• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2026 - 7:05 pm
in Flash News, ದೇಶ
0 0
0
Your paragraph text 2026 11 07T190338.150

ಚೆನ್ನೈ: ತಮಿಳುನಾಡಿನ ಕಾಲೇಜು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸುವ ಮಹತ್ವಾಕಾಂಕ್ಷೆಯ ‘ವೆಟ್ರಿ ಲ್ಯಾಪ್‌ಟಾಪ್ ಯೋಜನೆ’ (Vetri Laptop Scheme) ಅನುಷ್ಠಾನಕ್ಕೆ ಮುಖ್ಯಮಂತ್ರಿ ವಿಜಯ್ ಆದೇಶ ನೀಡಿದ್ದಾರೆ. ಈ ಯೋಜನೆಗಾಗಿ ರಾಜ್ಯ ಸರ್ಕಾರ ಬರೋಬ್ಬರಿ 2,000 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ.

2026-27ನೇ ಸಾಲಿನ ತಮಿಳುನಾಡು ರಾಜ್ಯ ಬಜೆಟ್‌ನಲ್ಲಿ ಈ ಯೋಜನೆಯನ್ನು ಘೋಷಿಸಲಾಗಿತ್ತು. ಇದೀಗ ಯೋಜನೆಯ ಅನುಷ್ಠಾನಕ್ಕೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಫಲಾನುಭವಿಗಳ ಆಯ್ಕೆ ಹಾಗೂ ಲ್ಯಾಪ್‌ಟಾಪ್ ವಿತರಣೆಗೆ ಸಂಬಂಧಿಸಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ ಹೆಚ್ಚಿಸುವುದು, ಡಿಜಿಟಲ್ ಶಿಕ್ಷಣಕ್ಕೆ ಉತ್ತೇಜನ ನೀಡುವುದು ಹಾಗೂ ಉದ್ಯೋಗಾವಕಾಶಗಳಿಗೆ ಅವರನ್ನು ಸಜ್ಜುಗೊಳಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

RelatedPosts

ದೀಪೋತ್ಸವಕ್ಕೆ ಅಯೋಧ್ಯೆ ಸಜ್ಜು: 30 ಲಕ್ಷ ದೀಪಗಳಿಂದ ಕಂಗೊಳಿಸಲಿದೆ ರಾಮನಗರಿ

ಡಿಸೆಂಬರ್ 12ರಂದು ಅಯೋಧ್ಯೆಗೆ ಅಖಿಲೇಶ್ ಯಾದವ್ ಭೇಟಿ

ಅಮಿತಾಭ್ ಬಚ್ಚನ್ ಬಂಗಲೆ ಜಲ್ಸಾಗೆ ಬಾಂಬ್ ಬೆದರಿಕೆ; ಮುಂಬೈನಲ್ಲಿ ಹೈ ಅಲರ್ಟ್

ತಿರುವಣ್ಣಾಮಲೈಗೆ ಹೋಗುವ ಮುನ್ನ ಈ ಸುದ್ದಿ ಓದಿ: ಬೆಟ್ಟ ಹತ್ತುವಂತಿಲ್ಲ!

ADVERTISEMENT
ADVERTISEMENT
ಯಾರಿಗೆ ಸಿಗಲಿದೆ ಉಚಿತ ಲ್ಯಾಪ್‌ಟಾಪ್?

ವೆಟ್ರಿ ಲ್ಯಾಪ್‌ಟಾಪ್ ಯೋಜನೆಯಡಿ 2026-27ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಮತ್ತು ಸರ್ಕಾರದಿಂದ ಅನುದಾನ ಪಡೆಯುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ಹಾಗೂ ಡಿಪ್ಲೊಮಾ ಕೋರ್ಸ್‌ಗಳ ಮೊದಲ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಲಾಗುತ್ತದೆ.

ಕೇವಲ ಸಾಮಾನ್ಯ ಪದವಿ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಈ ಯೋಜನೆಯ ಲಾಭ ಸಿಗಲಿದೆ. ಕಲೆ, ವಿಜ್ಞಾನ, ಎಂಜಿನಿಯರಿಂಗ್, ಪಾಲಿಟೆಕ್ನಿಕ್, ಐಟಿಐ, ವೈದ್ಯಕೀಯ, ಪಶುವೈದ್ಯಕೀಯ, ಕೃಷಿ, ಮೀನುಗಾರಿಕೆ ಮತ್ತು ಕಾನೂನು ಸೇರಿದಂತೆ ಹಲವು ವಿಭಾಗಗಳ ವಿದ್ಯಾರ್ಥಿಗಳು ಫಲಾನುಭವಿಗಳಾಗಲಿದ್ದಾರೆ.

ಇದರ ಜೊತೆಗೆ, 2025-26ನೇ ಶೈಕ್ಷಣಿಕ ವರ್ಷದಲ್ಲಿ ಉಚಿತ ಲ್ಯಾಪ್‌ಟಾಪ್ ಪಡೆಯಲು ಸಾಧ್ಯವಾಗದ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ವೃತ್ತಿಪರ ಕೋರ್ಸ್‌ಗಳ ಮೂರನೇ ಮತ್ತು ನಾಲ್ಕನೇ ವರ್ಷದ ವಿದ್ಯಾರ್ಥಿಗಳಿಗೂ ಯೋಜನೆಯ ಸೌಲಭ್ಯ ವಿಸ್ತರಿಸಲಾಗಿದೆ. ಇದರಿಂದ ಈ ಹಿಂದೆ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೂ ಮತ್ತೊಂದು ಅವಕಾಶ ಸಿಕ್ಕಂತಾಗಿದೆ.

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಲ್ಯಾಪ್‌ಟಾಪ್

ಈ ಯೋಜನೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ತಾಂತ್ರಿಕ ಅಗತ್ಯಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಎಂಜಿನಿಯರಿಂಗ್ ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಂಟೆಲ್ ಕೋರ್ ಐ5 ಪ್ರೊಸೆಸರ್ ಅಥವಾ ಅದಕ್ಕೆ ಸಮಾನ ಸಾಮರ್ಥ್ಯ ಹೊಂದಿರುವ ಪ್ರೊಸೆಸರ್‌ನ ಲ್ಯಾಪ್‌ಟಾಪ್‌ಗಳನ್ನು ವಿತರಿಸಲು ಸರ್ಕಾರ ನಿರ್ಧರಿಸಿದೆ.

ಎಂಜಿನಿಯರಿಂಗ್ ವಿದ್ಯಾರ್ಥಿಗಳು ವಿವಿಧ ಸಾಫ್ಟ್‌ವೇರ್‌ಗಳು, ಪ್ರೋಗ್ರಾಮಿಂಗ್, ಡಿಸೈನ್ ಮತ್ತು ತಾಂತ್ರಿಕ ತರಬೇತಿಗಳಿಗೆ ಲ್ಯಾಪ್‌ಟಾಪ್ ಬಳಸಬೇಕಾಗುತ್ತದೆ. ಈ ಹಿನ್ನೆಲೆ ಅವರ ಶೈಕ್ಷಣಿಕ ಅಗತ್ಯಗಳಿಗೆ ತಕ್ಕಂತೆ ಉತ್ತಮ ಸಾಮರ್ಥ್ಯದ ಸಾಧನಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ.

ಲ್ಯಾಪ್‌ಟಾಪ್ ಖರೀದಿ ಹೊಣೆ ಯಾರಿಗೆ?

ವಿದ್ಯಾರ್ಥಿಗಳಿಗೆ ವಿತರಿಸಲು ಅಗತ್ಯವಿರುವ ಲ್ಯಾಪ್‌ಟಾಪ್‌ಗಳ ಖರೀದಿ ಜವಾಬ್ದಾರಿಯನ್ನು ತಮಿಳುನಾಡು ಸರ್ಕಾರದ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್‌ಗೆ ವಹಿಸಲಾಗಿದೆ. ನಿಗದಿತ ಗುಣಮಟ್ಟ ಮತ್ತು ತಾಂತ್ರಿಕ ಮಾನದಂಡಗಳನ್ನು ಪೂರೈಸುವ ಲ್ಯಾಪ್‌ಟಾಪ್‌ಗಳನ್ನು ಖರೀದಿಸಲು ಸಂಸ್ಥೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಮೇಲ್ವಿಚಾರಣೆ ನಡೆಸಲು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನೂ ರಚಿಸಲಾಗುತ್ತದೆ. ಈ ಸಮಿತಿಯು ಯೋಜನೆಯ ಪ್ರಗತಿ, ಫಲಾನುಭವಿಗಳ ಆಯ್ಕೆ ಹಾಗೂ ವಿತರಣಾ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಿದೆ.

ವಿದ್ಯಾರ್ಥಿಗಳ ಡಿಜಿಟಲ್ ಕನಸಿಗೆ ಬಲ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣದ ಜೊತೆಗೆ ತಾಂತ್ರಿಕ ಜ್ಞಾನವೂ ಅತ್ಯಂತ ಅಗತ್ಯವಾಗಿದೆ. ಆನ್‌ಲೈನ್ ತರಗತಿಗಳು, ಡಿಜಿಟಲ್ ಅಧ್ಯಯನ ಸಾಮಗ್ರಿಗಳು, ಇಂಟರ್ನೆಟ್ ಆಧಾರಿತ ಸಂಶೋಧನೆ ಹಾಗೂ ಕೌಶಲ ಅಭಿವೃದ್ಧಿ ತರಬೇತಿಗಳಿಗೆ ಲ್ಯಾಪ್‌ಟಾಪ್ ಪ್ರಮುಖ ಸಾಧನವಾಗಿದೆ. ಆದರೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅನೇಕ ವಿದ್ಯಾರ್ಥಿಗಳಿಗೆ ಸ್ವಂತ ಲ್ಯಾಪ್‌ಟಾಪ್ ಖರೀದಿಸುವುದು ಕಷ್ಟಸಾಧ್ಯವಾಗಿದೆ.

ಇದನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ಸರ್ಕಾರ ಈ ಯೋಜನೆಯನ್ನು ರೂಪಿಸಿದೆ. ಉಚಿತ ಲ್ಯಾಪ್‌ಟಾಪ್ ದೊರೆಯುವುದರಿಂದ ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ಆನ್‌ಲೈನ್ ಕೋರ್ಸ್‌ಗಳನ್ನು ಕಲಿಯಬಹುದು. ಉದ್ಯೋಗಕ್ಕೆ ಅಗತ್ಯವಿರುವ ಡಿಜಿಟಲ್ ಕೌಶಲಗಳನ್ನು ಅಭಿವೃದ್ಧಿಪಡಿಸಿಕೊಳ್ಳಬಹುದು. ಅಲ್ಲದೆ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ, ಪ್ರಾಜೆಕ್ಟ್‌ಗಳು ಮತ್ತು ಸಂಶೋಧನಾ ಚಟುವಟಿಕೆಗಳಿಗೂ ನೆರವಾಗಲಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 07T190338.150

ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!

by ಶಾಲಿನಿ ಕೆ. ಡಿ
November 7, 2026 - 7:05 pm
0

Your paragraph text 2026 11 07T173547.389

ದೀಪೋತ್ಸವಕ್ಕೆ ಅಯೋಧ್ಯೆ ಸಜ್ಜು: 30 ಲಕ್ಷ ದೀಪಗಳಿಂದ ಕಂಗೊಳಿಸಲಿದೆ ರಾಮನಗರಿ

by ಶಾಲಿನಿ ಕೆ. ಡಿ
November 7, 2026 - 5:39 pm
0

Your paragraph text 2026 11 07T171042.357

ದರ್ಶನ್‌ಗೆ ಜೈಲಿನಲ್ಲೇ ಚಿಕಿತ್ಸೆ ಪಡೆಯಲು ಕೋರ್ಟ್ ಅಸ್ತು: ಫಿಸಿಯೋಥೆರಪಿಗೆ ಗ್ರೀನ್ ಸಿಗ್ನಲ್

by ಶಾಲಿನಿ ಕೆ. ಡಿ
November 7, 2026 - 5:11 pm
0

Your paragraph text 2026 11 07T162617.464

IND vs NZ: ಸೋಲಿನ ಸುಳಿಗೆ ಸಿಲುಕಿದ್ದ ಭಾರತಕ್ಕೆ ಗೆಲುವು: ಕಿವೀಸ್‌ಗೆ ಶಾಕ್ ಕೊಟ್ಟ ಮಳೆರಾಯ

by ಶಾಲಿನಿ ಕೆ. ಡಿ
November 7, 2026 - 4:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
  • ಹಾಲಿನೊಂದಿಗೆ (1)
    ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್: ನಟ ಧನ್ವೀರ್‌ಗೆ ಮತ್ತೊಂದು ಸಂಕಷ್ಟ!
    November 5, 2026 | 0
  • ಘೋಷಣೆ (4)
    ರೇಣುಕಾಸ್ವಾಮಿ ಕೇಸ್: ಪ್ರದೋಷ್‌ಗೆ ತಾತ್ಕಾಲಿಕ ರಿಲೀಫ್
    November 4, 2026 | 0
  • ಘೋಷಣೆ
    ದೀಪಾವಳಿ ಹಬ್ಬಕ್ಕೆ ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ
    November 4, 2026 | 0
  • BMTC, KSRTC ಟಿಕೆಟ್ ದರ 9 ರೂ. ಹೆಚ್ಚಳ
    ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ
    November 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version