ಮೊದಲ ಏಕದಿನ ಪಂದ್ಯ ದೆಹಲಿಯಿಂದ ವಿಶಾಖಪಟ್ಟಣಕ್ಕೆ ಶಿಫ್ಟ್!

ಗುರ್ಲಾಪುರದಲ್ಲಿ (20)

ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮುಂಬರುವ ಸೀಮಿತ ಓವರ್‌ಗಳ ಸರಣಿಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆಯಾಗಿದೆ. ಡಿಸೆಂಬರ್‌ನಲ್ಲಿ ನಡೆಯಲಿರುವ ಏಕದಿನ ಸರಣಿಯ ಮೊದಲ ಪಂದ್ಯವನ್ನು ದೆಹಲಿಯಿಂದ ವಿಶಾಖಪಟ್ಟಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತಿಳಿಸಿದೆ. ಈ ಪಂದ್ಯ ಆರಂಭದಲ್ಲಿ ಡಿಸೆಂಬರ್ 13ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಇದೀಗ ಸ್ಥಳ ಬದಲಾವಣೆಯಾಗಿದೆ.

ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCA) ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಬಿಸಿಸಿಐಗೆ ಮನವಿ ಮಾಡಿತ್ತು. ಇದರ ಜೊತೆಗೆ ದೆಹಲಿಯ ಹವಾಮಾನ ಪರಿಸ್ಥಿತಿಯನ್ನೂ ಪರಿಗಣಿಸಿ ಪಂದ್ಯವನ್ನು ಸ್ಥಳಾಂತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಡಿಸೆಂಬರ್ 13ರಂದು ನಡೆಯಲಿರುವ ಮೊದಲ ಏಕದಿನ ಪಂದ್ಯವು ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕೊಹ್ಲಿಗೆ ಅದೃಷ್ಟದ ಮೈದಾನ!

ಮೊದಲ ಏಕದಿನ ಪಂದ್ಯ ವಿಶಾಖಪಟ್ಟಣಕ್ಕೆ ಸ್ಥಳಾಂತರವಾಗಿರುವುದು ವಿರಾಟ್ ಕೊಹ್ಲಿ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ. ಏಕೆಂದರೆ ಈ ಮೈದಾನದಲ್ಲಿ ಕೊಹ್ಲಿ ಅತ್ಯುತ್ತಮ ಬ್ಯಾಟಿಂಗ್ ದಾಖಲೆ ಹೊಂದಿದ್ದಾರೆ. ಇಲ್ಲಿ ಆಡಿರುವ ಎಂಟು ಏಕದಿನ ಪಂದ್ಯಗಳಲ್ಲಿ ಕೊಹ್ಲಿ 108.66ರ ಸರಾಸರಿಯಲ್ಲಿ ಬರೋಬ್ಬರಿ 652 ರನ್ ಗಳಿಸಿದ್ದಾರೆ.

ಅಷ್ಟೇ ಅಲ್ಲ, ಈ ಮೈದಾನದಲ್ಲಿ ಮೂರು ಶತಕ ಮತ್ತು ಮೂರು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹೀಗಾಗಿ ವಿಶಾಖಪಟ್ಟಣದ ಮೈದಾನ ಕೊಹ್ಲಿಗೆ ಅದೃಷ್ಟದ ತಾಣ ಎಂದೇ ಪರಿಗಣಿಸಲಾಗಿದೆ. ಇದೀಗ ಶ್ರೀಲಂಕಾ ವಿರುದ್ಧ ಇದೇ ಮೈದಾನದಲ್ಲಿ ಪಂದ್ಯ ನಡೆಯಲಿರುವುದರಿಂದ ಅಭಿಮಾನಿಗಳು ಕೊಹ್ಲಿಯ ಬ್ಯಾಟಿಂಗ್ ಪ್ರದರ್ಶನವನ್ನು ಎದುರು ನೋಡುತ್ತಿದ್ದಾರೆ.

ಇತ್ತೀಚಿನ ಪಂದ್ಯಗಳಲ್ಲಿ ಉತ್ತಮ ಲಯದಲ್ಲಿರುವ ಕೊಹ್ಲಿ, ವಿಶಾಖಪಟ್ಟಣದಲ್ಲಿ ಮತ್ತೊಂದು ಶತಕ ಸಿಡಿಸುತ್ತಾರಾ ಎಂಬ ಕುತೂಹಲವೂ ಹೆಚ್ಚಾಗಿದೆ. ಆದರೆ ಪಂದ್ಯದಲ್ಲಿ ಅವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಭಾರತ-ಶ್ರೀಲಂಕಾ ಏಕದಿನ ಸರಣಿ ವೇಳಾಪಟ್ಟಿ

ಪಂದ್ಯ ದಿನಾಂಕ ಸ್ಥಳ ಸಮಯ
ಮೊದಲ ಏಕದಿನ ಡಿ.13 ವಿಶಾಖಪಟ್ಟಣ ಮಧ್ಯಾಹ್ನ 2
ಎರಡನೇ ಏಕದಿನ ಡಿ.16 ಬೆಂಗಳೂರು ಮಧ್ಯಾಹ್ನ 2
ಮೂರನೇ ಏಕದಿನ ಡಿ.19 ಅಹಮದಾಬಾದ್ ಮಧ್ಯಾಹ್ನ 2

ಭಾರತ-ಶ್ರೀಲಂಕಾ ಟಿ20 ಸರಣಿ ವೇಳಾಪಟ್ಟಿ

ಪಂದ್ಯ ದಿನಾಂಕ ಸ್ಥಳ ಸಮಯ
ಮೊದಲ ಟಿ20 ಡಿ.22 ರಾಜ್‌ಕೋಟ್ ಸಂಜೆ 7
ಎರಡನೇ ಟಿ20 ಡಿ.24 ಕಟಕ್ ಸಂಜೆ 7
ಮೂರನೇ ಟಿ20 ಡಿ.27 ಪುಣೆ ಸಂಜೆ 7

ಭಾರತ ಮತ್ತು ಶ್ರೀಲಂಕಾ ನಡುವಿನ ಸರಣಿಯಲ್ಲಿ ಏಕದಿನ ಹಾಗೂ ಟಿ20 ಸೇರಿ ಒಟ್ಟು ಆರು ಪಂದ್ಯಗಳು ನಡೆಯಲಿವೆ.

Exit mobile version