• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಾಂಗ್ರೆಸ್ ನಾಯಕರ ಸೋಷಿಯಲ್ ಮೀಡಿಯಾ ಖಾತೆ ಸಸ್ಪೆಂಡ್‌: ಮೆಟಾ ಕಚೇರಿಗೆ ಕಾರ್ಯಕರ್ತರ ಮುತ್ತಿಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 21, 2026 - 12:49 pm
in ದೇಶ
0 0
0
ಸೋಷಿಯಲ್

ಹೈದರಾಬಾದ್: ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೈದರಾಬಾದ್‌ನಲ್ಲಿರುವ ಮೆಟಾ ಕಚೇರಿ ಎದುರು ಭಾರೀ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ವೇಳೆ ಉದ್ರಿಕ್ತರಾದ ಕೆಲ ಕಾರ್ಯಕರ್ತರು ಕಚೇರಿ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಎಸೆದು ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

RelatedPosts

ಮಣಿಪುರದಲ್ಲಿ ವಿಷಪೂರಿತ ಮದ್ಯ ಸೇವಿಸಿ 15 ಮಂದಿ ಸಾ*ವು, 50ಕ್ಕೂ ಹೆಚ್ಚು ಜನರು ಅಸ್ವಸ್ಥ!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌‌ಗೆ ಮಾತೃ ವಿಯೋಗ

ಕಾವೇರಿ ನೀರು ವಿವಾದ: ತಮಿಳುನಾಡಿಗೆ ಬಿಗ್‌ ಶಾಕ್, ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಿದ ಅಕ್ವಾನ್ ಚಂಡಮಾರುತ: 60ಕ್ಕೂ ಹೆಚ್ಚು ರೈಲುಗಳು ರದ್ದು

ADVERTISEMENT
ADVERTISEMENT

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಹಾಗೂ ರಾಷ್ಟ್ರೀಯ ಉಸ್ತುವಾರಿ ಮನೀಶ್ ಶರ್ಮಾ ಅವರ ಸಾಮಾಜಿಕ ಜಾಲತಾಣ ಖಾತೆಗಳಿಗೆ ಮೆಟಾ ನಿರ್ಬಂಧ ವಿಧಿಸಿದೆ. ಇದನ್ನು ವಿರೋಧಿಸಿ ತೆಲಂಗಾಣ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಕ್ಕಿಡಿ ಶಿವಚರಣ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೆಟಾ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

ಹೈದರಾಬಾದ್‌ನ ಮೆಟಾ ಕಚೇರಿ ಎದುರು ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಮೆಟಾ ಸಂಸ್ಥೆ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಾಜಕೀಯ ಕಾರಣಗಳಿಗಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಪ್ರಾಯ ವ್ಯಕ್ತಪಡಿಸುವ ನಾಯಕರ ಧ್ವನಿಯನ್ನು ಅಡಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆಗಳು ಯಾವುದೇ ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು. ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕರ ಖಾತೆಗಳನ್ನು ನಿರ್ಬಂಧಿಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಒಂದು ವಾರದೊಳಗೆ ಸ್ಥಗಿತಗೊಂಡಿರುವ ಸಾಮಾಜಿಕ ಜಾಲತಾಣ ಖಾತೆಗಳನ್ನು ಮರುಸ್ಥಾಪಿಸಬೇಕು ಹಾಗೂ ಡಿಲೀಟ್ ಆಗಿರುವ ಪೋಸ್ಟ್‌ಗಳನ್ನು ಪುನಃಸ್ಥಾಪಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆ ಈಡೇರದಿದ್ದರೆ ನ್ಯಾಯಾಲಯದ ಮೊರೆ ಹೋಗುವುದರ ಜೊತೆಗೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆ ವೇಳೆ ಕೆಲ ಕಾರ್ಯಕರ್ತರು ಮೆಟಾ ಕಚೇರಿ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಎಸೆದು ಧ್ವಂಸಗೊಳಿಸಿದ್ದಾರೆ. 

ಮುಂಬೈನಲ್ಲೂ ಮೆಟಾ ಕಚೇರಿ ಎದುರು ಪ್ರತಿಭಟನೆ

ಕೇವಲ ಹೈದರಾಬಾದ್‌ಗೆ ಮಾತ್ರ ಸೀಮಿತವಾಗದ ಈ ಪ್ರತಿಭಟನೆ ಮುಂಬೈನಲ್ಲೂ ನಡೆದಿದೆ. ಯುವ ಕಾಂಗ್ರೆಸ್ ನಾಯಕರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (BKC) ಮೆಟಾ ಕಚೇರಿ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷೆ ಜೀನತ್ ಶಬ್ರಿನ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡುವ ಧ್ವನಿಗಳನ್ನು ಅಡಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ಪ್ರತಿಭಟನೆಯ ವೇಳೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರ ಪೋಸ್ಟರ್‌ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೆಟಾ ಸಂಸ್ಥೆ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಘೋಷಣೆಗಳನ್ನು ಕೂಗಿದ್ದಾರೆ.

ಮೆಟಾ ವಿರುದ್ಧ ಅಖಿಲೇಶ್ ಯಾದವ್ ಕಿಡಿ

ಈ ವಿವಾದ ರಾಜಕೀಯವಾಗಿ ಮತ್ತಷ್ಟು ವಿಸ್ತರಿಸಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಮೆಟಾ ಸಂಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ವಿದೇಶಿ ಕಂಪನಿಗಳು ಭಾರತದಲ್ಲಿ ರಾಜಕೀಯ ಮಾಡುವ ಬದಲು ವ್ಯವಹಾರಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಭಾರತದಲ್ಲಿ ಕಾರ್ಯನಿರ್ವಹಿಸುವ ವಿದೇಶಿ ಕಂಪನಿಗಳು ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಯಾವುದೇ ರಾಜಕೀಯ ಪಕ್ಷದ ಪರವಾಗಿ ತಾರತಮ್ಯ ಮಾಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಸರ್ಕಾರವೂ ವಿದೇಶಿ ಕಂಪನಿಗಳ ಮೇಲೆ ಅನಗತ್ಯ ಒತ್ತಡ ಹೇರುವ ಮೂಲಕ ಅವುಗಳ ವ್ಯವಹಾರವನ್ನು ರಾಜಕೀಯಗೊಳಿಸಬಾರದು ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

ಇನ್ನು ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಾಗೂ ಮೆಟಾ ಕಚೇರಿಯಲ್ಲಿ ನಡೆದ ಧ್ವಂಸ ಕೃತ್ಯವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಗೂಂಡಾಗಳು ಎಂದು ಟೀಕಿಸಿದ್ದಾರೆ.

ಹೈದರಾಬಾದ್‌ನಲ್ಲಿರುವ ಮೆಟಾ ಕಚೇರಿ ಮೇಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿದ್ದು, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯೇ ಇದು ಎಂದು ಕಿಡಿಕಾರಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸೋಷಿಯಲ್

ಕಾಂಗ್ರೆಸ್ ನಾಯಕರ ಸೋಷಿಯಲ್ ಮೀಡಿಯಾ ಖಾತೆ ಸಸ್ಪೆಂಡ್‌: ಮೆಟಾ ಕಚೇರಿಗೆ ಕಾರ್ಯಕರ್ತರ ಮುತ್ತಿಗೆ

by ಶಾಲಿನಿ ಕೆ. ಡಿ
November 21, 2026 - 12:49 pm
0

Untitled Design (33)

ದರ್ಶನ್ ಬಿಡುಗಡೆಗಾಗಿ ದೇಗುಲ ಸುತ್ತಿದ್ದಾಯ್ತು..ಈಗ ದರ್ಗಾ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
November 21, 2026 - 12:19 pm
0

Untitled Design (31)

ಗ್ರೇಸ್ ಕರಾಟೆ ಮಾರ್ಷಲ್ ಆರ್ಟ್ಸ್ ಅಕಾಡೆಮಿಯ 16 ಸಾಧಕರಿಗೆ ಗಿನ್ನೆಸ್ ಮತ್ತು ಬೋಧಿ ವಿಶ್ವ ದಾಖಲೆಗಳ ಗೌರವ

by ಶಾಲಿನಿ ಕೆ. ಡಿ
November 21, 2026 - 11:59 am
0

Untitled Design (30)

ಮಣಿಪುರದಲ್ಲಿ ವಿಷಪೂರಿತ ಮದ್ಯ ಸೇವಿಸಿ 15 ಮಂದಿ ಸಾ*ವು, 50ಕ್ಕೂ ಹೆಚ್ಚು ಜನರು ಅಸ್ವಸ್ಥ!

by ಶಾಲಿನಿ ಕೆ. ಡಿ
November 21, 2026 - 11:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design (30)
    ಮಣಿಪುರದಲ್ಲಿ ವಿಷಪೂರಿತ ಮದ್ಯ ಸೇವಿಸಿ 15 ಮಂದಿ ಸಾ*ವು, 50ಕ್ಕೂ ಹೆಚ್ಚು ಜನರು ಅಸ್ವಸ್ಥ!
    November 21, 2026 | 0
  • Untitled Design (12)
    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌‌ಗೆ ಮಾತೃ ವಿಯೋಗ
    November 20, 2026 | 0
  • Untitled Design (4)
    ಕಾವೇರಿ ನೀರು ವಿವಾದ: ತಮಿಳುನಾಡಿಗೆ ಬಿಗ್‌ ಶಾಕ್, ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
    November 20, 2026 | 0
  • Untitled Design (2)
    ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಿದ ಅಕ್ವಾನ್ ಚಂಡಮಾರುತ: 60ಕ್ಕೂ ಹೆಚ್ಚು ರೈಲುಗಳು ರದ್ದು
    November 20, 2026 | 0
  • Untitled design 2026 11 19T141835.674
    ಅಖಿಲೇಶ್ ಯಾದವ್ ರೋಡ್‌ಶೋ ವೇಳೆ ದುರಂತ: ಬುಲ್ಡೋಜರ್ ಡಿಕ್ಕಿಯಾಗಿ ಬಿಜೆಪಿ ನಾಯಕನ ಪುತ್ರ ಸಾವು
    November 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version