• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 4, 2026 - 11:25 pm
in Flash News, ಕ್ರೀಡೆ
0 0
0
ಗೆ (4)

RelatedPosts

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ

ADVERTISEMENT
ADVERTISEMENT

ಮ್ಯಾಂಚೆಸ್ಟರ್: ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದ ಕಾರಣ, ಈ ಗೆಲುವಿನೊಂದಿಗೆ ಇಂಗ್ಲೆಂಡ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಉಭಯ ತಂಡಗಳ ನಡುವಿನ ಮೂರನೇ ಟಿ20 ಪಂದ್ಯ ಜುಲೈ 7ರಂದು ನಡೆಯಲಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ ಮತ್ತು ವೈಭವ್ ಸೂರ್ಯವಂಶಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್‌ಗೆ 50 ರನ್‌ಗಳ ಜೊತೆಯಾಟ ಮೂಡಿಸಿದ ಬಳಿಕ ವೈಭವ್ ಸೂರ್ಯವಂಶಿ 14 ರನ್ ಗಳಿಸಿ ಸ್ಟಂಪ್ ಔಟ್ ಆದರು.

ಇದಾದ ಬಳಿಕ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಕ್ರೀಸ್‌ನಲ್ಲಿ ನೆಲೆಯೂರಿದರು. ಅಭಿಷೇಕ್ ಆಕ್ರಮಣಕಾರಿ ಆಟವಾಡಿ ಕೇವಲ 24 ಎಸೆತಗಳಲ್ಲಿ 43 ರನ್ ಗಳಿಸಿ ತಂಡದ ರನ್‌ರೇಟ್ ಹೆಚ್ಚಿಸಿದರು. ಪವರ್‌ಪ್ಲೇ ಅಂತ್ಯದ ವೇಳೆಗೆ ಭಾರತ 65 ರನ್ ಕಲೆಹಾಕಿತ್ತು. ಆದರೆ ದೊಡ್ಡ ಹೊಡೆತಕ್ಕೆ ಮುಂದಾದ ಅಭಿಷೇಕ್ ವಿಕೆಟ್ ಒಪ್ಪಿಸಿದರು.

ನಾಯಕ ಶ್ರೇಯಸ್ ಅಯ್ಯರ್ ಕೂಡ ಉತ್ತಮ ಲಯದಲ್ಲಿ ಕಾಣಿಸಿಕೊಂಡು 22 ಎಸೆತಗಳಲ್ಲಿ 37 ರನ್ ಗಳಿಸಿದರು. ಮತ್ತೊಂದೆಡೆ ಇಶಾನ್ ಕಿಶನ್ ನಿಧಾನಗತಿಯ ಬ್ಯಾಟಿಂಗ್ ನಡೆಸಿದರು. ಅವರು 49 ರನ್ ಗಳಿಸಲು 40 ಎಸೆತಗಳನ್ನು ಎದುರಿಸಿದ್ದು, ಮಧ್ಯದ ಓವರ್‌ಗಳಲ್ಲಿ ಭಾರತದ ರನ್ ವೇಗ ಕುಂಠಿತಗೊಳ್ಳಲು ಕಾರಣವಾಯಿತು.

ನಂತರ ಬಂದ ಶಿವಂ ದುಬೆ ಕೇವಲ 5 ರನ್ ಗಳಿಸಿದರೆ, ಅಕ್ಷರ್ ಪಟೇಲ್ 2 ರನ್‌ಗೆ ಔಟಾದರು. ಆದರೆ ಕೊನೆಯ ಓವರ್‌ನಲ್ಲಿ ತಿಲಕ್ ವರ್ಮಾ ಸಿಡಿಲಬ್ಬರ ತೋರಿಸಿದರು. ಜೋಫ್ರಾ ಆರ್ಚರ್ ಎಸೆದ 20ನೇ ಓವರ್‌ನ ಮೊದಲ ಮೂರು ಎಸೆತಗಳಲ್ಲಿ ಸತತ ಎರಡು ಸಿಕ್ಸರ್ ಹಾಗೂ ಒಂದು ಬೌಂಡರಿ ಸಿಡಿಸುವ ಮೂಲಕ ತಂಡದ ಮೊತ್ತವನ್ನು 190ಕ್ಕೆ ಕೊಂಡೊಯ್ದರು. ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 190 ರನ್ ದಾಖಲಿಸಿತು.

191 ರನ್‌ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್‌ಗೆ ಆರಂಭದಲ್ಲೇ ಭಾರೀ ಆಘಾತ ಎದುರಾಯಿತು. ಅರ್ಷದೀಪ್ ಸಿಂಗ್ ಎಸೆದ ಮೊದಲ ಓವರ್‌ನಲ್ಲೇ ಫಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಇಬ್ಬರೂ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಭಾರತ ಪಂದ್ಯದ ಮೇಲೆ ಹಿಡಿತ ಸಾಧಿಸಿದಂತೆ ಕಂಡಿತು.

ಆದರೆ ನಾಯಕ ಹ್ಯಾರಿ ಬ್ರೂಕ್ ಪರಿಸ್ಥಿತಿಯನ್ನು ಬದಲಿಸಿದರು. ಕೇವಲ 15 ಎಸೆತಗಳಲ್ಲಿ 39 ರನ್ ಸಿಡಿಸಿ ತಂಡವನ್ನು ಸಂಕಷ್ಟದಿಂದ ಹೊರತೆಗೆದರು. ಬ್ರೂಕ್ ಔಟಾದ ಬಳಿಕ ಜೇಕಬ್ ಬೆಥೆಲ್ ಮತ್ತು ಟಾಮ್ ಬ್ಯಾಂಟನ್ ಜವಾಬ್ದಾರಿಯುತ ಜೊತೆಯಾಟ ನಡೆಸಿದರು. ಇಬ್ಬರೂ ಭಾರತದ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿ ತಂಡವನ್ನು 100 ರನ್ ಗಡಿ ದಾಟಿಸಿದರು.

ಟಾಮ್ ಬ್ಯಾಂಟನ್ 39 ರನ್ ಗಳಿಸಿ ಔಟಾದರೆ, ವಿಲ್ ಜ್ಯಾಕ್ಸ್ 9 ರನ್‌ಗೆ ಎಲ್‌ಬಿಡಬ್ಲ್ಯೂ ಆದರು. ಆದರೆ ಮತ್ತೊಂದೆಡೆ ಜೇಕಬ್ ಬೆಥೆಲ್ ಅದ್ಭುತ ಆಟ ಮುಂದುವರಿಸಿದರು. ಕೇವಲ 39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು ಕೊನೆಯ ಹಂತದಲ್ಲಿ ಪಂದ್ಯದ ಗತಿಯನ್ನು ಸಂಪೂರ್ಣವಾಗಿ ಬದಲಿಸಿದರು.

ಇಂಗ್ಲೆಂಡ್‌ಗೆ ಕೊನೆಯ ಐದು ಓವರ್‌ಗಳಲ್ಲಿ 59 ರನ್ ಅಗತ್ಯವಿದ್ದಾಗ, ರವಿ ಬಿಷ್ಣೋಯ್ ಎಸೆದ 17ನೇ ಓವರ್ ಪಂದ್ಯಕ್ಕೆ ತಿರುವು ನೀಡಿತು. ಆ ಓವರ್‌ನಲ್ಲಿ ಇಂಗ್ಲೆಂಡ್ ಬ್ಯಾಟರ್‌ಗಳು ಬರೋಬ್ಬರಿ 29 ರನ್ ಕಲೆಹಾಕಿ ಭಾರತದ ಮೇಲೆ ಒತ್ತಡ ಹೆಚ್ಚಿಸಿದರು. ಇದಾದ ಬಳಿಕ ಗೆಲುವಿನ ಲೆಕ್ಕಾಚಾರ ಸುಲಭವಾಯಿತು.

ಅಂತಿಮವಾಗಿ ಜೇಕಬ್ ಬೆಥೆಲ್ 46 ಎಸೆತಗಳಲ್ಲಿ 76 ರನ್‌ಗಳ ಅಜೇಯ ಸ್ಫೋಟಕ ಇನ್ನಿಂಗ್ಸ್ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ 5 ಸಿಕ್ಸರ್ ಹಾಗೂ 5 ಬೌಂಡರಿಗಳು ಸೇರಿದ್ದವು. ಬೆಥೆಲ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ 19 ಓವರ್‌ಗಳಲ್ಲೇ 191 ರನ್ ಗಳಿಸಿ 4 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version