ಈ ದಿನದಲ್ಲಿ ಗ್ರಹಗಳ ಸ್ಥಾನಗಳು ಕೆಲವು ರಾಶಿಯವರಿಗೆ ಅದೃಷ್ಟ, ಸಾಧನೆ ಮತ್ತು ಸಂತೋಷವನ್ನು ನೀಡಲಿದ್ದರೆ, ಇನ್ನು ಕೆಲವರಿಗೆ ಎಚ್ಚರಿಕೆ ಮತ್ತು ಸುಧಾರಣೆಯ ಅಗತ್ಯವಿದೆ.
ಇಂದಿನ ಶುಭಾಶುಭಕಾಲ : ರಾಹು ಕಾಲ 11:17 – 12:45, ಯಮಘಂಡ ಕಾಲ 15:42 – 17:11, ಗುಳಿಕ ಕಾಲ 08:20 – 09:48.
ಇಲ್ಲಿ ದ್ವಾದಶ ರಾಶಿಗಳ ಫಲಿತಾಂಶವನ್ನು ವಿವರವಾಗಿ ತಿಳಿಯೋಣ:
ಸಿಂಹ
ಮನಸ್ಸು ಅನೈತಿಕ ಚಟುವಟಿಕೆಗಳಿಂದ ವಿಮುಖವಾಗಬಹುದು. ನಿಮಗೆ ಸಂಬಂಧವಿಲ್ಲದ ವಿಚಾರದ ಬಗ್ಗೆ ಯಾರು ಏನೇ ಅಂದರೂ ಚಿಂತೆ ಬೇಡ. ಕೆಲವನ್ನು ಅನುಭವಿಗಳ ಜೊತೆ ಚರ್ಚಿಸಿ ತೀರ್ಮಾನಿಸುವುದು ಒಳ್ಳೆಯದು. ಸಮಯಕ್ಕಾಗಿ ನೀವು ಕಾಯುವುದು ಅನಿವಾರ್ಯವಾದೀತು. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾದೀತು.ವೃತ್ತಿಜೀವನದಲ್ಲಿ ಹೊಸ ಅವಕಾಶಗಳು.
ಧನು
ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಿ. ಆದರೆ, ಇದೇ ಸಮಯದಲ್ಲಿ ಮಾನಸಿಕ ತಳಮಳ ಕಾಡಬಹುದು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚನ್ನು ನೀವು ಮಾಡಬೇಕಾಗಯವುದು. ಅನಾರೋಗ್ಯದಿಂದ ಇದ್ದರೂ ನಿಮ್ಮ ಕರ್ತವ್ಯವನ್ನು ಮಾಡುವಿರಿ. ಉದ್ಯೋಗದಲ್ಲಿ ಒತ್ತಡಗಳು ಇರುವುದುರಿಂದ ಕುಟುಂಬಕ್ಕೆ ಸಮಯವನ್ನು ಕೊಡಲಾಗದು. ವೈವಾಹಿಕ ಜೀವನದ ಚಿಂತೆ ಅತಿಯಾಗಿ ಕಾಡಬಹುದು. ಆರ್ಥಿಕ ಸ್ಥಿರತೆ ಮತ್ತು ಕುಟುಂಬದಲ್ಲಿ ಸುಖ ಹೆಚ್ಚಾಗಲಿದೆ.
ಮೀನ
ಮಾನಸಿಕ ನೆಮ್ಮದಿಯು ನಿಮ್ಮ ಹಲವು ಕೆಲಸಗಳನ್ನು ಮಾಡಲು ಸಹಾಯಕವಾಗುವುದು. ಜೀವನದ ಕುರಿತು ಪೂರ್ಣ ಆತ್ಮವಿಶ್ವಾಸದಿಂದ ಇರುತ್ತಾರೆ. ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಸಂಭಾಷಣೆಯಲ್ಲಿ ಸಂಯಮದಿಂದಿರಿ. ನಿಮ್ಮ ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಖರ್ಚುಗಳು ಹೆಚ್ಚಾಗಲಿವೆ. ಪ್ರೀತಿ ಮತ್ತು ಸಂಬಂಧಗಳಲ್ಲಿ ಸಾಮರಸ್ಯ.
ವೃಷಭ
ನಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ಸಂಪತ್ತಿನಲ್ಲಿ ಹೆಚ್ಚಳವಾಗಬಹುದು. ಉದ್ಯೋಗದಲ್ಲಿನ ಒತ್ತಡಗಳು ಮನೆಯವರ ಮೇಲೆ ಸಿಟ್ಟಾಗುವಂತೆ ಮಾಡಬಹುದು. ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು. ಆರೋಗ್ಯವು ಸಾಮಾನ್ಯವಾಗಿ ಇರಲಿದೆ.ಹಣಕಾಸು ವಿಷಯದಲ್ಲಿ ಸ್ಪಷ್ಟತೆ ಇರಲಿ.
ಕನ್ಯಾ
ತಾಯಿಯಿಂದ ಆರ್ಥಿಕ ಸಹಾಯವನ್ನೂ ಸಿಗಲಿದ್ದು ತೃಪ್ತಿದಾಯಕವಾಗಲಿದೆ. ವಾಹನವನ್ನು ಖರೀದಿಸುವ ಯೋಜನೆಯನ್ನು ಮುಂದೂಡುವುದು ಉತ್ತಮ. ಚಿಂತನಶೀಲವಾಗಿ ಕೆಲಸ ಮಾಡಿ. ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಆದರೆ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಇಂದಿನ ಉದ್ಯಮವು ನಿಮ್ಮ ಹಿಡಿತದಲ್ಲಿ ಇರುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ವೃಶ್ಚಿಕ
ಸಮಾಜದಲ್ಲಿ ಗೌರವ ಸಿಗುತ್ತದೆ, ಇದರಿಂದಾಗಿ ನಿಮ್ಮ ಮನಸ್ಸು ಸಂತೋಷವಾಗಿರುತ್ತದೆ. ಅಧ್ಯಯನದಲ್ಲಿ ಆಸಕ್ತಿ ಇರುತ್ತದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು. ದುಃಸ್ವಪ್ನಗಳಿಂದ ನಿಮ್ಮ ಮನಸ್ಸು ವಿಕಾರವಾಗುವುದು. ಉನ್ನತ ವಿದ್ಯಾಭ್ಯಾಸದ ಚಿಂತೆ ಕಾಡಬಹುದು. ವಿವಾದಗಳನ್ನು ತಪ್ಪಿಸಲು ಪ್ರಯತ್ನಿಸಿ.
ಮೇಷ
ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ನಿಮಗೆ ಹತ್ತಿರವಿರುವ ಯಾರೊಬ್ಬರಿಂದ ಅಚ್ಚರಿಯ ಉಡುಗೊರೆ ಸಿಗಬಹುದು. ಮನೆಯಲ್ಲಿ ಸಂತೋಷ ಹೆಚ್ಚಾಗಬಹುದು. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಸಣ್ಣ ಪ್ರಯಾಣಗಳು ಲಾಭದಾಯಕ.
ಮಿಥುನ
ಯಾವುದೇ ಕಾರಣವಿಲ್ಲದೆ ನಿಮ್ಮ ಮನಸ್ಸು ವಿಚಲಿತವಾಗಬಹುದು. ಉದ್ಯೋಗದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಬದಲಾವಣೆ ಆಗಬಹುದು. ಆಗುವುದೆಲ್ಲ ಒಳ್ಳೆಯದಕ್ಕೆ ಎನ್ನುವುದನ್ನು ಮರೆಯಬೇಡಿ. ನಾನಾ ಪ್ರಕಾರದ ಖರ್ಚುಗಳಿಂದ ಇಂದಿನ ದಿನದ ಸಮಯವು ದುಬಾರಿ ಎನಿಸಬಹುದು. ಸಾಹಸದ ನಿರ್ಧಾರಗಳು ಯಶಸ್ಸನ್ನು ತರುತ್ತದೆ.
ಕರ್ಕಾಟಕ
ಉದ್ಯೋಗದಲ್ಲಿ ಪ್ರಗತಿಗೆ ಅವಕಾಶಗಳೂ ಇರುತ್ತವೆ. ಹಣವು ಒಮ್ಮೆ ಕೈಗೆ ಬಂದರೆ, ಸಾಹಸ ಕಾರ್ಯಗಳಲ್ಲಿ ತೊಡಗುವಿರಿ. ಸ್ವಲ್ಪ ಕುಟುಂಬದ ಸಮಸ್ಯೆಗಳಿಂದಾಗಿ, ಮನಸ್ಸು ಚಂಚಲವಾಗಿರುತ್ತದೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಆರ್ಥಿಕ ಚಿಂತೆಗಳು ಸಕಾರಾತ್ಮಕ ಮಾರ್ಗದಲ್ಲಿ ಇರಲಿ. ನಷ್ಟದ ಪ್ರಮಾಣಗಳು ಅಧಿಕವಾಗಬಹುದು. ಭಾವನಾತ್ಮಕ ಸಮತೋಲನ ಅಗತ್ಯ.
ತುಲಾ
ನಿಮ್ಮ ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನಿಮ್ಮ ಖರ್ಚುಗಳನ್ನು ನಿಯಂತ್ರಿಸಿ. ಏಕೆಂದರೆ ಬಹಳಷ್ಟು ಖರ್ಚುಗಳು ಇರುತ್ತವೆ. ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಇಂದು ಅನಿರೀಕ್ಷಿತ ಪ್ರಶಂಸೆ ಹಾಗು ಗೌರವಗಳು ಸಿಗಲಿವೆ. ಆಲಸ್ಯದಿಂದ ಹೊರಬರುವ ಮನಸ್ಸಾಹುವುದು. ಭಾವನಾತ್ಮಕ ಚಿಂತನೆಗಳು ನಿಮ್ಮ ಮೇಲೆ ಸಕಾರಾತ್ಮಕ ಪರಿಣಾಮವನ್ನು ನೀಡಬಹುದು. ಮಕ್ಕಳ ಭವಿಷ್ಯದ ಬಗ್ಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಿರಿ.ಸಾಮಾಜಿಕ ಜವಾಬ್ದಾರಿಗಳು ಹೆಚ್ಚಾಗಬಹುದು.
ಮಕರ
ಆರ್ಥಿಕವಾಗಿ ಯಾವುದೇ ಭಯವಿಲ್ಲ. ಹಣಕಾಸು ಸ್ಥಿತಿ ಉತ್ತಮವಾಗಿರಲಿದೆ. ಸಂಬಂಧಗಳಲ್ಲಿ ಸಂಯಮದಿಂದಿರಿ. ಅನಗತ್ಯ ಕೋಪವನ್ನು ನಿಯಂತ್ರಿಸಿ. ವಿದ್ಯಾಭ್ಯಾಸದ ಗಮನವು ಬೇರೆ ಕಡೆಗೆ ಹೋಗಬಹುದು. ದೀರ್ಘಕಾಲದ ರೋಗದಿಂದ ಬಳಲಿಕೆಯು ನಿಮಗೆ ಅಭ್ಯಾಸವಾಗಲಿದೆ. ಶತ್ರುಗಳ ಕಾಟಗಳು ನಿಮ್ಮ ಉತ್ಸಾಹವನ್ನು ಭಂಗ ಮಾಡಬಹುದು. ಕೆಲಸದ ಒತ್ತಡವಿದೆ, ಆದರೆ ಫಲಿತಾಂಶ ಉತ್ತಮ.
ಕುಂಭ
ಆತ್ಮವಿಶ್ವಾಸದ ಕೊರತೆ ಕಾಡಬಹುದು.ಇದರ ಹೊರತಾಗಿಯೂ, ನೀವು ಕಚೇರಿಯಲ್ಲಿ ಎಲ್ಲರ ಗಮನ ಸೆಳೆಯುವಿರಿ. ಹಳೆಯ ಸ್ನೇಹಿತನ ಭೇಟಿಯ ಸಾಧ್ಯತೆ. ಕಾರ್ಯ ಕ್ಷೇತ್ರದಲ್ಲಿ ಒತ್ತಡವಿರುವ ಕಾರಣ ಮನಸ್ಸಿಗೆ ಸಿಗಬೇಕಾದ ಶಾಂತಿಯ ಕೊರೆತೆಯೂ ಇರಲಿದೆ. ದಾಂಪತ್ಯದಲ್ಲಿ ನಿರಾಸಕ್ತಿ ಉಂಟಾಗಬಹುದು. ಪಾಲುದಾರಿಕೆಯಲ್ಲಿ ಸಮಸ್ಯೆ ಕಾಣಿಸುವುದು.ಸೃಜನಶೀಲತೆಗೆ ಅನುಕೂಲಕರ ಸಮಯ.
ಈ ದಿನದಲ್ಲಿ ಧನು, ಸಿಂಹ, ಮತ್ತು ಮೀನ ರಾಶಿಯವರು ಅದೃಷ್ಟವನ್ನು ಪೂರ್ಣವಾಗಿ ಬಳಸಿಕೊಳ್ಳಬಹುದು. ವೃಷಭ, ಕನ್ಯಾ, ಮತ್ತು ವೃಶ್ಚಿಕ ರಾಶಿಯವರು ತಮ್ಮ ನಿರ್ಧಾರಗಳಲ್ಲಿ ಸೂಕ್ಷ್ಮರಾಗಿರಬೇಕು. ಇತರ ರಾಶಿಗಳು ಸಾಮಾನ್ಯ ಫಲವನ್ನು ಅನುಭವಿಸುತ್ತಾರೆ.