ತಮಿಳುನಾಡು: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭೀಕರ ಅಗ್ನಿ ಅವಘಡ, ಹೊತ್ತಿ ಉರಿದ ರೈಲು!

Add a heading (80)

ಚೆನ್ನೈ: ತಮಿಳುನಾಡಿನ ತಿರುವಲ್ಲೂರು ರೈಲು ನಿಲ್ದಾಣದ ಸಮೀಪ ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ ನಾಲ್ಕು ವ್ಯಾಗನ್‌ಗಳಲ್ಲಿ ಇಂದು (ಜುಲೈ 13) ಮುಂಜಾನೆ 5:30ರ ಸುಮಾರಿಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದ ರೈಲಿನ ಭಾಗಗಳು ಹೊತ್ತಿ ಉರಿದಿದ್ದು, ಆಕಾಶದಲ್ಲಿ ಕಪ್ಪು ದಟ್ಟಹೊಗೆಯಿಂದ ವಾತಾವರಣ ಕದಡಿತ್ತು.

ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದವು. ಡೀಸೆಲ್ ತುಂಬಿದ್ದ ವ್ಯಾಗನ್‌ಗಳಿಂದಾಗಿ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುವಂತಾಯಿತು. ಸದ್ಯ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ರೈಲು ಮನಾಲಿಯಿಂದ ತಿರುಪತಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ, ಹತ್ತಿರದ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ರೈಲು ಹಳಿ ತಪ್ಪಿ, ಡೀಸೆಲ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಕಾರಣವನ್ನು ಕಂಡುಹಿಡಿಯಲು ತನಿಖೆ ಆರಂಭವಾಗಿದ್ದು, ಹಿರಿಯ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಘಟನೆಯಿಂದ ಚೆನ್ನೈಗೆ ತೆರಳುವ ಮತ್ತು ಚೆನ್ನೈನಿಂದ ಹೊರಡಬೇಕಿದ್ದ ರೈಲು ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿದೆ. ರೈಲ್ವೆ ಇಲಾಖೆಯು ಸೇವೆಗಳನ್ನು ಸಾಮಾನ್ಯ ಸ್ಥಿತಿಗೆ ತರಲು ಕಾರ್ಯಪ್ರವೃತ್ತವಾಗಿದೆ.

Exit mobile version