ಶಾಲಾ ಬಸ್‌ಗೆ ರೈಲು ಡಿಕ್ಕಿ: ಇಬ್ಬರು ಮಕ್ಕಳ ಸಾವು, ಆರು ಮಂದಿಗೆ ಗಂಭೀರ ಗಾಯ

Untitled design 2025 07 08t112026.681
ADVERTISEMENT
ADVERTISEMENT

ಶಾಲಾ ಬಸ್‌ಗೆ ರೈಲು ಡಿಕ್ಕಿ ಹೊಡೆದ ಘೋರ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ. ಈ ದುರಂತದಲ್ಲಿ  ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಿಂದ ಶಾಲಾ ಮಕ್ಕಳು, ಪೋಷಕರಲ್ಲಿ ಆತಂಕ ಮನೆಮಾಡಿದೆ.

ಕಡಲೂರು ಮತ್ತು ಅಲಪ್ಪಕ್ಕಂ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಲ್ಲಿ ಈ ಅಪಘಾತ ಸಂಭವಿಸಿದೆ. ವಿಲ್ಲುಪುರಂ-ಮೈಲಾಡುತುರೈ ಪ್ಯಾಸೆಂಜರ್ ರೈಲು ಶಾಲಾ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ರೈಲ್ವೆ ಕ್ರಾಸಿಂಗ್ ಇಂಟರ್‌ಲಾಕ್ ಇಲ್ಲದ ಗೇಟ್ ಆಗಿದ್ದು, ಸುರಕ್ಷತೆಗೆ ಸಂಬಂಧಿಸಿದ ಕೆಲವು ಲೋಪಗಳು ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವಂತೆ, ಶಾಲಾ ಬಸ್ ಚಾಲಕನ ಒತ್ತಾಯವೇ ಈ ಅಪಘಾತಕ್ಕೆ ಪ್ರಮುಖ ಕಾರಣವಾಗಿದೆ. ಗೇಟ್‌ಕೀಪರ್ ರೈಲು ಸಮೀಪಿಸುತ್ತಿರುವುದರಿಂದ ಗೇಟ್ ಮುಚ್ಚಲು ಪ್ರಯತ್ನಿಸಿದ್ದಾನೆ. ಆದರೆ, ಬಸ್ ಚಾಲಕ ಗೇಟ್ ತೆರೆಯುವಂತೆ ಒತ್ತಾಯಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಒತ್ತಾಯದಿಂದ ಗೇಟ್‌ಕೀಪರ್ ಒತ್ತಡಕ್ಕೆ ಒಳಗಾಗಿ ಗೇಟ್ ತೆರೆದಿದ್ದು, ಇದು ದುರಂತಕ್ಕೆ ಕಾರಣವಾಯಿತು ಎಂದು ತನಿಖೆಯಿಂದ ತಿಳಿದುಬಂದಿದೆ.

ಅಪಘಾತದಿಂದ ಗಾಯಗೊಂಡ ಆರು ಮಕ್ಕಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದ್ದು, ವೈದ್ಯಕೀಯ ತಂಡವು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದೆ. ಇಬ್ಬರು ಮಕ್ಕಳು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version