ನಾಳೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

BeFunky collage 2026 05 06T123156.511

ತಮಿಳುನಾಡು ರಾಜಕೀಯದಲ್ಲಿ ಚರಿತ್ರೆ ಸೃಷ್ಟಿಯಾಗುತ್ತಿದೆ. ನಟರಿಂದ ರಾಜಕಾರಣಿಗೆ ತಿರುಗಿದ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಮೇ 7ರಂದು (ನಾಳೆ) ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನ 3:30ಕ್ಕೆ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕು ಮಂಡಿಸಲಿದ್ದಾರೆ.

ಟಿವಿಕೆ-ಕಾಂಗ್ರೆಸ್ ಮೈತ್ರಿ ಸರ್ಕಾರ ವಿಧಾನಸಭೆಯಲ್ಲಿ ಬಹುಮತಕ್ಕೆ (118) 10 ಸ್ಥಾನಗಳ ಕೊರತೆ ಇದ್ದರೂ, ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಟಿವಿಕೆ ಸರ್ಕಾರ ರಚಿಸಲು ಸಿದ್ಧವಾಗಿದೆ. 5 ಸ್ಥಾನ ಗೆದ್ದಿರುವ ಕಾಂಗ್ರೆಸ್ ಈಗಾಗಲೇ ಬೆಂಬಲ ಘೋಷಿಸಿದ್ದು, ಎರಡು ಸಚಿವ ಸ್ಥಾನಗಳ ಬೇಡಿಕೆ ಇಟ್ಟಿದೆ ಎನ್ನಲಾಗುತ್ತಿದೆ.

ವಿಜಯ್ ಅವರು ಈಗಾಗಲೇ ರಾಜ್ಯಪಾಲರಿಗೆ ಪತ್ರ ಬರೆದು ಸರ್ಕಾರ ರಚಿಸಲು ಆಹ್ವಾನಿಸುವಂತೆ ಕೋರಿದ್ದಾರೆ. ಎರಡು ವಾರಗಳಲ್ಲಿ ಸದನದಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಭರವಸೆ ನೀಡಿದ್ದಾರೆ.

ಇತರ ಪಕ್ಷಗಳು ಎಡಪಕ್ಷಗಳಾದ ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ನೀಡುವ ಸಾಧ್ಯತೆಯಿದೆ. ಎಐಎಡಿಎಂಕೆ  ಪಕ್ಷದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸುಮಾರು 35 ಶಾಸಕರು ವಿಜಯ್‌ಗೆ ಬೆಂಬಲ ನೀಡುವ ಬಗ್ಗೆ ಚರ್ಚಿಸುತ್ತಿರುವುದು ವರದಿಯಾಗಿದೆ.

ವಿಜಯ್ ಅವರ ಪ್ರತಿಕ್ರಿಯೆ : ಚುನಾವಣಾ ಯಶಸ್ಸಿನ ನಂತರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯ್, “ಆರಂಭದಲ್ಲಿ ಅನೇಕರು ನಮ್ಮನ್ನು ಹೀಯಾಳಿಸಿದರು. ಆದರೆ ನಾವು ಜನರ ಮೇಲೆ ನಂಬಿಕೆ ಇಟ್ಟು ಮುನ್ನಡೆದೆವು. ಯುವ ಮತದಾರರು ನಮ್ಮ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ” ಎಂದು ಹೇಳಿದ್ದಾರೆ.

ಐತಿಹಾಸಿಕ ಕ್ಷಣ

ಟಿವಿಕೆ ಪಕ್ಷವು ತನ್ನ ಮೊದಲ ಚುನಾವಣೆಯಲ್ಲೇ 108 ಸೀಟುಗಳನ್ನು ಗೆದ್ದು ಡ್ರಾವಿಡ ಪಕ್ಷಗಳ (ಡಿಎಂಕೆ ಮತ್ತು ಎಐಎಡಿಎಂಕೆ) ದೀರ್ಘಕಾಲದ ಆಳ್ವಿಕೆಗೆ ತಡೆ ಹಾಕಿದೆ. ಮೇ 7ರಂದು ಚೆನ್ನೈನ ಜವಾಹರಲಾಲ್ ನೆಹರು ಇಂಡೋರ್ ಸ್ಟೇಡಿಯಂನಲ್ಲಿ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆಯಿದೆ.

Exit mobile version