ಟೀಂ ಇಂಡಿಯಾ 2025ರ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದೆ.. ಬಾಂಗ್ಲಾದೇಶ ಹಾಗೂ ಪಾಕಿಸ್ತಾನವನ್ನ ಸೋಲಿಸಿ ಸೆಮಿಫೈನಲ್ ಕೂಡ ಪ್ರವೇಶ ಮಾಡಿದೆ.. ಗ್ರೂಪ್‌ನ ಎ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗಲಿದೆ. ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್ ಸ್ಥಾನವನ್ನ ಖಾತ್ರಿಪಡಿಸಿಕೊಂಡಿವೆ. ನಾಳೆ ನಡೆಯಲಿರುವ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆ ಆ ತಂಡವು ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆಯಲಿದೆ..
ಸದ್ಯ ಎರಡು ತಂಡಗಳು ಉತ್ತಮ ಫಾರ್ಮ್‌ನಲ್ಲಿದ್ದು, ನಾಳೆ ನಿರ್ಣಾಯಕ ಹೋರಾಟಕ್ಕೆ ವೇದಿಕೆ ಸಜ್ಜಾಗಲಿದೆ. ಟೀಂ ಇಂಡಿಯಾ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧ ಗೆಲುವು ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿದೆ. ಟಾಮ್ ಲಾಥಮ್ ನೇತೃತ್ವದ ನ್ಯೂಜಿಲೆಂಡ್ ಕೂಡ ಅದೇ ಎದುರಾಳಿಗಳ ವಿರುದ್ಧ ಜಯಗಳಿಸಿ ಸೆಮಿಫೈನಲ್ ಸ್ಥಾನವನ್ನು ಖಾಯಂ ಪಡಿಸಿಕೊಂಡಿದೆ. ಇನ್ನೂ ವಿರಾಟ್ ಕೊಹ್ಲಿ 300ನೇ ಏಕದಿನ ಪಂದ್ಯವನ್ನು ಆಡಲು ಉತ್ಸುಕರಾಗಿದ್ದಾರೆ. ನಾಳೆ ಮಧ್ಯಾಹ್ನ 2:30ಕ್ಕೆ ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು:
ಭಾರತ ತಂಡ: ರೋಹಿತ್ ಶರ್ಮಾ(C), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ರಿಷಬ್ ಪಂತ್, ವಾಷಿಂಗ್ಟನ್ ಸುಂದರ್, ಅರುಣ್ ಚಕ್ರವರ್ತಿ, ವರುಣ್ ಚಕ್ರವರ್ತಿ
ನ್ಯೂಜಿಲೆಂಡ್ ತಂಡ: ವಿಲ್ ಯಂಗ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ರಾಚಿನ್ ರವೀಂದ್ರ, ಟಾಮ್ ಲ್ಯಾಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್(C), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ಒರೂರ್ಕ್, ಡ್ಯಾರಿಲ್ ಮಿಚೆಲ್, ನಾಥನ್ ಸ್ಮಿತ್, ಮಾರ್ಕ್ ಚಾಪ್‌ಮನ್, ಜಾಕೋಬ್ ಡಫಿ.