ಕೆನ್ನೆಗೆ ಬಾರಿಸಿದ ಸಿಟ್ಟಿಗೆ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

Untitled design (86)

ಡೆಹ್ರಾಡೂನ್: ಉತ್ತರಾಖಂಡ್‌ನ ಉದ್ಧಮ್ ಸಿಂಗ್ ನಗರದಲ್ಲಿ ಒಂದು ಖಾಸಗಿ ಶಾಲೆಯಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ತರಗತಿಯಲ್ಲಿ ಎಲ್ಲರ ಮುಂದೆ ತನ್ನ ಕೆನ್ನೆಗೆ ಬಾರಿಸಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಒಬ್ಬ ವಿದ್ಯಾರ್ಥಿ ಲಂಚ್ ಬಾಕ್ಸ್‌ನಲ್ಲಿ ಗನ್ (ಪಿಸ್ತೂಲ್) ಮರೆಮಾಡಿ ತಂದು, ಪಾಠ ಮಾಡುತ್ತಿದ್ದ ಶಿಕ್ಷಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಿಂದ ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭೌತಶಾಸ್ತ್ರದ ಪಾಠ ಮಾಡುತ್ತಿದ್ದ ಶಿಕ್ಷಕ ಗಂಗಾದೀಪ್ ಸಿಂಗ್ ಕೊಹ್ಲಿ, ತರಗತಿಯಲ್ಲಿ ವಿದ್ಯಾರ್ಥಿಯೊಬ್ಬನ ಕೆನ್ನೆಗೆ ಬಾರಿಸಿದ್ದರು. ಈ ಕಾರಣಕ್ಕೆ ಕೋಪಗೊಂಡ 17 ವರ್ಷದ ಸಮರ್ಥ್ ಬಜ್ವಾ ಎಂಬ ವಿದ್ಯಾರ್ಥಿ, ತನ್ನ ಲಂಚ್‌ಬಾಕ್ಸ್‌ನಲ್ಲಿ ಪಿಸ್ತೂಲ್ ತಂದು, ಶಿಕ್ಷಕನ ಹಿಂಬದಿಯ ಕತ್ತಿಗೆಗೆ ಗುಂಡಿಕ್ಕಿದ್ದಾನೆ. ಗಂಗಾದೀಪ್ ಸಿಂಗ್‌ಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಡಾ. ಮಯಾಂಕ್ ಅಗರ್ವಾಲ್ ನೇತೃತ್ವದ ತಂಡವು ಶಸ್ತ್ರಚಿಕಿತ್ಸೆ ನಡೆಸಿ ಗುಂಡನ್ನು ಹೊರತೆಗೆದಿದ್ದು, ಶಿಕ್ಷಕನ ಆರೋಗ್ಯ ಸ್ಥಿರವಾಗಿದೆ ಎಂದರು.

ಘಟನೆಯ ಬಳಿಕ ಆರೋಪಿ ಸಮರ್ಥ್ ಓಡಿಹೋಗಲು ಯತ್ನಿಸಿದರೂ, ಇತರ ಶಿಕ್ಷಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 109ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಪ್ರಾಪ್ತನಾಗಿರುವ ಕಾರಣ ಗನ್‌ನ ಮೂಲವನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕೃತ್ಯಕ್ಕೆ ಬಳಸಿದ ಗನ್‌ನ್ನು ಜಪ್ತಿ ಮಾಡಲಾಗಿದೆ.

Exit mobile version