ಐಸಿಸಿ ಚಾಂಪಿಯನ್ಸ್ ಟ್ರೋಫಿ 2025: ಭಾರತ-ನ್ಯೂಜಿಲೆಂಡ್ ನಡುವೆ ರೋಚಕ ಹಣಾಹಣಿ!

Untitled design 2025 03 09t083232.371

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಇಂದು (ಮಾರ್ಚ್ 9, ಭಾನುವಾರ) ದುಬೈಯಲ್ಲಿ ಮುಖಾಮುಖಿಯಾಗಲಿದೆ. ಭಾರತೀಯ ಸಮಯದಂದು ಮಧ್ಯಾಹ್ನ 2:30ಕ್ಕೆ ಆರಂಭವಾಗುವ ಈ ಪಂದ್ಯದಲ್ಲಿ, ಟೀಮ್ ಇಂಡಿಯಾ ತನ್ನ ಮೂರನೇ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಸಿದ್ಧವಾಗಿದೆ. 2000ರ ಫೈನಲ್‌ನಲ್ಲಿ ನ್ಯೂಜಿಲೆಂಡ್‌ಗೆ ಸೋಲಿಸಿದ ಸೇಡು ತೀರಿಸಿಕೊಳ್ಳಲು ರೋಹಿತ್ ಶರ್ಮಾ ನೇತೃತ್ವದ ತಂಡ ಸಜ್ಜಾಗಿದೆ. ಇದೇ ಸಮಯದಲ್ಲಿ, ನ್ಯೂಜಿಲೆಂಡ್‌ನ ನಾಯಕ ಮಿಚೆಲ್ ಸ್ಯಾಂಟ್ನರ್ ತಂಡವೂ 25 ವರ್ಷಗಳ ನಂತರ ಟ್ರೋಫಿ ಮುಡಿಗೇರಿಸುವ ಗುರಿ ಹೊಂದಿದೆ.

ಪಿಚ್ ವರದಿ ಮತ್ತು ಹೆಡ್-ಟು-ಹೆಡ್

ದುಬೈ ಕ್ರೀಡಾಂಗಣದ ಪಿಚ್ ನಿಧಾನಗತಿಯದ್ದಾಗಿದ್ದು, ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ನೆರವಾಗಲಿದೆ. ನಂತರ ಬ್ಯಾಟ್ಸ್‌ಮನ್‌ಗಳಿಗೆ ರನ್ ಮಾಡುವುದು ಕಠಿಣವಾಗಬಹುದು. ಸ್ಪಿನ್ನರ್‌ಗಳು ಮಧ್ಯಮ ಓವರ್‌ಗಳಲ್ಲಿ ಹೆಚ್ಚು ಪ್ರಭಾವ ಬೀರುವ ಸಾಧ್ಯತೆ ಇದೆ.

ಈ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 218, ಎರಡನೇ ಇನ್ನಿಂಗ್ಸ್‌ನ ಸರಾಸರಿ 198 ರನ್‌ಗಳು. ಗರಿಷ್ಠ ಸ್ಕೋರ್ 355, ಕನಿಷ್ಠ ಸ್ಕೋರ್ 91 ರನ್. ಹೀಗಾಗಿ, ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೇ ಹೆಚ್ಚು ಲಾಭವಾಗುವ ನಿರೀಕ್ಷೆ ಇದೆ.

ಪಂದ್ಯಕ್ಕೆ ಪ್ರಮುಖ ಆಟಗಾರರು
ಭಾರತ:
ನ್ಯೂಜಿಲೆಂಡ್:
ಸಂಭಾವ್ಯ ಪ್ಲೇಯಿಂಗ್-11

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್.

ನ್ಯೂಜಿಲೆಂಡ್: ರಚಿನ್ ರವೀಂದ್ರ, ವಿಲ್ ಯಂಗ್, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಮ್ಯಾಟ್ ಹೆನ್ರಿ, ವಿಲಿಯಂ ಒ’ರೂರ್ಕ್.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಹೋರಾಟದಲ್ಲಿ ಯಾರು ಪ್ರಶಸ್ತಿ ಮುಡಿಗೇರಿಸಿಕೊಳ್ಳುತ್ತಾರೆ ಎಂಬುದನ್ನು  ಕ್ರೀಡಾಭಿಮಾನಿಗಳು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಈ ರೋಚಕ ಹಣಾಹಣಿಯ ಭವಿಷ್ಯ ಇನ್ನೇನು ಕೆಲವೇ ಗಂಟೆಗಳಲ್ಲಿ ನಿರ್ಧಾರವಾಗಲಿದೆ.

 

Exit mobile version