• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2026 - 9:28 pm
in Flash News, ದೇಶ
0 0
0
Your paragraph text 2026 11 07T212633.251

ಡೆಹ್ರಾಡೂನ್: ಉತ್ತರಾಖಂಡ್‌ನ ಸಚಿವೆ ರೇಖಾ ಆರ್ಯ ಅವರ ಮೇಲೆ ಹಲ್ಲೆ ನಡೆಸಿ, ಜಾತಿ ಆಧಾರಿತ ಅವಹೇಳನಕಾರಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಅವರ ಪತಿ ಲಾಲ್ ಸಾಹು ಅಲಿಯಾಸ್ ಪಪ್ಪು ಗಿರಿಧಾರಿ ಲಾಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಝಾನ್ಸಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಉತ್ತರಾಖಂಡ್‌ಗೆ ಕರೆತಂದಿದ್ದಾರೆ. ನಕಲಿ ದಾಖಲೆ ಸೃಷ್ಟಿ ಹಾಗೂ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಗಂಭೀರ ಆರೋಪಗಳು ಆತನ ವಿರುದ್ಧ ದಾಖಲಾಗಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಡೆಹ್ರಾಡೂನ್ ಎಸ್‌ಎಸ್‌ಪಿ ಪ್ರಮೇಂದ್ರ ದೋಭಾಲ್, ಗಿರಿಧಾರಿ ಲಾಲ್‌ನನ್ನು ನಕಲಿ ದಾಖಲೆ ಸೃಷ್ಟಿ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದಾಖಲಾಗಿರುವ ಆರೋಪಗಳ ಹಿನ್ನೆಲೆ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಸತ್ಯೇಂದ್ರ ಠಾಕೂರ್‌ನನ್ನು ಉಧಮ್ ಸಿಂಗ್ ನಗರ ಜಿಲ್ಲೆಯ ಕಿಚ್ಚಾ ಸಮೀಪ ಬಂಧಿಸಲಾಗಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

RelatedPosts

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ

ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ

ಅಯೋಧ್ಯೆಯಲ್ಲಿ ದೀಪೋತ್ಸವ: 36 ಲಕ್ಷ ದೀಪ ಬೆಳಗಿಸಿ ಹೊಸ ಗಿನ್ನಿಸ್ ದಾಖಲೆ

ADVERTISEMENT
ADVERTISEMENT

ಝಾನ್ಸಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಖಾಸಗಿ ವಿಶ್ವವಿದ್ಯಾಲಯವೊಂದರ ಆವರಣದ ಹೊರಭಾಗದಲ್ಲಿ ಗಿರಿಧಾರಿ ಲಾಲ್ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಶುಕ್ರವಾರ ಪೊಲೀಸರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಳಿಕ ಉತ್ತರಾಖಂಡ್‌ಗೆ ಕರೆತಂದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಗಿರಿಧಾರಿ ಲಾಲ್ ವಿರುದ್ಧ ಈಗಾಗಲೇ 44ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕೆಲವು ಪ್ರಕರಣಗಳಲ್ಲಿ ಆತ ಶಿಕ್ಷೆಗೊಳಗಾಗಿದ್ದು, ಇನ್ನು ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿವೆ. ಪ್ರಸ್ತುತ ಪ್ರಕರಣದ ತನಿಖೆಯ ವೇಳೆ ಇತರ ವ್ಯಕ್ತಿಗಳ ಪಾತ್ರವೂ ಬೆಳಕಿಗೆ ಬಂದರೆ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ಸಂಬಂಧದ ವಿಚಾರವಾಗಿ ಪತಿ ವಿರುದ್ಧ ಆರೋಪ

ಸಚಿವೆ ರೇಖಾ ಆರ್ಯ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಮ್ಮ ಪತಿಯ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಪತಿಯ ವರ್ತನೆಯಲ್ಲಿ ಬದಲಾವಣೆ ಕಂಡುಬಂದಿತ್ತು. ಅವರಿಗೆ ಇತರ ಮಹಿಳೆಯರೊಂದಿಗೆ ಅಕ್ರಮ ಸಂಬಂಧಗಳಿರುವ ವಿಚಾರ ತಿಳಿದುಬಂದಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವಿಚಾರವಾಗಿ ಪತಿಯನ್ನು ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದಾಗ, ಆರಂಭದಲ್ಲಿ ತಮ್ಮ ತಪ್ಪುಗಳನ್ನು ಒಪ್ಪಿಕೊಂಡು ಮೌಖಿಕವಾಗಿ ಹಾಗೂ ಲಿಖಿತವಾಗಿ ಕ್ಷಮೆಯಾಚಿಸಿದ್ದರು. ಆದರೆ, ಕ್ಷಮೆ ಕೇಳಿದ ಬಳಿಕವೂ ಅದೇ ರೀತಿಯ ವರ್ತನೆ ಮುಂದುವರಿಸಿದ್ದರು ಎಂದು ರೇಖಾ ಆರ್ಯ ಆರೋಪಿಸಿದ್ದಾರೆ.

ಪತಿಯ ಇತರ ಸಂಬಂಧಗಳನ್ನು ವಿರೋಧಿಸಿದ ಕಾರಣಕ್ಕೆ ತಮ್ಮ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸುವುದರ ಜೊತೆಗೆ ಕೊಲೆ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಅಧಿಕೃತ ನಿವಾಸದಲ್ಲಿಯೇ ಸಿಬ್ಬಂದಿಯ ಸಮ್ಮುಖದಲ್ಲಿ ಜಾತಿ ಆಧಾರಿತ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಲಾಗುತ್ತಿತ್ತು ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.

ನಕಲಿ ಸಹಿ, ದಾಖಲೆ ಸೃಷ್ಟಿ ಆರೋಪ

ಈ ಪ್ರಕರಣದಲ್ಲಿ ನಕಲಿ ದಾಖಲೆಗಳ ಸೃಷ್ಟಿಯ ಆರೋಪವೂ ಪ್ರಮುಖವಾಗಿದೆ. ಸಂಬಂಧಪಟ್ಟ ಕಂಪನಿಗಳ ನಿರ್ದೇಶಕ ಹುದ್ದೆಯಿಂದ ರೇಖಾ ಆರ್ಯ ಅವರನ್ನು ತೆಗೆದುಹಾಕಲಾಗಿದೆ ಎಂದು ತೋರಿಸಲು ಗಿರಿಧಾರಿ ಲಾಲ್ ನಕಲಿ ಸಹಿ ಹಾಗೂ ದಾಖಲೆಗಳನ್ನು ಬಳಸಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಆ ಹುದ್ದೆಗೆ ಸತ್ಯೇಂದ್ರ ಠಾಕೂರ್ ಅವರನ್ನು ನೇಮಿಸಲು ಪ್ರಯತ್ನಿಸಲಾಗಿದೆ ಎಂಬುದಾಗಿಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 08T185054.202

ಹಾಸನಾಂಬೆ ಸನ್ನಿಧಿಯಲ್ಲೇ ಅಧಿಕಾರಿಗಳ ಮಧ್ಯೆ ಕಿತ್ತಾಟ; ತಹಶೀಲ್ದಾರ್-ಡಿವೈಎಸ್‌ಪಿ ನಡುವೆ ವಾಗ್ವಾದ

by ಶಾಲಿನಿ ಕೆ. ಡಿ
November 8, 2026 - 6:51 pm
0

Your paragraph text 2026 11 08T182911.698

ದೀಪಾವಳಿ ಸಂಭ್ರಮದಲ್ಲಿ ನಟಿ ಕತ್ರಿನಾ-ವಿಕ್ಕಿ: ಮಗನ ಮುಖ ರಿವೀಲ್ ಮಾಡಿದ ಬಾಲಿವುಡ್ ಜೋಡಿ

by ಶಾಲಿನಿ ಕೆ. ಡಿ
November 8, 2026 - 6:30 pm
0

Your paragraph text 2026 11 08T180924.902

ನಮ್ಮನ್ನ ಟಾರ್ಗೆಟ್‌ ಮಾಡುತ್ತಿದ್ದಾರೆ, ಎಲ್ಲದಕ್ಕೂ ರೆಡಿ ಇದ್ದೇವೆ’: ಹೆಚ್‌ಡಿಕೆ ಆರೋಪಕ್ಕೆ ಹಾಸನ ಡಿಸಿ ತಿರುಗೇಟು

by ಶಾಲಿನಿ ಕೆ. ಡಿ
November 8, 2026 - 6:12 pm
0

Untitled design 2026 11 08T171941.903

ಯುನೆಸ್ಕೋ ಪಟ್ಟಿಗೆ ಭಾರತದ ಮೂರು ಪ್ರಾಚೀನ ಗ್ರಂಥಗಳು ಸೇರ್ಪಡೆ

by ಶಾಲಿನಿ ಕೆ. ಡಿ
November 8, 2026 - 5:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
  • ಹಾಲಿನೊಂದಿಗೆ (1)
    ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್: ನಟ ಧನ್ವೀರ್‌ಗೆ ಮತ್ತೊಂದು ಸಂಕಷ್ಟ!
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version