ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು

ಸೋನಿಯಾ ಗಾಂಧಿಗೆ ಅನಾರೋಗ್ಯ

Soniya gandhi

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

78 ವರ್ಷದ ಸೋನಿಯಾ ಗಾಂಧಿಯ ಆರೋಗ್ಯದಲ್ಲಿ ಕ್ಷೀಣತೆ ಕಂಡುಬಂದ ಹಿನ್ನೆಲೆಯಲ್ಲಿ, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ತಜ್ಞರ ತಂಡ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ
ಗಂಗಾ ರಾಮ್ ಆಸ್ಪತ್ರೆಯ ಆಡಳಿತ ಮಂಡಳಿ ಸದಸ್ಯ ಡಾ. ಅಜಯ್ ಸ್ವರೂಪ್ ಅವರ ಹೇಳಿಕೆಯ ಪ್ರಕಾರ, ಸೋನಿಯಾ ಗಾಂಧಿಯ ಆರೋಗ್ಯದಲ್ಲಿ ಹೆಚ್ಚಿನ ಗಂಭೀರ ಸಮಸ್ಯೆ ಇಲ್ಲ, ಕೇವಲ ಹೊಟ್ಟೆ ನೋವಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರೆಲ್ಲರ ನಿಗಾದಲ್ಲಿದ್ದು, ಇಂದು ಅಥವಾ ಶುಕ್ರವಾರ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

Exit mobile version