IND vs NAM: ಇಂದು ಅಭಿಷೇಕ್ ಶರ್ಮಾ ಆಟ ಆಡುತ್ತಾರಾ?

BeFunky collage 2026 02 12T144127.707

ಟಿ20 ವಿಶ್ವಕಪ್ 2026ರಲ್ಲಿ ಭಾರತ ತಂಡ ತನ್ನ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. USA ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್‌ಗಳ ಜಯ ಸಾಧಿಸಿದ ಟೀಮ್ ಇಂಡಿಯಾ ಇಂದು (ಫೆಬ್ರವರಿ 12) ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ (ಗುಂಪು ಹಂತದ 18ನೇ ಪಂದ್ಯ) ಅಭಿಷೇಕ್ ಶರ್ಮಾ ಕಣಕ್ಕಿಳಿಯುವುದು ಬಹುತೇಕ ಅನುಮಾನಾಸ್ಪದವಾಗಿದೆ.

ಅಭಿಷೇಕ್ ಶರ್ಮಾ ಕಳೆದ ಎರಡು ದಿನಗಳ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಡಿಸ್ಚಾರ್ಜ್ ಆಗಿ ತಂಡಕ್ಕೆ ಸೇರಿಕೊಂಡಿದ್ದಾರೆ. ಆದರೆ ಗುರುವಾರ ಯಾವುದೇ ನೆಟ್ ಪ್ರಾಕ್ಟೀಸ್‌ನಲ್ಲಿ ಭಾಗವಹಿಸಿಲ್ಲ. ತಂಡದ ಮೂಲಗಳ ಪ್ರಕಾರ, ಅವರಿಗೆ ಸಂಪೂರ್ಣ ಚೇತರಿಕೆಗಾಗಿ ಇನ್ನು ಕನಿಷ್ಠ ಎರಡು ದಿನಗಳ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಆಡುವ ಸಾಧ್ಯತೆ ಬಹಳ ಕಡಿಮೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಇಂದಿನ ಪಂದ್ಯಕ್ಕೆ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅಭಿಷೇಕ್ ಶರ್ಮಾ ಬದಲಿಗೆ ಇಶಾನ್ ಕಿಶನ್ ಅಥವಾ ಸಂಜು ಸ್ಯಾಮ್ಸನ್ ಆರಂಭಿಕ ದಾಂಡಿಗರಾಗಿ ಕಣಕ್ಕಿಳಿಯುವ ನಿರೀಕ್ಷೆ ಇದೆ. ಅಲ್ಲದೆ ಜಸ್‌ಪ್ರೀತ್ ಬುಮ್ರಾ ತಂಡಕ್ಕೆ ಮರಳುವ ಸಾಧ್ಯತೆಯೂ ದೃಢವಾಗಿದೆ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ XI (IND vs NAM):

ಈ ಪಂದ್ಯದಲ್ಲಿ ಭಾರತ ತಂಡ ಸ್ಥಿರ ಆರಂಭವನ್ನು ಬಯಸುತ್ತಿದ್ದು, ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಜೋಡಿ ಆರಂಭದಲ್ಲಿ ದೊಡ್ಡ ಸ್ಕೋರ್ ನಿರ್ಮಾಣ ಮಾಡಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ನಮೀಬಿಯಾ ವಿರುದ್ಧ ಭಾರತ ಗೆದ್ದರೆ ಸೂಪರ್-8ಕ್ಕೆ ದೊಡ್ಡ ಹೆಜ್ಜೆ ಇಡುವುದು ಖಚಿತ.

 

Exit mobile version