ತಮಿಳುನಾಡಿನ ಕಾಲ್ತುಳಿತ: 33ಕ್ಕೂ ಹೆಚ್ಚು ಸಾ*ವು, ಮೋದಿ ಸೇರಿದಂತೆ ಗಣ್ಯರ ಸಂತಾಪ

Untitled design 2025 09 27t221844.611

ಕರೂರು, ಸೆಪ್ಟೆಂಬರ್ 27: ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ದಳಪತಿಯ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಉಂಟಾಗಿದೆ. ಈ ದುರಂತದಲ್ಲಿ 33 ಜನರು ಮೃತಪಟ್ಟಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರ್ಯಾಲಿ ಸ್ಥಳದಲ್ಲಿ ಒಂದು ಲಕ್ಷಕ್ಕೂ ಹೆಚ್ಚೂ ಜನ ಸೇರಿದ್ದರು. ಇದರಿಂದಾಗಿ ನೂಕುನುಗ್ಗಲು ಉಂಟಾಗಿ ಈ ದುರ್ಘಟನೆ ಸಂಭವಿಸಿದೆ.

ಪ್ರಧಾನಿ ಮೋದಿಯವರ ಸಂತಾಪ

ಈ ದುರ್ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮವಾದ X ಖಾತೆಯಲ್ಲಿ “ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯ ಸಂದರ್ಭದಲ್ಲಿ ನಡೆದ ದುರದೃಷ್ಟಕರ ಘಟನೆ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.


ಮುಖ್ಯಮಂತ್ರಿ ಸ್ಟಾಲಿನ್ ಭೇಟಿ

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನಾಳೆ ಕರೂರಿಗೆ ಭೇಟಿ ನೀಡಲಿದ್ದಾರೆ. ಅವರು ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಂತಾಪ ಸೂಚಿಸಲಿದ್ದಾರೆ. “ಕರೂರ್ನಿಂದ ಬರುತ್ತಿರುವ ಸುದ್ದಿ ಆತಂಕಕಾರಿಯಾಗಿದೆ. ಕಾಲ್ತುಳಿತದಿಂದಾಗಿ ಮೂರ್ಛೆ ಹೋಗಿ ಆಸ್ಪತ್ರೆಗೆ ದಾಖಲಾಗಿರುವ ಸಾರ್ವಜನಿಕರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಾನು ಸೂಚಿಸಿದ್ದೇನೆ” ಎಂದು ಸ್ಟಾಲಿನ್ ಅವರು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಈ ದುರ್ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ತಮಿಳುನಾಡಿನ ಕರೂರಿನಲ್ಲಿ ನಡೆದ ರ್ಯಾಲಿಯಲ್ಲಿ ಸಂಭವಿಸಿದ ದುರಂತ ಅಪಘಾತದಿಂದ ತೀವ್ರ ದುಃಖವಾಗಿದೆ. ಅಮಾಯಕರ ಜೀವಹಾನಿ ನಿಜಕ್ಕೂ ಹೃದಯವಿದ್ರಾವಕವಾಗಿದೆ. ಎಂದು ಸಂತಾಪ ಸೂಚಿಸಿದ್ದಾರೆ.

 

Exit mobile version