026 - 3:52 pm
in ದೇಶ
0 0
0
Your paragraph text 2026 11 26T154827.065

ತಿರುವನಂತಪುರಂ: ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ದೇವಾಲಯದ ನಿಷೇಧಿತ ಪ್ರದೇಶಗಳಲ್ಲಿ ರಹಸ್ಯವಾಗಿ ಫೋಟೋ, ವಿಡಿಯೋ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವವರ ವಿರುದ್ಧ ಬಂಧನ ಸೇರಿದಂತೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ. ನಿಯಮ ಉಲ್ಲಂಘಿಸುವವರ ಮೊಬೈಲ್ ಫೋನ್ ಹಾಗೂ ಕ್ಯಾಮೆರಾಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯೂ ಇದೆ.

ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ಹಾಗೂ ಮಾಳಿಗಪುರಂ ದೇವಿಯ ಸನ್ನಿಧಿಯ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಸಂಬಂಧ ದೇವಸ್ವಂ ವಿಜಿಲೆನ್ಸ್ ತಂಡವೂ ತನಿಖೆ ನಡೆಸಿ ವರದಿ ಸಲ್ಲಿಸಿದೆ.

RelatedPosts

ರಾಷ್ಟ್ರೀಯ ಹೆದ್ದಾರಿಯೇ ರನ್‌ವೇ: ಸೇನಾ ವಿಮಾನಗಳ ಯಶಸ್ವಿ ಲ್ಯಾಂಡಿಂಗ್‌.!

ಬಿಹಾರ ಶಾಸಕನ ಮಗಳ ಮದುವೆಗೆ ಜನಸಾಗರ: ಕುದುರೆ ರೇಸ್‌ ನೋಡಲು ವಿದ್ಯುತ್ ಕಂಬವೇರಿದ ಜನ

ಕೋರ್ಟ್‌‌ಗೆ ಬಂದಿದ್ದ ಕೊಲೆ ಆರೋಪಿಯನ್ನು ಮಚ್ಚಿನಿಂದ ಕೊಚ್ಚಿ, ಗುಂಡು ಹಾರಿಸಿದ ದುಷ್ಕರ್ಮಿಗಳು  

ಮಧುರೈ ಕಾರ್ತಿಕ ದೀಪಂ ವಿವಾದ: 300ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್

ADVERTISEMENT
ADVERTISEMENT
ನಿಷೇಧಿತ ಪ್ರದೇಶಗಳಲ್ಲಿ ಚಿತ್ರೀಕರಣಕ್ಕೆ ಬ್ರೇಕ್

ಶಬರಿಮಲೆ ದೇವಸ್ಥಾನದ ಒಳಭಾಗದಲ್ಲಿ ಫೋಟೋ ಮತ್ತು ವಿಡಿಯೋ ಚಿತ್ರೀಕರಣಕ್ಕೆ ಈಗಾಗಲೇ ನಿರ್ಬಂಧವಿದೆ. ಅಯ್ಯಪ್ಪಸ್ವಾಮಿಯ ವಿಗ್ರಹ, ಪವಿತ್ರ ಹದಿನೆಂಟು ಮೆಟ್ಟಿಲುಗಳು (ಪತಿನೆಟ್ಟಂಪಾಡಿ), ಮೇಲ್ತಿರುಮುಟ್ಟಂ ಹಾಗೂ ಮಾಳಿಗಪುರಂ ಸನ್ನಿಧಿಯ ದೃಶ್ಯಗಳನ್ನು ಮೊಬೈಲ್ ಫೋನ್ ಅಥವಾ ಕ್ಯಾಮೆರಾಗಳಲ್ಲಿ ಸೆರೆಹಿಡಿಯುವುದನ್ನು ಕೇರಳ ಹೈಕೋರ್ಟ್ ಕಟ್ಟುನಿಟ್ಟಾಗಿ ನಿಷೇಧಿಸಿದೆ.

ಆದರೂ ಕೆಲವರು ನಿಯಮಗಳನ್ನು ಉಲ್ಲಂಘಿಸಿ ರಹಸ್ಯವಾಗಿ ಚಿತ್ರೀಕರಣ ನಡೆಸುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಕೆಲವು ಯೂಟ್ಯೂಬರ್‌ಗಳು ಹಾಗೂ ವ್ಲಾಗರ್‌ಗಳು ಭದ್ರತಾ ಸಿಬ್ಬಂದಿಯ ಕಣ್ಣುತಪ್ಪಿಸಲು ಮೊಬೈಲ್ ಫೋನ್‌ಗಳನ್ನು ಶರ್ಟ್ ಕಿಸೆ, ಬ್ಯಾಗ್ ಅಥವಾ ಹೇರ್ ಬ್ಯಾಂಡ್‌ಗಳಲ್ಲಿ ಬಚ್ಚಿಟ್ಟುಕೊಂಡು ವಿಡಿಯೋ ಮಾಡುತ್ತಿದ್ದಾರೆ ಎನ್ನಲಾಗಿದೆ.

ನಂತರ ಈ ದೃಶ್ಯಗಳನ್ನು ಇತರ ಸಾಮಾನ್ಯ ದೃಶ್ಯಗಳೊಂದಿಗೆ ಎಡಿಟ್ ಮಾಡಿ ಯೂಟ್ಯೂಬ್ ಹಾಗೂ ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹೆಚ್ಚಿನ ಲೈಕ್ಸ್ ಮತ್ತು ಶೇರ್‌ಗಳನ್ನು ಪಡೆಯುವ ಉದ್ದೇಶದಿಂದ ಇಂತಹ ವಿಡಿಯೋಗಳನ್ನು ಪ್ರಸಾರ ಮಾಡುತ್ತಿರುವ ಆರೋಪ ಕೇಳಿಬಂದಿದೆ.

ಮೊಬೈಲ್, ಕ್ಯಾಮೆರಾ ಮುಟ್ಟುಗೋಲು: ಪೊಲೀಸರ ಎಚ್ಚರಿಕೆ

ದೇವಾಲಯದ ನಿಷೇಧಿತ ಪ್ರದೇಶಗಳಲ್ಲಿ ರಹಸ್ಯವಾಗಿ ಫೋಟೋ ಅಥವಾ ವಿಡಿಯೋ ತೆಗೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನಿಯಮ ಉಲ್ಲಂಘಿಸುವವರನ್ನು ಬಂಧಿಸುವುದರ ಜೊತೆಗೆ ಚಿತ್ರೀಕರಣಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಕ್ಯಾಮೆರಾಗಳನ್ನು ವಶಕ್ಕೆ ಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ.

ದೇವಾಲಯದ ಸೂಕ್ಷ್ಮ ಪ್ರದೇಶಗಳ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಭದ್ರತಾ ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ. ಇಂತಹ ವಿಡಿಯೋಗಳನ್ನು ಸಮಾಜವಿರೋಧಿ ಅಥವಾ ಉಗ್ರಗಾಮಿ ಗುಂಪುಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಹೀಗಾಗಿ ಸನ್ನಿಧಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಮೊಬೈಲ್ ಬಳಸುವವರ ಮೇಲೆ ನಿಗಾ ಹೆಚ್ಚಿಸಲಾಗಿದೆ.

ಶಬರಿಮಲೆಗೆ ಭಕ್ತರ ಸಂಖ್ಯೆ ಇಳಿಕೆ

ಇನ್ನೊಂದೆಡೆ, ಈ ಬಾರಿ ಶಬರಿಮಲೆಗೆ ಭೇಟಿ ನೀಡುತ್ತಿರುವ ಭಕ್ತರ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿರುವುದು ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಆತಂಕಕ್ಕೆ ಕಾರಣವಾಗಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಭಕ್ತರ ಸಂಖ್ಯೆ ಕಡಿಮೆಯಾಗಿರುವುದಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು, ವಿಜಿಲೆನ್ಸ್ ಹಾಗೂ ಸೈಬರ್ ಪೊಲೀಸ್ ತಂಡಗಳು ತನಿಖೆ ನಡೆಸುತ್ತಿವೆ.

ವರ್ಚುವಲ್ ಕ್ಯೂ ಬುಕಿಂಗ್ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಸಂಸ್ಥೆಯಿಂದಲೂ ಪಂಪಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಪಂಪಾ ಮೂಲಕ 59,601 ಭಕ್ತರು ದರ್ಶನಕ್ಕೆ ಆಗಮಿಸಿದ್ದಾರೆ. ಆದರೆ ವರ್ಚುವಲ್ ಕ್ಯೂನಲ್ಲಿ ಬುಕ್ಕಿಂಗ್ ಮಾಡಿಕೊಂಡಿದ್ದವರಲ್ಲಿ ಸುಮಾರು 47 ಸಾವಿರ ಮಂದಿ ಮಾತ್ರ ದರ್ಶನಕ್ಕೆ ಬಂದಿದ್ದಾರೆ. ಉಳಿದ ಸುಮಾರು 23 ಸಾವಿರ ಭಕ್ತರು ಬುಕ್ಕಿಂಗ್ ಮಾಡಿದ್ದರೂ ದರ್ಶನಕ್ಕೆ ಹಾಜರಾಗಿಲ್ಲ.

ನಿರ್ಬಂಧ ಸಡಿಲಿಕೆಗೆ ದೇವಸ್ವಂ ನೌಕರರ ಒತ್ತಾಯ

ಭಕ್ತರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆ ಯಾತ್ರಿಕರಿಗೆ ವಿಧಿಸಿರುವ ನಿರ್ಬಂಧಗಳನ್ನು ಸಡಿಲಿಸುವಂತೆ ತಿರುವಾಂಕೂರು ದೇವಸ್ವಂ ನೌಕರರ ಸಂಘಟನೆ ಶಿಫಾರಸು ಮಾಡಿದೆ. ಶಬರಿಮಲೆಗೆ ಬರುವ ಭಕ್ತರಿಗೆ ಯಾವುದೇ ಅಡೆತಡೆಯಿಲ್ಲದೆ ಸುಗಮ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ಸನ್ನಿಧಾನದಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಗರಿಷ್ಠ ಮಟ್ಟದಲ್ಲಿ ಒದಗಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 26T154827.065

ಅಯ್ಯಪ್ಪ ಭಕ್ತರೇ ಎಚ್ಚರ! ಶಬರಿಮಲೆ ದೇವಾಲಯದಲ್ಲಿ ರಹಸ್ಯವಾಗಿ ವಿಡಿಯೋ ಮಾಡಿದರೆ ಕಠಿಣ ಕ್ರಮ

by ಶಾಲಿನಿ ಕೆ. ಡಿ
November 26, 2026 - 3:52 pm
0

Untitled Design 2026 11 26T152119.900

ರಾಷ್ಟ್ರೀಯ ಹೆದ್ದಾರಿಯೇ ರನ್‌ವೇ: ಸೇನಾ ವಿಮಾನಗಳ ಯಶಸ್ವಿ ಲ್ಯಾಂಡಿಂಗ್‌.!

by ಶಾಲಿನಿ ಕೆ. ಡಿ
November 26, 2026 - 3:24 pm
0

Untitled Design 2026 11 26T150243.204

ಅಣ್ತಮ್ಮಾಸ್‌ಗೆ ಗುಡ್‌ ನ್ಯೂಸ್..ಬರಲಿದೆ ಯಶ್ ಕಿರಾತಕ-2

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 26, 2026 - 3:06 pm
0

Untitled Design 2026 11 26T140809.752

ಆಶಾಗಳ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ: ಸಚಿವ ಯು.ಟಿ. ಖಾದರ್

by ಶಾಲಿನಿ ಕೆ. ಡಿ
November 26, 2026 - 2:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 26T152119.900
    ರಾಷ್ಟ್ರೀಯ ಹೆದ್ದಾರಿಯೇ ರನ್‌ವೇ: ಸೇನಾ ವಿಮಾನಗಳ ಯಶಸ್ವಿ ಲ್ಯಾಂಡಿಂಗ್‌.!
    November 26, 2026 | 0
  • Untitled Design 2026 11 26T114107.128
    ಬಿಹಾರ ಶಾಸಕನ ಮಗಳ ಮದುವೆಗೆ ಜನಸಾಗರ: ಕುದುರೆ ರೇಸ್‌ ನೋಡಲು ವಿದ್ಯುತ್ ಕಂಬವೇರಿದ ಜನ
    November 26, 2026 | 0
  • Your paragraph text 2026 11 25T182348.908
    ಕೋರ್ಟ್‌‌ಗೆ ಬಂದಿದ್ದ ಕೊಲೆ ಆರೋಪಿಯನ್ನು ಮಚ್ಚಿನಿಂದ ಕೊಚ್ಚಿ, ಗುಂಡು ಹಾರಿಸಿದ ದುಷ್ಕರ್ಮಿಗಳು  
    November 25, 2026 | 0
  • Your paragraph text 2026 11 25T135052.406
    ಮಧುರೈ ಕಾರ್ತಿಕ ದೀಪಂ ವಿವಾದ: 300ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್
    November 25, 2026 | 0
  • Untitled Design 2026 11 24T111245.069
    ಚೀನಾ-ಪಾಕಿಸ್ತಾನ ಜೊತೆ ಅಮೆರಿಕಾ ಸ್ನೇಹ: ಭಾರತಕ್ಕೆ ಇದು ಎಚ್ಚರಿಕೆಯ ಗಂಟೆಯೇ?
    November 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version