• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌‌ಗೆ ಮಾತೃ ವಿಯೋಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2026 - 2:43 pm
in ದೇಶ
0 0
0
Untitled Design (12)

ಲಕ್ನೋ, ನವೆಂಬರ್ 20: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ. ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಪಂಚೂರ್ ಗ್ರಾಮದ ತಮ್ಮ ಪೂರ್ವಜರ ನಿವಾಸದಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ. ಈ ಸುದ್ದಿಯನ್ನು ಪೌರಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

91 ವರ್ಷಗಳ ಸುದೀರ್ಘ ಜೀವನ ನಡೆಸಿದ್ದ ಸಾವಿತ್ರಿ ದೇವಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿದ್ದು, ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿತ್ತು ಎಂದು ಕುಟುಂಬದ ಮೂಲಗಳ ಮಾಹಿತಿ ಉಲ್ಲೇಖಿಸಿ ವರದಿಯಾಗಿದೆ.

RelatedPosts

ಕಾವೇರಿ ನೀರು ವಿವಾದ: ತಮಿಳುನಾಡಿಗೆ ಬಿಗ್‌ ಶಾಕ್, ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಿದ ಅಕ್ವಾನ್ ಚಂಡಮಾರುತ: 60ಕ್ಕೂ ಹೆಚ್ಚು ರೈಲುಗಳು ರದ್ದು

ಅಖಿಲೇಶ್ ಯಾದವ್ ರೋಡ್‌ಶೋ ವೇಳೆ ದುರಂತ: ಬುಲ್ಡೋಜರ್ ಡಿಕ್ಕಿಯಾಗಿ ಬಿಜೆಪಿ ನಾಯಕನ ಪುತ್ರ ಸಾವು

ಛತ್ತೀಸ್‌ಗಢದಲ್ಲಿ ಜೈಲಿನ ಕಾಂಪೌಂಡ್ ಹಾರಿ ನಾಲ್ವರು ಕೈದಿಗಳು ಪರಾರಿ

ADVERTISEMENT
ADVERTISEMENT
ಪಂಚೂರ್ ಗ್ರಾಮದ ಮನೆಯಲ್ಲಿ ಕೊನೆಯುಸಿರು

ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯ ಪಂಚೂರ್ ಗ್ರಾಮ ಯೋಗಿ ಆದಿತ್ಯನಾಥ್ ಅವರ ಪೂರ್ವಜರ ಊರು. ಇದೇ ಗ್ರಾಮದಲ್ಲಿರುವ ತಮ್ಮ ಮನೆಯಲ್ಲಿಯೇ ಸಾವಿತ್ರಿ ದೇವಿ ವಾಸವಾಗಿದ್ದರು. ನವೆಂಬರ್ 20ರಂದು ಬೆಳಗ್ಗೆ ಸುಮಾರು 11 ಗಂಟೆ ವೇಳೆಗೆ ಅವರು ನಿಧನರಾಗಿದ್ದಾರೆ ಎಂದು ಪೌರಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ಸಹೋದರ ಮಹೇಂದ್ರ ಸಿಂಗ್ ಬಿಷ್ಟ್ ಕೂಡ ತಾಯಿಯ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ವಯಸ್ಸಿನ ಕಾರಣದಿಂದ ಸಾವಿತ್ರಿ ದೇವಿ ಅವರ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದವು ಎನ್ನಲಾಗಿದೆ.

ಹರಿದ್ವಾರದಲ್ಲಿ ಅಂತ್ಯಕ್ರಿಯೆ?

ಸಾವಿತ್ರಿ ದೇವಿ ಅವರ ಅಂತ್ಯಕ್ರಿಯೆಯನ್ನು ಹರಿದ್ವಾರದಲ್ಲಿ ನಡೆಸುವ ಸಾಧ್ಯತೆ ಇದೆ. ಶನಿವಾರ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿಯೂ ವರದಿಯಾಗಿದೆ. 

ಸನ್ಯಾಸ ಸ್ವೀಕರಿಸಿ ಸಾರ್ವಜನಿಕ ಜೀವನದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರೂ, ತಾಯಿಯೊಂದಿಗಿನ ಭಾವನಾತ್ಮಕ ಸಂಬಂಧವನ್ನು ಅವರು ಸದಾ ಉಳಿಸಿಕೊಂಡಿದ್ದರು.

2022ರಲ್ಲಿ ತಾಯಿಯನ್ನು ಭೇಟಿಯಾಗಿದ್ದ ಯೋಗಿ

ಯೋಗಿ ಆದಿತ್ಯನಾಥ್ ಅವರ ಮೂಲ ಹೆಸರು ಅಜಯ್ ಸಿಂಗ್ ಬಿಷ್ಟ್. ಉತ್ತರಾಖಂಡದ ಪಂಚೂರ್ ಗ್ರಾಮದಲ್ಲಿ ಜನಿಸಿದ ಅವರು 1994ರಲ್ಲಿ ಸನ್ಯಾಸ ಸ್ವೀಕರಿಸಿ ಗೋರಖ್‌ಪುರದ ಗೋರಖನಾಥ ಮಠದೊಂದಿಗೆ ತಮ್ಮ ಜೀವನವನ್ನು ಬೆಸೆದುಕೊಂಡರು. ನಂತರ ರಾಜಕೀಯ ಪ್ರವೇಶಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಬೆಳೆದರು.

ಸನ್ಯಾಸ ಸ್ವೀಕರಿಸಿದ ಬಳಿಕ ಕುಟುಂಬದೊಂದಿಗೆ ಅವರ ಭೇಟಿಗಳು ವಿರಳವಾಗಿದ್ದರೂ, ತಾಯಿಯ ಮೇಲಿನ ಪ್ರೀತಿ ಮತ್ತು ಗೌರವ ಮಾತ್ರ ಕಡಿಮೆಯಾಗಿರಲಿಲ್ಲ. 2022ರ ಮೇ ತಿಂಗಳಲ್ಲಿ ಸುಮಾರು ಐದು ವರ್ಷಗಳ ಬಳಿಕ ತಮ್ಮ ಹುಟ್ಟೂರಾದ ಪಂಚೂರ್ ಗ್ರಾಮಕ್ಕೆ ಭೇಟಿ ನೀಡಿದ್ದ ಯೋಗಿ ಆದಿತ್ಯನಾಥ್, ತಾಯಿ ಸಾವಿತ್ರಿ ದೇವಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಈ ಸಂದರ್ಭದಲ್ಲಿ ತಾಯಿಯ ಪಾದಗಳಿಗೆ ನಮಸ್ಕರಿಸಿ ಅವರೊಂದಿಗೆ ಸಮಯ ಕಳೆದಿದ್ದರು.

ತಾಯಿಯ ಆರೋಗ್ಯ ವಿಚಾರಿಸಲು ಏಮ್ಸ್‌ಗೆ ತೆರಳಿದ್ದ ಸಿಎಂ

2024ರ ಜೂನ್‌ನಲ್ಲಿ ಸಾವಿತ್ರಿ ದೇವಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ರಿಷಿಕೇಶದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿಷಯ ತಿಳಿದ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ತೆರಳಿ ತಾಯಿಯ ಆರೋಗ್ಯ ವಿಚಾರಿಸಿದ್ದರು. ವೈದ್ಯರಿಂದ ಚಿಕಿತ್ಸೆಯ ಮಾಹಿತಿ ಪಡೆದು ತಾಯಿಯೊಂದಿಗೆ ಕೆಲಕಾಲ ಸಮಯ ಕಳೆದಿದ್ದರು.

ಇನ್ನು ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಷ್ಟ್ ಅವರು 2020ರ ಏಪ್ರಿಲ್ 20ರಂದು ನಿಧನರಾಗಿದ್ದರು. ಅವರು ಅರಣ್ಯ ಇಲಾಖೆಯಲ್ಲಿ ಫಾರೆಸ್ಟ್ ರೇಂಜರ್ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (12)

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌‌ಗೆ ಮಾತೃ ವಿಯೋಗ

by ಶಾಲಿನಿ ಕೆ. ಡಿ
November 20, 2026 - 2:43 pm
0

Untitled Design (11)

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಮಂತಾ

by ಶಾಲಿನಿ ಕೆ. ಡಿ
November 20, 2026 - 1:56 pm
0

Untitled Design (10)

ಮಂಡ್ಯದಲ್ಲಿ KSRTC ಬಸ್ ತಡೆದು ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಯುವಕ

by ಶಾಲಿನಿ ಕೆ. ಡಿ
November 20, 2026 - 1:23 pm
0

Untitled Design (8)

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ

by ಶಾಲಿನಿ ಕೆ. ಡಿ
November 20, 2026 - 1:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (4)
    ಕಾವೇರಿ ನೀರು ವಿವಾದ: ತಮಿಳುನಾಡಿಗೆ ಬಿಗ್‌ ಶಾಕ್, ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
    November 20, 2026 | 0
  • Untitled Design (2)
    ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಿದ ಅಕ್ವಾನ್ ಚಂಡಮಾರುತ: 60ಕ್ಕೂ ಹೆಚ್ಚು ರೈಲುಗಳು ರದ್ದು
    November 20, 2026 | 0
  • Untitled design 2026 11 19T141835.674
    ಅಖಿಲೇಶ್ ಯಾದವ್ ರೋಡ್‌ಶೋ ವೇಳೆ ದುರಂತ: ಬುಲ್ಡೋಜರ್ ಡಿಕ್ಕಿಯಾಗಿ ಬಿಜೆಪಿ ನಾಯಕನ ಪುತ್ರ ಸಾವು
    November 19, 2026 | 0
  • Untitled design 2026 11 17T123822.076
    ಛತ್ತೀಸ್‌ಗಢದಲ್ಲಿ ಜೈಲಿನ ಕಾಂಪೌಂಡ್ ಹಾರಿ ನಾಲ್ವರು ಕೈದಿಗಳು ಪರಾರಿ
    November 17, 2026 | 0
  • Untitled Design 2026 11 17T120859.916
    ಫಿಲಿಪ್ಪೀನ್ಸ್‌‌ನ ಐತಿಹಾಸಿಕ ಗುರುದ್ವಾರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
    November 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version